ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ಬಿಜೆಪಿಯ ನಾಯಕರ ನವೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಬಸಾಪುರದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ, ಭಾಂತಿಯೂ ಇಲ್ಲ. ಬಿಜೆಪಿ ನಾಯಕರು ಅನಗತ್ಯ ಹೇಳಿಕೆಗಳ ಮೂಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಲಿಕೆ ನೀಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆಯು ಮಂಗಳವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ, ದಿನಾಂಕ ವಿಸ್ತರಣೆಯ ಬಗ್ಗೆ ಚರ್ಚಿಸಲಾಗುವುದು. ನಾಳೆ ಸಂಜೆಯವರೆಗೆ ಕಾದುನೋಡುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಹೇಳಿಕೆಗಳನ್ನು ತಳ್ಳಿಹಾಕಿರುವ ಸಿಎಂ, ರಾಜ್ಯದ ರಾಜಕೀಯ ವಾತಾವರಣದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂದು ಒತ್ತಿ ಹೇಳಿದರು.
ಈ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿಯಿಂದ ಯಾವುದೇ ರಾಜಕೀಯ ಕ್ರಾಂತಿಯ ಸಾಧ್ಯತೆಯನ್ನು ಸಿದ್ದರಾಮಯ್ಯ ನಿರಾಕರಿಸಿದ್ದು, ಸರ್ಕಾರದ ಕಾರ್ಯನಿರ್ವಹಣೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.