ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ಇಂದು (ಆಗಸ್ಟ್ 20) ಬೆಳಿಗ್ಗೆ ಅಪರಿಚಿತ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ದಾಳಿ ರೇಖಾ ಗುಪ್ತಾ ಅವರು ತಮ್ಮ ಕ್ಯಾಂಪ್ ಕಚೇರಿಯಲ್ಲಿ ಸಾರ್ವಜನಿಕ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದೆ.
ಘಟನೆಯ ನಂತರ ಕಚೇರಿಯಲ್ಲಿ ಗದ್ದಲದ ವಾತಾವರಣ ಉಂಟಾಯಿತು. ಸ್ಥಳೀಯ ಪೊಲೀಸರು ತಕ್ಷಣವೇ ದಾಳಿಕೋರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ, ಈ ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ತನಿಖೆಯು ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ADVERTISEMENT
ADVERTISEMENT