• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿ; ಹೆಚ್.ಡಿ ದೇವೇಗೌಡ

ರಾಜ್ಯಕ್ಕೆ ಆಗಿರುವ ನೀರಾವರಿ ಅನ್ಯಾಯ ಸರಿ ಹೋಗಬೇಕು: HDD

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 16, 2025 - 11:26 am
in Flash News, ಕರ್ನಾಟಕ
0 0
0
Hd

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

25 ಟಿಎಂಸಿ ಅಡಿ ನೀರು ಪಡೆಯುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಂಸದರ ಜತೆಗೂಡಿ ಹೋರಾಟ ನಡೆಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ ಎಂದ ಅವರು; ನಾಡಿನ ವಿಷಯ ಬಂದಾಗ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎನ್ನುವ ಭೇಧ ಮರೆತು ಒಟ್ಟಾಗಿ ಕೆಲಸ ಮಾಡಬೇಕು. ಇಂತಹ ಸಂಘಟಿತ ಪ್ರಯತ್ನಕ್ಕೆ ನಾನು ಹಿಂಜರಿಯುವುದಿಲ್ಲ ಎಂದರು.

RelatedPosts

ಇಂದು ಸಂಪುಟ ಸಭೆಯಲ್ಲಿ ಜಾತಿಗಣತಿಯ ಭವಿಷ್ಯ ನಿರ್ಧಾರ? ವರದಿ ಬಗ್ಗೆ ಮಹತ್ವದ ಚರ್ಚೆ

ಸಿದ್ದರಾಮಯ್ಯ ನೇತೃತ್ವದಲ್ಲಿ ಯೋಧರಿಗೆ ಬೆಂಬಲ: ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ

ಕರ್ನಾಟಕದ ಹವಾಮಾನ ವರದಿ: ಮುಂದಿನ ಎರಡು ದಿನ ಭರ್ಜರಿ ಮಳೆ..!

ಪಾಕಿಸ್ತಾನಕ್ಕೆ ಭಾರತದ ಶಾಕ್: ಪಾಕ್‌ನ ಕರಾಚಿ ಬಂದರು ಧ್ವಂಸ

ADVERTISEMENT
ADVERTISEMENT

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನೀರಾವರಿ ಯೋಜನೆಗಳ ಜಾರಿ ವಿಷಯದಲ್ಲಿ ಜೆಡಿಎಸ್ ಸುಮ್ಮನೆ ಕೂತಿಲ್ಲ, ಕೂರುವುದೂ ಇಲ್ಲ ಎಂದು ಹೇಳಿದ ದೇವೇಗೌಡರು; ನದಿ ಜೋಡಣೆ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದರು.

ನೀರಾವರಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಅದು ಸರಿಯಲ್ಲ. ಹಿಂದೆ ಸಿದ್ದರಾಮಯ್ಯ ಅವರು ನೀರಾವರಿ ಬಗ್ಗೆ ಚರ್ಚೆ ಮಾಡುವುದಕ್ಕೆ ನಮ್ಮ‌ ಮನೆಗೆ ಬಂದಿದ್ದರು. ಆಗ ನನಗೂ ಅವರಿಗೂ ಮಾತೇ ಇರಲಿಲ್ಲ. ಆದರೂ ನಾನು ಅವರ ಹಿಂದೆ ಹೋದೆ. ನನಗೇನು ಬೇಸರ ಇಲ್ಲ. ನೀರಾವರಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಬೇಡ.

ಸಂಸತ್ ಅಧಿವೇಶನದಲ್ಲಿ ಇದೇ ವಿಷಯ ಪ್ರಸ್ತಾಪ ಮಾಡಿ ಚರ್ಚೆ ಮಾಡಿದ್ದೇನೆ. ಗೋದಾವರಿ- ಕೃಷ್ಣ-ಕಾವೇರಿ ಯೋಜನೆ ವಿಚಾರವಾಗಿ ರಾಜ್ಯಕ್ಕೆ ನೀರಿನ ಹಂಚಿಕೆ ಹೆಚ್ಚಳ ಮಾಡುವಂತೆ ನಾನು ಪ್ರಧಾನಿಗಳು ಹಾಗೂ ಕೇಂದ್ರದ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದೇನೆ. ಈ ಬಗ್ಗೆ 2022, 2024ರಲ್ಲಿ ಜಲಶಕ್ತಿ ಸಚಿವರಿಗೆ ಪತ್ರ ಬರೆದಿದ್ದೆ. ಸದ್ಯ ಈ ಯೋಜನೆಯಲ್ಲಿ ಕರ್ನಾಟಕಕ್ಕೆ 15.891 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಆದರೆ, ಈ ಪ್ರಮಾಣವನ್ನು 25 ಟಿಎಂಸಿಗೆ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದ್ದೇನೆ ಎಂದು ಅವರು ಪುನರುಚ್ಚಾರ ಮಾಡಿದರು.

ಗೋದಾವರಿ ನದಿಯಿಂದ ರಾಜ್ಯಕ್ಕೆ 15.91 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಿ, ಆ ನೀರನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಯಾವ ರೀತಿ ಸಾಧ್ಯ ಮಾಡುತ್ತೀರಿ? ಎನ್ನುವ ಪ್ರಶ್ನೆಯನ್ನು ನಾನು ಸಂಸತ್ತಿನಲ್ಲಿ ಕೇಳಿದ್ದೇನೆ. ಜತೆಗೆ, ಕರ್ನಾಟಕಕ್ಕೆ ಗೋದಾವರಿಯಿಂದ ಹರಿಸುವ ನೀರನ್ನು ಕಾವೇರಿಗೆ ಎಲ್ಲಿ ಜೋಡಿಸುತ್ತೀರಿ? ಎಂದು ಸಹ ಕೇಳಿದ್ದೇನೆ. ಈ ಬಗ್ಗೆ ಯೋಜನೆಯಲ್ಲಿ ಸ್ಪಷ್ಟವಾಗಿ ತೋರಿಸಿಲ್ಲ. ಆ ಬಗ್ಗೆ ರಾಜ್ಯಕ್ಕೆ ನಿಖರವಾದ ಮಾಹಿತಿ ಬೇಕಿದೆ. ಇದರ ಕುರಿತಂತೆ ಪ್ರಧಾನಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಕಾಂಗ್ರೆಸ್ ನವರು ಅನೇಕ ನೀರಾವರಿ ಯೋಜನೆಗಳನ್ನು ಮಾಡಿದರು. ಆದರೆ, ಅನುಷ್ಠಾನಕ್ಕೆ ಹಣ ಇಡಲಿಲ್ಲ. ಅದರ ಬಗ್ಗೆ ನಾನು ಯಾಕೆ ಚರ್ಚೆ ಮಾಡಲಿ? ನಾನೇನು ಮಾಡಿದ್ದೇನೆ ಎಂಬುದಕ್ಕೆ ದಾಖಲೆ ಇದೆ. ಕಾವೇರಿ ನೀರು ಸದ್ವಿನಿಯೋಗ ಮಾಡಿಕೊಳ್ಳಲು ನಾನೇನು ಮಾಡಿದ್ದೇನೆ ಎನ್ನುವುದಕ್ಕೆ ದೊಡ್ಡ ಇತಿಹಾಸ ಇದೆ. ಸದನದಲ್ಲಿ ನಾನು ಏನೆಲ್ಲಾ ಹೋರಾಟ ನಡೆಸಿದ್ದೇನೆ ಎನ್ನುವುದಕ್ಕೆ ದಾಖಲೆ ಇದೆ. ಪರಿಶೀಲನೆ ಮಾಡಬಹುದು. ಭದ್ರಾ ಮೇಲ್ದಂಡೆಗೆ ಅನುಮತಿ ಕೊಡಿ ಎಂದು ಕೇಂದ್ರಕ್ಕೆ ಪತ್ರ ಬರೆದು ಒತ್ತಾಯ ಮಾಡಿದ್ದೇನೆ. ನಾನು ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿಯಲ್ಲ. ಮಹದಾಯಿ ಬಗ್ಗೆ ಕೂಡ ನಾನು ಹೋರಾಟ ನಡೆಸಿದ್ದೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ರಾಜ್ಯಕ್ಕೆ 25 ಟಿಎಂಸಿ ನೀರು ಕೊಡಬೇಕು. ಇದು ನಮ್ಮ ಡಿಮ್ಯಾಂಡ್. ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ 25 ಟಿಎಂಸಿ ನೀರು ಕರ್ನಾಟಕಕ್ಕೆ ಹಂಚಿಕೆ ಆಗಬೇಕು. ಇದು ದೊಡ್ಡ ಗುರಿ. ರಾಜಕೀಯದ ಅಗತ್ಯ ಇಲ್ಲ. ನಮ್ಮ ನಮ್ಮ ನಡುವೆಯೇ ಭಿನ್ನಾಭಿಪ್ರಾಯ ಬೇಡ. ಒಟ್ಟಾಗಿ ರಾಜ್ಯಕ್ಕಾಗಿ ಹೊರಾಟ ಮಾಡೋಣ ಎಂದು ಅವರು ಒತ್ತಿ ಹೇಳಿದರು.

ತಮಿಳುನಾಡಿಗೆ ನೀರಿನ ಸಮಸ್ಯೆ ಇಲ್ಲ‌. ಯಥೇಚ್ಚವಾಗಿ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಈ ಬಗ್ಗೆ ಸಂಸತ್ ನಲ್ಲಿ ಮಾತಾಡೋವಾಗ ತಮಿಳುನಾಡಿನವರು ವಿರೋಧ ಮಾಡಲಿಲ್ಲ. ನೀರು ಪಡೆಯಲು ನಾವು ಪಕ್ಷಬೇಧ ಮರೆತು ಒಟ್ಟಾಗಿ ಹೋರಾಟ ಮಾಡುತ್ತೇವೆ. ನನಗೆ ಆ ವಿಶ್ವಾಸ ಇದೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಗೋದಾವರಿ-ಕಾವೇರಿ ಬಗ್ಗೆ ಸಂಸತ್ ನಲ್ಲಿ ನಾನು ಮಾತಾಡಿದ್ದೇನೆ. ತಮಿಳುನಾಡಿನ ಎಲ್ಲಾ ರಾಜ್ಯಸಭೆ ಸದಸ್ಯರು ಒಕ್ಕೊರಳಿನಿಂದ ಗೋದಾವರಿ, ಕಾವೇರಿ ಅಂತ ಕೂಗಿದರು. ಇದರಲ್ಲಿ ಕರ್ನಾಟಕದ ಹೋರಾಟ ಮೊದಲಿನಿಂದಲೂ ಇದೆ. ನಾನು ನೀರಾವರಿ ಮಂತ್ರಿ ಆಗಿದ್ದಾಗಿನಿಂದ ಹೋರಾಟ ನಡೆಯುತ್ತಲೇ ಇದೆ. ಕಾವೇರಿ ನೀರು ಹಂಚಿಕೆಯಲ್ಲಿ ನಮಗೆ ಅನ್ಯಾಯವಾಗಿದೆ. ಇದನ್ನು ಮೋದಿ ಅವರ ಗಮನಕ್ಕೆ ತಂದಿದ್ದೇನೆ. ನಮ್ಮ ರಾಜ್ಯದ ಒಬ್ಬರು ಪುಣ್ಯಾತ್ಮರು ನೀರು ಕೊಡುತ್ತೇನೆ ಎಂದು ಹೇಳಿದ್ದಾರೆ. ಅವರು ನೀರು ಕೊಟ್ಟರೆ ಸಂತೋಷ. ಚಿತ್ರದುರ್ಗ, ತುಮಕೂರು ಸೇರಿದಂತೆ ನೀರೇ ಕಾಣದ ಪ್ರದೇಶಗಳಿಗೆ ನೀರು ಹೋಗಬೇಕು. ಎಲ್ಲಿಂದಾದರೂ ನೀರು ಕೊಡಲಿ ಎಂದು ಅವರು ಹೇಳಿದರು.

ಕೊನೆಯ ಆಸೆ ಎಂದು ಭಾವುಕರಾದರು

ರಾಜ್ಯಕ್ಕೆ ನೀರಿನ ವಿಷಯದಲ್ಲಿ ನ್ಯಾಯ ಸಿಗಬೇಕು. ಅದೇ ನನ್ನ ಜೀವನದ ಕೊನೆಯ ಆಸೆ. ಈ ದೇಹ ಅಂತ್ಯ ಆಗುವುದರ ಒಳಗಾಗಿ ನಮ್ಮ ರಾಜ್ಯಕ್ಕೆ ನೀರಾವರಿ ವಿಷಯದಲ್ಲಿ ಆಗಿರುವ ಅನ್ಯಾಯ ಸರಿ ಹೋಗಬೇಕು. ನಾನು ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ. ಅಷ್ಟರಲ್ಲಿ ಈ ನೀರಿನ ಸಮಸ್ಯೆ ಬಗೆಹರಿಸಬೇಕು ಎನ್ನುವ ಛಲವಿದೆ, ಬಗೆಹರಿಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಸೇರಿಸಿಕೊಂಡು ನಾನು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಭಾವುಕರಾಗಿ ಹೇಳಿದರು.

ಅನ್ಯಾಯ ಸರಿ ಮಾಡಬೇಕಿದೆ

ಕಾವೇರಿ, ಕಳಸಾ ಬಂಡೂರಿ ಯೋಜನೆಗಳಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ ಆಗಿದೆ. ಈಗ ಗೋದಾವರಿ – ಕಾವೇರಿ ಜೋಡಣೆ ಯೋಜನೆಯಲ್ಲಿಯೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ನಾವು ದನಿಯೆತ್ತಬೇಕಿದೆ. ಕಳಸಾ ಬಂಡೂರಿ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಆದರೆ, ಈ ವಿವಾದ ಸುಪ್ರೀಂ ಕೋರ್ಟಿನಲ್ಲಿದೆ. ಹೀಗಾಗಿ ಪ್ರಧಾನಿಗಳು ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ನಮ್ಮ ವಕೀಲರು ಸುಪ್ರೀಂ ಕೋರ್ಟಿನಲ್ಲಿ ವಾದ ಮಂಡಿಸಿ ಗೆಲ್ಲಬೇಕು. ರಾಜ್ಯ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಸಿಕ್ಕಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು; ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಮೊದಲು ಬಿಡುಗಡೆ ಮಾಡಲಿ. ರಾಜ್ಯ ಸರ್ಕಾರ ಅನೇಕ ನೀರಾವರಿ ಯೋಜನೆಗಳನ್ನು ಘೋಷಣೆ ಮಾಡಿದೆ. ಆದರೆ, ಹಣ ಕೊಡಲು ಸಾಧ್ಯವಾಗಿಲ್ಲ. ಅವರು ಮೊದಲು ಆ ಕೆಲಸ ಮಾಡಲಿ ಎಂದು ಎಂದು ತಿರುಗೇಟು ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (99)

ಐಪಿಎಲ್ 2025: ಇಂದು ಲಕ್ನೋ vs ಆರ್‌ಸಿಬಿ ಪಂದ್ಯ ನಡೆಯುತ್ತಾ?

by ಶ್ರೀದೇವಿ ಬಿ. ವೈ
May 9, 2025 - 9:06 am
0

Web (98)

ಭಾರತಕ್ಕೆ ಸೌದಿ ಸಚಿವರ ಹಠಾತ್ ಭೇಟಿ: ಉಗ್ರವಾದ ನಿಗ್ರಹಕ್ಕೆ ಬೆಂబల

by ಶ್ರೀದೇವಿ ಬಿ. ವೈ
May 9, 2025 - 8:46 am
0

Web (97)

ಪಾಕ್ ಜೊತೆ ಸಂಘರ್ಷ: 8,000 ಎಕ್ಸ್ ಖಾತೆಗಳಿಗೆ ಭಾರತದಲ್ಲಿ ನಿರ್ಬಂಧ

by ಶ್ರೀದೇವಿ ಬಿ. ವೈ
May 9, 2025 - 8:29 am
0

Web (96)

ಇಂದು ಸಂಪುಟ ಸಭೆಯಲ್ಲಿ ಜಾತಿಗಣತಿಯ ಭವಿಷ್ಯ ನಿರ್ಧಾರ? ವರದಿ ಬಗ್ಗೆ ಮಹತ್ವದ ಚರ್ಚೆ

by ಶ್ರೀದೇವಿ ಬಿ. ವೈ
May 9, 2025 - 8:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (99)
    ಪಾಕಿಸ್ತಾನಕ್ಕೆ ಭಾರತದ ಶಾಕ್: ಪಾಕ್‌ನ ಕರಾಚಿ ಬಂದರು ಧ್ವಂಸ
    May 9, 2025 | 0
  • Untitled design (97)
    ಪಾಕ್‌ನ ಯುದ್ಧ ವಿಮಾನ ಛಿದ್ರಗೊಳಿಸಿ ಪೈಲೆಟ್ ವಶಕ್ಕೆ ಪಡೆದ ಭಾರತ
    May 8, 2025 | 0
  • Untitled design (96)
    ಪಾಕ್​​ ದಾಳಿಗೆ ಭಾರತ ಕೌಂಟರ್: ಲಾಹೋರ್‌-ಸಿಯಾಲ್‌ಕೋಟ್‌ ಮೇಲೆ ಡ್ರೋನ್ ದಾಳಿ
    May 8, 2025 | 0
  • Untitled design (94)
    ಜನಾರ್ದನ ರೆಡ್ಡಿಗೆ ಬಿಗ್‌ ಶಾಕ್‌: ಶಾಸಕ ಸ್ಥಾನದಿಂದ ಅನರ್ಹ
    May 8, 2025 | 0
  • Untitled design (90)
    IPL 2025: ಪಾಕ್‌ ದಾಳಿ ಬೆನ್ನಲ್ಲೇ ಪಂಜಾಬ್‌‌- ಡೆಲ್ಲಿ ಪಂದ್ಯ ರದ್ದು
    May 8, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version