ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕದ ಜನಪ್ರಿಯ ನಾಯಕ ಹೆಚ್.ವೈ. ಮೇಟಿ (79) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಭಾವುಕ ಸಂತಾಪ ಸಂದೇಶ ಹಂಚಿಕೊಂಡಿದ್ದಾರೆ. ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕದ ರಾಜಕೀಯ ಕ್ಷೇತ್ರವು ಅಮೂಲ್ಯ ನಾಯಕರನ್ನು ಕಳೆದುಕೊಂಡಿದೆ.
ಮೇಟಿಯವರು ಕಳೆದ ಕೆಲವು ವಾರಗಳಿಂದ ಅಸ್ವಸ್ಥರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಗುರುವಾರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಆಸ್ಪತ್ರೆಗೆ ತೆರಳಿ, ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಬೆಳಿಗ್ಗೆ ಅವರು ವಿಧಿವಶರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. “ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ” ಎಂದು ಸಿಎಂ ಬರೆದುಕೊಂಡಿದ್ದಾರೆ.
ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ.… pic.twitter.com/Fe4uHvrw2y
— Siddaramaiah (@siddaramaiah) November 4, 2025
ಹೆಚ್.ವೈ. ಮೇಟಿ ಅವರು ಬಾಗಲಕೋಟೆ ಜಿಲ್ಲೆಯ ಹುಣಗುಂದ ಮೂಲದವರು. ಅವರು ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯನಿರ್ವಹಿಸಿ, ಅನೇಕ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಬಾಗಲಕೋಟೆ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ಇನ್ನಿಲ್ಲ
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರೂ, ಮಾಜಿ ಸಚಿವರೂ ಆದ ಹೆಚ್.ವೈ.ಮೇಟಿ (H.Y. Meti) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ತೀವ್ರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಎಚ್.ವೈ. ಮೇಟಿ ಅವರು ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಮತ್ತು ದಮ್ಮು (ಅಸ್ತಮಾ) ರೋಗದಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ರಾಮಲಿಂಗಾ ರೆಡ್ಡಿ ಮತ್ತು ಇತರರೊಂದಿಗೆ ಆಸ್ಪತ್ರೆಗೆ ತೆರಳಿ, ಮೇಟಿ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ, ಅವರ ಯೋಗಕ್ಷೇಮ ವಿಚಾರಿಸಿದ್ದರು. ಆದರೆ, ತೀವ್ರ ಅನಾರೋಗ್ಯದಿಂದಾಗಿ ಚಿಕಿತ್ಸೆ ಯಶಸ್ವಿಯಾಗದೇ ಅವರು ಇಂದು ನಿಧನರಾಗಿದ್ದಾರೆ.
ಹುಲ್ಲಪ್ಪ ಯಮನಪ್ಪ ಮೇಟಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಹಿರಿಯ ಸದಸ್ಯರಾಗಿ, ಕರ್ನಾಟಕ ರಾಜಕಾರಣದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದರು. ಅವರು 1989 ರಿಂದ 1999 ರವರೆಗೆ ಮತ್ತು 2004 ರಿಂದ 2007 ರವರೆಗೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.
2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮೇಟಿ ಅವರು ಬಾಗಲಕೋಟೆ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಅಲ್ಲಿ ಅವರು 68,216 ಮತಗಳನ್ನು ಪಡೆದು ಪ್ರತಿಸ್ಪರ್ಧಿಗಳನ್ನು ಹಿಂದಕ್ಕಿಟ್ಟಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಅವರು ಮಾಜಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಸರ್ಕಾರದಲ್ಲಿ ಎರಡು ಬಾರಿ ಸಚಿವ ಸ್ಥಾನವನ್ನು ಅಲಂಕರಿಸಿದ್ದ ಅವರು, ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಪ್ರಮುಖ ಸ್ಥಾನ ಪಡೆದಿದ್ದರು.





