ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಸ್ಥಳೀಯ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣವಿದ್ದರೂ, ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ, ಕೆಲವು ಸ್ಥಳಗಳಲ್ಲಿ ತುಂತುರು ಮಳೆಯಾಗಬಹುದು ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ.
ಕೆಲವು ಪ್ರಮುಖ ಸ್ಥಳಗಳಲ್ಲಿ ಮಳೆ
ಸಿದ್ದಾಪುರ, ಯಲ್ಲಾಪುರ, ಜೋಯ್ಡಾ, ಮೂಡುಬಿದಿರೆ, ಆಗುಂಬೆ, ಶೃಂಗೇರಿ, ಕಮ್ಮರಡಿ, ಕಾರ್ಕಳ, ಅಂಕೋಲಾ, ಬೆಳ್ತಂಗಡಿ, ಕುಮಟಾ, ಸೋಮವಾರಪೇಟೆ, ಕಳಸ, ಲೋಂಡಾ, ಚಿತ್ತಾಪುರ, ಕೊಪ್ಪ, ಕೊಟ್ಟಿಗೆಹಾರ, ತ್ಯಾಗರ್ತಿ, ಭಾಗಮಂಡಲ, ಮಂಕಿ, ಧರ್ಮಸ್ಥಳ, ಶಿರಾಲಿ, ಕೋಟಾ, ಕುಂದಾಪುರ, ಮುಂಡಗೋಡು, ಬನವಾಸಿ, ಜಯಪುರ, ಬಾಳೆಹೊನ್ನೂರು, ಹಾವೇರಿ, ಗುತ್ತಲ್, ಶಿಗ್ಗಾಂವ್, ಯಾದಗಿರಿ, ನಲ್ವತವಾಡ, ಬಿಳಗಿ, ಸಿಂಧನೂರು, ಹರಪನಹಳ್ಳಿ, ಎನ್ಆರ್ ಪುರ, ಹಾರಂಗಿ, ಹಳಿಯಾಳ, ಹೊನ್ನಾವರ ಮತ್ತು ಸುಳ್ಯದಲ್ಲಿ ಈಗಾಗಲೇ ಮಳೆಯಾಗಿದೆ.
ಬೆಂಗಳೂರಿನಲ್ಲಿ ತಾಪಮಾನ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 30.6 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್, ನಗರದಲ್ಲಿ ಗರಿಷ್ಠ ಉಷ್ಣಾಂಶ 29.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 31.1 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.1 ಡಿಗ್ರಿ ಸೆಲ್ಸಿಯಸ್, ಜಿಕೆವಿಕೆಯಲ್ಲಿ ಗರಿಷ್ಠ ಉಷ್ಣಾಂಶ 30.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕರಾವಳಿ ಮತ್ತು ಒಳನಾಡಿನ ತಾಪಮಾನ
ಕರಾವಳಿ ಪ್ರದೇಶಗಳಾದ ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶ 31.9 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.9 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 30.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.1 ಡಿಗ್ರಿ ಸೆಲ್ಸಿಯಸ್, ಮಂಗಳೂರು ಏರ್ಪೋರ್ಟ್ನಲ್ಲಿ ಗರಿಷ್ಠ ಉಷ್ಣಾಂಶ 29.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.0 ಡಿಗ್ರಿ ಸೆಲ್ಸಿಯಸ್, ಪಣಂಬೂರಿನಲ್ಲಿ ಗರಿಷ್ಠ ಉಷ್ಣಾಂಶ 30.6 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಒಳನಾಡಿನಲ್ಲಿ ಬೆಳಗಾವಿ ಏರ್ಪೋರ್ಟ್‌ನಲ್ಲಿ ಗರಿಷ್ಠ ಉಷ್ಣಾಂಶ 25.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಸಿಯಸ್, ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 28.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.0 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ 29.5 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 26.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.8 ಡಿಗ್ರಿ ಸೆಲ್ಸಿಯಸ್, ಗದಗದಲ್ಲಿ ಗರಿಷ್ಠ ಉಷ್ಣಾಂಶ 28.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.4 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 30.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.8 ಡಿಗ್ರಿ ಸೆಲ್ಸಿಯಸ್, ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 25.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.8 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 30.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.9 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 34.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಭಾರೀ ಮಳೆಯಾಗುವ ಜಿಲ್ಲೆಗಳಲ್ಲಿ ಸ್ಥಳೀಯ ಆಡಳಿತವು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನರು ಕಡಿಮೆ ಒಡಾಡುವಂತೆ ಮತ್ತು ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಲಾಗಿದೆ. ಕೃಷಿಕರು ಮತ್ತು ಮೀನುಗಾರರಿಗೆ ಹವಾಮಾನದ ಬಗ್ಗೆ ಎಚ್ಚರಿಕೆಯಿಂದಿರಲು ತಿಳಿಸಲಾಗಿದೆ.