ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಈ ಅಚ್ಚರಿ ನಿರ್ಧಾರದಿಂದ ಕಾಂಗ್ರೆಸ್ ಸರ್ಕಾರದ ಒಳಾಂಗಣ ರಾಜಕೀಯದಲ್ಲಿ ಮತ್ತೆ ಚರ್ಚೆಗಳು ಜೋರಾಗಿವೆ.
ಮಾಹಿತಿಯ ಪ್ರಕಾರ, ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿಯಾದ ರಾಜಣ್ಣ ಅವರು, ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಹೈಕಮಾಂಡ್ ನಾಯಕರಿಂದ ಬಂದ ಸೂಚನೆಯ ಮೇರೆಗೆ ಈ ರಾಜೀನಾಮೆ ಸಲ್ಲಿಕೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಧಾನಸೌಧದಲ್ಲಿ ನಡೆದ ಭೇಟಿಯಲ್ಲಿ, ಸಿಎಂ ಸಿದ್ದರಾಮಯ್ಯ ಹಾಗೂ ಕೆ.ಎನ್. ರಾಜಣ್ಣ ನಡುವೆ ಸ್ವಲ್ಪ ಹೊತ್ತು ಮಾತುಕತೆ ನಡೆಯಿತು. ಅದರ ಬಳಿಕ, ರಾಜಣ್ಣ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ಅವರಿಗೆ ಸಲ್ಲಿಸಿದರು.