ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ಕಾರ್ಯನಿರತರಾದ ಹಲವಾರು ಶಿಕ್ಷಕ-ಉಪಾಧ್ಯಾಯರು ನಾಲ್ಕು ತಿಂಗಳಿಂದ ಸಂಬಳವಿಲ್ಲದೆ ಸಂಕಷ್ಟದಿಂದ ಪರದಾಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ ಟ್ವಿಟರ್ ಮೂಲಕ ಟೀಕಿಸಿದ್ದಾರೆ.
ಟನಲ್ ರೋಡ್ ಬಿಡಿ ಸ್ವಾಮಿ
ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿಡಿಸಿಎಂ @DKShivakumar ಅವರೇ,
ಸುರಂಗ ರಸ್ತೆ ಮಾಡ್ತೀನಿ, ಸ್ಕೈ ಡೆಕ್ ಮಾಡ್ತೀನಿ, ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ, ಜಿಬಿಎ ಮಾಡ್ತೀನಿ ಅಂತ ಬರೀ ಓಳು ಬಿಟ್ಟು ಕನ್ನಡಿಗರಿಗೆ ಚೊಂಬು ಕೊಟ್ಟಿದ್ದೇ ನಿಮ್ಮ ಸಾಧನೆ.
ನಿಮ್ಮ ಜಿಬಿಎ ಅವ್ಯವಸ್ಥೆಯಿಂದ ಪಾಲಿಕೆ ಶಿಕ್ಷಕರು… pic.twitter.com/GJN8bj2Chw
— R. Ashoka (@RAshokaBJP) October 28, 2025
ಶಿವಕುಮಾರ್ ಅವರು ಪಾಲಿಕೆ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಿಲ್ಲ.ಜೊತೆಗೆ ಅತಿಥಿ ಶಿಕ್ಷಕರು ಸೇರಿದಂತೆ ಎಲ್ಲಾ ಶಿಕ್ಷಕ ವರ್ಗಕ್ಕೆ ನಿಗದಿತ ಸಮಯದಲ್ಲಿ ವೇತನ ನೀಡುವುದಾಗಿ ಭರವಸೆ ನೀಡಿದ್ದರು ,ಅದು ಯಾವುದೂ ಕಾಋಯ ರೂಪಕ್ಕೆ ಬರದಿದ್ದಕ್ಕೆ ಆರ್.ಅಶೋಕ್ ಟ್ವಿಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್.ಅಶೋಕ್ ತಮ್ಮ ಟ್ವಿಟ್‌ನಲ್ಲಿ ಸುರಂಗ ರಸ್ತೆ ಮಾಡುತ್ತೇನೆ, ಸ್ಕೈ ಡೆಕ್ ಮಾಡುತ್ತೇನೆ, ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆ, ಜಿಬಿಎ ಮಾಡುತ್ತೇನೆ ಎಂದು ಬರೀ ಓಳು ಬಿಟ್ಟು ಕನ್ನಡಿಗರಿಗೆ ಚೊಂಬು ಕೊಟ್ಟಿದ್ದೇ ನಿಮ್ಮ ಸಾಧನೆ. ನಿಮ್ಮ ಜಿಬಿಎ ಅವ್ಯವಸ್ಥೆಯಿಂದ ಪಾಲಿಕೆ ಶಿಕ್ಷಕರು ಕಳೆದ 4 ತಿಂಗಳಿಂದ ಸಂಬಳವಿಲ್ಲದೆ ಸಂಸಾರ ತೂಗಿಸಲು ಪರದಾಡುತ್ತಿದ್ದಾರೆ. ಮೊದಲು ಅವರಿಗೆ ಬಾಕಿ ವೇತನ ಬಿಡುಗಡೆ ಮಾಡಿ ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಡಿಕೆಎಸ್ ಅವರನ್ನು ನೇರವಾಗಿ ಟ್ಯಾಗ್ ಮಾಡಿ ವ್ಯಂಗ್ಯ ಮಾಡಿದ್ದಾರೆ.





