• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು-ವಿಜಯಪುರ ರೈಲು ಪ್ರಯಾಣ: 14 ರಿಂದ 10 ಗಂಟೆಗೆ ಇಳಿಸಲು ತ್ವರಿತ ಕ್ರಮಕ್ಕೆ ಎಂ.ಬಿ.ಪಾಟೀಲ

ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ: ಭೂಸ್ವಾಧೀನಕ್ಕೆ ಗಡುವು ಕೊಟ್ಟ ಸಚಿವ ಎಂ ಬಿ ಪಾಟೀಲ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 16, 2025 - 5:54 pm
in ಕರ್ನಾಟಕ
0 0
0
Film (58)

ರಾಜ್ಯ ರಾಜಧಾನಿ ಮತ್ತು ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿರುವ 14-15 ಗಂಟೆಗಳಿಂದ ಕನಿಷ್ಠ 10 ಗಂಟೆಗಳಿಗೆ ಇಳಿಸುವ ಸಂಬಂಧ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಈ‌ ನಿಟ್ಟಿನಲ್ಲಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಬುಧವಾರ ಅವರು ಇಲ್ಲಿ ಸಂಬಂಧಿಸಿದ ಇಲಾಖೆಗಳು ಮತ್ತು ನೈರುತ್ಯ ರೈಲ್ವೆಯ ಉನ್ನತಾಧಿಕಾರಿಗಳ ಜತೆ ರಾಜ್ಯದ ಎಲ್ಲ ರೈಲ್ವೇ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂಬಂಧ ಸದ್ಯದಲ್ಲೇ ಮತ್ತೊಂದು ಸಭೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

RelatedPosts

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ಗುಜರಿಗೆ ಹಾಕಿ: ಸರ್ಕಾರದಿಂದ ಮಹತ್ವದ ಆದೇಶ

ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡಗೆ ಆಯ್ಕೆ ಅಸಿಂಧು ಎಂದ ಕರ್ನಾಟಕ ಹೈಕೋರ್ಟ್

ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ..!

ADVERTISEMENT
ADVERTISEMENT

ಬೆಂಗಳೂರು- ವಿಜಯಪುರ ನಡುವೆ ಸಂಚರಿಸುವ ಕೆಲವೊಂದಿಷ್ಟು ರೈಲುಗಳನ್ನಾದರೂ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸುವಂತೆ ಮಾಡಿದರೆ ಆ ಭಾಗದ ಜನರಿಗೆ ಹೆಚ್ಚಿನ‌ ಅನುಕೂಲ ಆಗುತ್ತದೆ ಎನ್ನುವುದನ್ನು ಸಚಿವರು ಅಂಕಿ ಸಂಖ್ಯೆ ಸಮೇತ ರೈಲ್ವೆ ಅಧಿಕಾರಿಗಳಿಗೆ ವಿವರಿಸಿದರು.

Whatsapp image 2025 04 16 at 5.17.49 pm

‘ಬೆಂಗಳೂರು-ವಿಜಯಪುರ ನಡುವೆ 712 ಕಿ.ಮೀ. (ರೈಲ್ವೆ ದೂರ) ಅಂತರವಿದ್ದು, ಕೆಲವೊಮ್ಮೆ ಪ್ರಯಾಣಕ್ಕೆ 15-16 ಗಂಟೆ ಹಿಡಿಯುತ್ತಿದ್ದು, ತ್ರಾಸದಾಯಕವಾಗಿದೆ. ಬೆಂಗಳೂರಿನಿಂದ ವಿಜಯಪುರ, ಬಾಗಲಕೋಟೆ ಕಡೆಗೆ ಹೋಗುವ ರೈಲುಗಳು ಈಗ ಹುಬ್ಬಳ್ಳಿ ಮುಖ್ಯ ರೈಲು ನಿಲ್ದಾಣಕ್ಕೆ ಹೋಗಿ, ಎಂಜಿನ್ ಬದಲಿಸಿಕೊಂಡು ಹೋಗಬೇಕಾಗಿವೆ. ಜತೆಗೆ ಗದಗದಲ್ಲಿ ಕೂಡ ಎಂಜಿನ್ ಬದಲಾವಣೆಗೆ ನಿಲ್ಲಬೇಕಾಗಿದ್ದು, ಇದರಿಂದ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ, ರೈಲುಗಳು ಹುಬ್ಬಳ್ಳಿ ದಕ್ಷಿಣ ರೈಲು ನಿಲ್ದಾಣದಲ್ಲೇ (ಹುಬ್ಭಳ್ಳಿ ಬೈಪಾಸ್) ಗದಗದ ಕಡೆಗೆ ತಿರುವು ಪಡೆದುಕೊಂಡು ಸಂಚರಿಸಬೇಕು’ ಎಂದಿದ್ದಾರೆ.

ಹುಬ್ಭಳ್ಳಿ ಬೈಪಾಸ್ ಮೂಲಕ ಈಗಾಗಲೇ ಗೂಡ್ಸ್ ರೈಲುಗಳು ಮುಂದಕ್ಕೆ ಸಾಗುತ್ತಿವೆ. ಪ್ರಯಾಣಿಕರ ರೈಲುಗಳೂ ಈ ಮಾರ್ಗದಲ್ಲಿ ಸಂಚಾರ ಆರಂಭಿಸಬೇಕು. ಇದರಿಂದ ಬೆಂಗಳೂರಿನಿಂದ ಹುಬ್ಬಳ್ಳಿಗೆ ಈ ರೈಲುಗಳನ್ನು ಏರುವವರ ಸಂಖ್ಯೆ ಕಡಿಮೆಯಾಗಲಿದೆ. ಮುಂದೆ ಗದಗದಲ್ಲೂ ಬೈಪಾಸ್ ಇದ್ದು, ಅಲ್ಲಿಂದಲೇ ವಿಜಯಪುರದ ಕಡೆಗೆ ರೈಲು ಸಾಗುವಂತೆ ಮಾಡಬೇಕು. ಇದರಿಂದ, ಹುಬ್ಭಳ್ಳಿ ಮತ್ತು ಗದಗಿನಲ್ಲಿ ಎಂಜಿನ್ ಬದಲಾವಣೆಗೆ ಸಮಯ ವ್ಯರ್ಥವಾಗುವುದು ತಪ್ಪಲಿದೆ. ಇದೊಂದು ಸಣ್ಣ ಉಪಕ್ರಮದಿಂದ ಬೆಂಗಳೂರು-ವಿಜಯಪುರ ನಡುವಿನ ಪ್ರಯಾಣದಲ್ಲಿ ಕನಿಷ್ಠ 2 ಗಂಟೆಗಳಷ್ಟು ಸಮಯ ಉಳಿಸಬಹುದು ಎಂದು ಅವರು ಹೇಳಿದ್ದಾರೆ. ಸಚಿವರ ಈ ಚಿಂತನೆಯನ್ನು ರೈಲ್ವೆ ಅಧಿಕಾರಿಗಳು ಮೆಚ್ಚಿಕೊಂಡಿದ್ದು, ನೈರುತ್ಯ ರೈಲ್ವೆ ಉನ್ನತಾಧಿಕಾರಿಗಳ ಜತೆ ಮಾತುಕತೆ ನಡೆಸುವ ಭರವಸೆ ನೀಡಿದರು.

Whatsapp image 2025 04 16 at 5.17.50 pm (1)

ಈಗ ಗದಗ-ವಿಜಯಪುರ ನಡುವೆ ಜೋಡಿಹಳಿ ಹಾಕುವ ಕೆಲಸ ಮುಕ್ತಾಯದ ಹಂತಕ್ಕೆ ಬಂದಿದ್ದು, ಬಾಗಲಕೋಟೆ ಸಮೀಪ ಮಾತ್ರ ಸ್ವಲ್ಪ ಕಾಮಗಾರಿ ಬಾಕಿ ಇದೆ. ಜೊತೆಗೆ ಈಗ ನಡೆಯುತ್ತಿರುವ ರೈಲ್ವೆ ವಿದ್ಯುದೀಕರಣವನ್ನು ಆದಷ್ಟು ಬೇಗನೆ ಮುಗಿಸಿದರೆ, ಈ ಮಾರ್ಗದಲ್ಲಿ ವಂದೇಭಾರತ್ ರೈಲು ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಬಹುದು ಎಂದು ಸಚಿವರು ವಿವರಿಸಿದ್ದಾರೆ.

ಧಾರವಾಡ-ಕಿತ್ತೂರು-ಬೆಳಗಾವಿ ಮಾರ್ಗ

ಕಿತ್ತೂರು ಕರ್ನಾಟಕ ಭಾಗದಲ್ಲಿ ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ಮಾರ್ಗಕ್ಕೆ ಮಂಜೂರಾತಿ ಸಿಕ್ಕಿದೆ. ಆದರೆ, ಮಮ್ಮಿಗಟ್ಟಿ ಬಳಿ ಮಾರ್ಗ ಬದಲಾವಣೆಗೆ ಒತ್ತಡ ಬರುತ್ತಿದೆ. ಹೀಗಾಗಿ ಭೂಸ್ವಾಧೀನ ತಡವಾಗುತ್ತಿದೆ. ಈ ಕುರಿತು ಸದ್ಯದಲ್ಲೇ ಸ್ಥಳೀಯರೊಂದಿಗೆ ಸಭೆ ನಡೆಸಲಾಗುವುದು ಎಂದು ಪಾಟೀಲ ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವತ ಜತೆ ದೂರವಾಣಿಯಲ್ಲಿ ಮಾತನಾಡಿ, ಅಡಚಣೆ ನಿವಾರಿಸುವಂತೆ ಸಲಹೆ‌ ನೀಡಿದರು.

ಬಾಗಲಕೋಟೆ-ಕುಡಚಿ ಯೋಜನೆಯಲ್ಲೂ ಖಜ್ಜಿದೋಣಿ-ಲೋಕಾಪುರ ನಡುವೆ ಜಮೀನು ಕಳೆದುಕೊಂಡಿರುವ ರೈತರು ಹೆಚ್ಚಿನ ಪರಿಹಾರ ಕೇಳುತ್ತಿದ್ದು, ಕೆಲಸ ಮಾಡಲು ಬಿಡುತ್ತಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿ ಜತೆ ದೂರವಾಣಿ ಮೂಲಕ ಮಾತನಾಡಿ, ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಯಾದವಾಡ ಸಮೀಪ ಕೂಡ 7 ಎಕರೆ ಸ್ವಾಧೀನವು ಒಂದು ವರ್ಷದಿಂದ ಹಾಗೆಯೇ ಇದೆ. ಈ ಸಂಬಂಧ ಚಿಕ್ಕೋಡಿ ಉಪವಿಭಾಗಾಧಿಕಾರಿ ಜತೆ ಸಚಿವರು ಮಾತನಾಡಿ ಶೀಘ್ರ ಹಸ್ತಾಂತರ ಮಾಡುವಂತೆ ಸೂಚಿಸಿದರು.

Whatsapp image 2025 04 16 at 5.17.50 pm

ಗದಗ- ಕುಡಚಿ ನಡುವೆ ಅಗತ್ಯವಿರುವ 148 ಎಕರೆ ಜಮೀನನನ್ನು 3 ತಿಂಗಳಲ್ಲಿ ಕೊಡಲಾಗುವುದು. ಇದರ ಜತೆಗೆ ಈ ಯೋಜನೆಗೆ ಇನ್ನೂ 100 ಎಕರೆ ಅಗತ್ಯವಿದೆ. ಈ ಜಮೀನಿಗೆ ಈಗಾಗಲೇ ಪರಿಹಾರ ಕೊಡಲಾಗಿದೆ. ಆದರೂ ಕೆಲವರು ಕೋರ್ಟಿಗೆ ಹೋಗಿದ್ದಾರೆ. ಈ ಬಗ್ಗೆ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಕುಷ್ಟಗಿ-ಜಿಮಲಾಪುರ ಯೋಜನೆಗೆ ಬೇಕಿರುವ 47 ಎಕರೆಯನ್ನು ಆದಷ್ಟು ಬೇಗ ಒದಗಿಸಲಾಗುವುದು. ಈ ಭಾಗದಲ್ಲಿ ಲಿಂಗನಬಂಡ-ಕುಷ್ಟಗಿ ನಡುವೆ ರೈಲು ಓಡಿಸಲು ಕ್ರಮ ವಹಿಸಬೇಕು ಎಂದು ಪಾಟೀಲ ಸೂಚನೆ ನೀಡಿದ್ದಾರೆ.

ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗ

ಬಹುನಿರೀಕ್ಷಿತ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗಕ್ಕೆ ಬೇಕಾದ ಭೂಸ್ವಾಧೀನ ಬಹುತೇಕ ಮುಗಿದಿದ್ದು, ಇನ್ನು 95 ಎಕರೆ ಜಮೀನು ಅಗತ್ಯವಿದೆ. ಈ ಪೈಕಿ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ 37 ಎಕರೆ ಮತ್ತು ತುಮಕೂರು ಜಿಲ್ಲೆಯ ಸರಹದ್ದಿನಲ್ಲಿ 58.3 ಎಕರೆ ಭೂಮಿ ಸ್ವಾಧೀನ ಬಾಕಿ ಇದೆ. ಇದಕ್ಕೆ ಹಣಕಾಸು ಇಲಾಖೆಯ ಮುಂದೆ 45 ಕೋಟಿ ರೂ.ಗೆ ಬೇಡಿಕೆ ಇಡಲಾಗಿದೆ. ಈ ಪ್ರಕ್ರಿಯೆ 3-4 ತಿಂಗಳಲ್ಲಿ ಮುಗಿಯಬೇಕು. ಹಾಗೆಯೇ, ತುಮಕೂರು-ರಾಯದುರ್ಗ ಯೋಜನೆಗೆ ಭೂಸ್ವಾಧೀನ ಬಹುತೇಕ ಮುಗಿದಿದ್ದು, ಇನ್ನು 17 ಎಕರೆ ಮಾತ್ರ ಬಾಕಿ ಇದೆ. ಇನ್ನೊಂದು ತಿಂಗಳಲ್ಲಿ ಜಮೀನು ಹಸ್ತಾಂತರ ಆಗಬೇಕು ಎಂದು ಸಚಿವರು ವಿವರಿಸಿದ್ದಾರೆ.

ಹುಬ್ಭಳ್ಳಿ-ಅಂಕೋಲಾ ಮಾರ್ಗದಲ್ಲಿ ಪ್ರಗತಿ

ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಹುಬ್ಭಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಮೊದಲ ಹಂತದ ಅನುಮೋದನೆ ಸಿಕ್ಕಿದ್ದು, ಮತ್ತೊಂದು ಒಪ್ಪಿಗೆ ಇನ್ನೊಂದು ತಿಂಗಳಲ್ಲಿ ಸಿಗುವ ನಿರೀಕ್ಷೆ ಇದೆ. ಈ ಮಾರ್ಗದಲ್ಲಿ ರೈಲ್ವೆ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಜಂಟಿಯಾಗಿ ಜಾಗ ಸ್ವಾಧೀನ ಮಾಡಿಕೊಂಡು, ಯೋಜನೆ ಜಾರಿ ಮಾಡಿದರೆ ಉಪಯುಕ್ತವೆಂಬ ಚಿಂತನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ಸಚಿವ ಪಾಟೀಲ ಅವರಿಗೆ ಈ ಸಂದರ್ಭದಲ್ಲಿ ಮಾಹಿತಿ‌ ನೀಡಿದರು. ಆದಷ್ಟು ಬೇಗ ಈ ಮಾರ್ಗ ನಿರ್ಮಾಣ ಮಾಡಬೇಕೆಂದು ಸಚಿವರು ಸೂಚಿಸಿದರು.

ಬೆಂಗಳೂರು-ಮಂಗಳೂರು ಮಾರ್ಗ:

ಬೆಂಗಳೂರು- ಮಂಗಳೂರು ಮಾರ್ಗದಲ್ಲಿ ಸಕಲೇಶಪುರ- ಸುಬ್ರಹ್ಮಣ್ಯ ನಡುವೆ ರೈಲ್ವೆ ಮಾರ್ಗ ಇಕ್ಕಟ್ಟನ್ನು ಎದುರಿಸುತ್ತಿದೆ. ಇದಕ್ಕೆ ಪರಿಹಾರವಾಗಿ ಪರ್ಯಾಯ ಮಾರ್ಗ ಅಭಿವೃದ್ಧಿಪಡಿಸಬೇಕೇ ಅಥವಾ ಈಗಿರುವ ಮಾರ್ಗದ ಪಕ್ಕದಲ್ಲೇ ಜೋಡಿಹಳಿ ಮಾಡಬೇಕೇ ಅಥವಾ ಎತ್ತರಿಸಿದ ಮಾರ್ಗ ಮಾಡಬೇಕೇ ಎಂಬುದು ಚಿಂತಿಸಲಾಗುತ್ತಿದೆ. ಈ ಬಗ್ಗೆ ಸಮೀಕ್ಷೆ ನಡೆಸಲು ಟೆಂಡರ್ ಕರೆಯಲಾಗುವುದು ಎಂದು ರೈಲ್ವೆ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಜಂಟಿ ಕಾರ್ಯದರ್ಶಿ ಗೋವಿಂದ ರೆಡ್ಡಿ, ಕೆಐಎಡಿಬಿ ಸಿಇಒ ಡಾ.ಮಹೇಶ, ರೈಲ್ವೆಯ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮ, ರೈಲ್ವೆ ಮುಖ್ಯ ಎಂಜಿನಿಯರ್ ಡಿ.ವಿ.ಪ್ರಸಾದ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಜೊತೆಗೆ ಸಂಬಂಧಿತ ಯೋಜನೆಗಳ ಭೂಸ್ವಾಧೀನಾಧಿಕಾರಿಗಳು ಹಾಜರಿದ್ದರು.

ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ (ಬಾಕ್ಸ್)

ಭೂಸ್ವಾಧೀನಕ್ಕೆ ಇರುವ ತಾಂತ್ರಿಕ ತೊಡಕುಗಳ ನಿವಾರಣೆ ಸಲುವಾಗಿ ಕರೆದಿರುವ ಮಹತ್ತ್ವದ ಸಭೆಗಳಿಗೆ ಕೆಲವು ಹಿರಿಯ ಅಧಿಕಾರಿಗಳು ಕೋರ್ಟ್ ಕಲಾಪ ಇತ್ಯಾದಿ ನೆಪ ಹೇಳಿಕೊಂಡು, ಕಿರಿಯ ಅಧಿಕಾರಿಗಳನ್ನು ಕಳಿಸುತ್ತಿರುವುದು ಸರಿಯಲ್ಲ. ಹಿಂದಿನ ಸಭೆಗಳಲ್ಲೇ ಈ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಮುಂದಿನ ಬಾರಿಯಿಂದ ಸಂಬಂಧಿಸಿದ ನಿರ್ದಿಷ್ಟ ಅಧಿಕಾರಿಗಳೇ ಖುದ್ದಾಗಿ ಬರಬೇಕು. ಇಲ್ಲದೆ ಹೋದರೆ, ಅಮಾನತು ಮಾಡಲು ಶಿಫಾರಸು ಮಾಡಲಾಗುವುದು ಎಂದು ಸಚಿವ ಎಂ ಬಿ ಪಾಟೀಲ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (84)

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:44 pm
0

Web (81)

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:35 pm
0

Web (83)

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 7:32 pm
0

Web (80)

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

by ಶ್ರೀದೇವಿ ಬಿ. ವೈ
September 16, 2025 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (81)
    ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ
    September 16, 2025 | 0
  • Web (73)
    15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ಗುಜರಿಗೆ ಹಾಕಿ: ಸರ್ಕಾರದಿಂದ ಮಹತ್ವದ ಆದೇಶ
    September 16, 2025 | 0
  • Web (68)
    ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡಗೆ ಆಯ್ಕೆ ಅಸಿಂಧು ಎಂದ ಕರ್ನಾಟಕ ಹೈಕೋರ್ಟ್
    September 16, 2025 | 0
  • Web (62)
    ಬಿಪಿಎಲ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ..!
    September 16, 2025 | 0
  • Web (52)
    ಕುರುಬ ಸಮುದಾಯದ ಸಭೆಯ ನಂತರ ಕೋಲಿ ಸಭೆ ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ
    September 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version