ಬಿಲಾಸ್ಪುರ: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತ್ತಾ ಪ್ರದೇಶದಲ್ಲಿ ಮಂಗಳವಾರ (ಅ.7) ಸಂಭವಿಸಿದ ಭೀಕರ ಭೂಕುಸಿತದಲ್ಲಿ 15ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಚಲಿಸುತ್ತಿದ್ದ ಬಸ್ ಮೇಲೆ ಭೂಕುಸಿತವಾಗಿ ಬಸ್ ಸಂಪೂರ್ಣವಾಗಿ ಸಿಲುಕಿಕೊಂಡಿದ್ದು,ಬಸ್ ಅವಶೇಷಗಳು ಮತ್ತು ಬಂಡೆಗಳು ನೇರವಾಗಿ ವಾಹನದ ಮೇಲೆ ಬಿದ್ದು ಅನೇಕ ಪ್ರಯಾಣಿಕರು ಭೂ ಕುಸಿತದಲ್ಲಿ ಸಿಲುಕಿದ್ದಾರೆ.
ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಜನರು ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.ಸ್ಥಳಕ್ಕೆ ರಕ್ಷಣಾ ಸಿಬ್ಬಂದಿಗಳು ಭೇಟಿ ನೀಡಿ, ರಕ್ಷಣೆ ಕಾರ್ಯ ಮುಂದುವರೆಸಿದ್ದಾರೆ.
Bilaspur, Himachal Pradesh | At least 10 people were killed and several others injured after a private bus was hit by a landslide in the Balurghat area of Jhandhuta subdivision in Himachal Pradesh’s Bilaspur district. Excavation and rescue operations are continuing on a war… pic.twitter.com/1mlKWXCDkQ
— ANI (@ANI) October 7, 2025
ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಪೊಲೀಸ್ ,ರಕ್ಷಣಾ ತಂಡಗಳು ಸಂಯುಕ್ತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಕೆಲವು ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಸತತವಾಗಿ ಭಾರೀ ಮಳೆಯು ಭೂಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಈ ಪ್ರದೇಶದಲ್ಲಿ ಮುಂಚೆಯೂ ಇದೇ ರೀತಿಯ ಭೂಕುಸಿತಗಳು ಸಂಭವಿಸಿದ್ದವು. ಸ್ಥಳೀಯ ರಸ್ತೆಗಳನ್ನು ತಾತ್ಕಾಲಿಕವಾಗಿ ಮುಚ್ಚಿ, ಪರ್ಯಾಯ ಮಾರ್ಗಗಳನ್ನು ಏರ್ಪಡಿಸಲಾಗಿದೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಅವರು ಈ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ವೇಗವಾಗಿಕೊಳ್ಳುವಂತೆ ಸೂಚಿಸಿದ್ದಾರೆ. ಸತ್ತವರ ಕುಟುಂಬಗಳಿಗೆ ₹4 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ₹50,000 ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ. ರಾಜ್ಯ ಸರ್ಕಾರವು ಈ ದುರಂತದ ತನಿಖೆಗೆ ಉನ್ನತಮಟ್ಟದ ಸಮಿತಿಯನ್ನು ರಚಿಸಲಿದೆ.





