ತುಮಕೂರು, ಅಕ್ಟೋಬರ್ 07, 2025: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರು ಬಳಿಯ ಮಾರ್ಕೋನಹಳ್ಳಿ ಡ್ಯಾಂನಲ್ಲಿ ಒಂದೇ ಕುಟುಂಬದ ಏಳು ಸದಸ್ಯರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಒಬ್ಬ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಉಳಿದ ನಾಲ್ವರು ಕಣ್ಮರೆಯಾಗಿರುವುದರಿಂದ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ಘಟನೆಯಲ್ಲಿ ಸಾಜಿಯಾ (8),ಅರ್ಬಿನ್ (10) ಎಂಬ ಮಕ್ಕಳು ಸಾವನ್ನಪ್ಪಿದ್ದಾರೆ. ತಬಾಸುಮ್ (45), ಶಬಾನ್ (44), ಮಿಫ್ರಾ (4) ಮತ್ತು ಮಹಿಬ್ (1) ಎಂಬವರು ಕಣ್ಮರೆಯಾಗಿದ್ದಾರೆ. ನವಾಜ್ (35) ಎಂಬುವವರನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರು ತುಮಕೂರು ನಗರದ ಬಿ.ಜಿ.ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. ಕುಣಿಗಲ್ ತಾಲೂಕಿನ ಮಾಗಡಿಪಾಳ್ಯ ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿದ್ದ ಈ ಕುಟುಂಬ, ಊಟ ಮುಗಿಸಿಕೊಂಡು ಸಂಜೆ ಸುಮಾರು 4 ಗಂಟೆಗೆ ಮಾರ್ಕೋನಹಳ್ಳಿ ಡ್ಯಾಂಗೆ ಪ್ರವಾಸಕ್ಕೆ ಹೊರಟಿದ್ದರು, ರಭಸವಾಗಿ ನೀರು ಹರಿಯುತ್ತಿದ್ದರಿಂದ ಈ ಘಟನೆ ನಡೆದಿದೆ.
ಸುದ್ದಿ ತಿಳಿದ ಕೂಡಲೇ ಹುಲಿಯೂರುದುರ್ಗ ಮತ್ತು ಅಮೃತೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ