ಬೆಂಗಳೂರು, ನವೆಂಬರ್ 17: ಕರ್ನಾಟಕ ರಾಜ್ಯದ ಹವಾಮಾನದಲ್ಲಿ ಸಣ್ಣ ಬದಲಾವಣೆಯ ಸುಳಿವು ಕಂಡುಬಂದಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆ ಪ್ರಕಾರ, ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚು. ವಿಶೇಷವಾಗಿ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆಯಾಗಬಹುದು. ಆದರೆ ಈ ಮಳೆ ಕೇವಲ ಸಾಧಾರಣ ಮಟ್ಟದ್ದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆಯಿದೆ. ಇಲ್ಲಿ ಒಣ ಹವೆಯೇ ಮುಂದುವರೆಯಲಿದೆ. ಕರಾವಳಿಯಲ್ಲಿ ವರುಣನ ಆರ್ಭಟ ತಾತ್ಕಾಲಿಕವಾಗಿ ನಿಂತಿದ್ದು, ಮೀನುಗಾರರು ಮತ್ತು ಪ್ರವಾಸೋದ್ಯಮದವರು ಈ ದಿನಗಳನ್ನು ಬಳಸಿಕೊಳ್ಳಬಹುದು. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಯಾವುದೇ ಸುಳಿವೂ ಇಲ್ಲ.
ಬೆಂಗಳೂರು ನಗರದಲ್ಲಿ ಆಕರ್ಷಣೆ ಮೋಡಕವಿದ ವಾತಾವರಣವಿದ್ದು, ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 10 ಕಿ.ಮೀ. ಮಾತ್ರ. ಇಲ್ಲಿ ಮಳೆ ಇಲ್ಲದಿದ್ದರು, ನಗರದ ಜನರಿಗೆ ತಂಪು ನೀಡಲಿವೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಮಳೆಯ ಸಾಧ್ಯತೆಯಿದ್ದರೂ, ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಹವಾಮಾನ ಇಲಾಖೆಯು ಈ ಮುನ್ಸೂಚನೆಯನ್ನು ನಿರಂತರವಾಗಿ ಅಪ್‌ಡೇಟ್ ಮಾಡುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳನ್ನು ಯೋಜಿಸುವಾಗ ಈ ಮಾಹಿತಿಯನ್ನು ಪರಿಗಣಿಸಬೇಕು.





