• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 8:28 am
in ದೇಶ
0 0
0
Untitled design 2025 11 20T082450.818

ಪಾಟ್ನಾ, ನವೆಂಬರ್ 20: ಬಿಹಾರದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಬರೆಯಲಾಗುತ್ತಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. 243 ಸ್ಥಾನಗಳ ವಿಧಾನಸಭೆಯಲ್ಲಿ NDA ಗುರುತು 200ಕ್ಕೂ ಹೆಚ್ಚು ಸೀಟು ಗಳಿಸಿ ಸ್ಪಷ್ಟ ಬಹುಮತ ಪಡೆದಿದೆ. ಈ ಗೆಲುವಿನ ಫಲವಾಗಿ ಜನತಾದಳ (ಯುನೈಟೆಡ್) ಮುಖಂಡ ನಿತೀಶ್ ಕುಮಾರ್ ಇಂದು ಬೆಳಗ್ಗೆ 11:30ಕ್ಕೆ ಬಿಹಾರದ ಮುಖ್ಯಮಂತ್ರಿಯಾಗಿ 10ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನವನ್ನು ಈ ಕಾರ್ಯಕ್ರಮಕ್ಕಾಗಿ ಅದ್ಧೂರಿಯಾಗಿ ಸಿಂಗರಿಸಲಾಗಿದೆ. ಸಾವಿರಾರು NDA ಕಾರ್ಯಕರ್ತರು, ಜೆಡಿ(ಯು) ಮತ್ತು ಬಿಜೆಪಿ ನಾಯಕರು, ಜನಸಾಮಾನ್ಯರು ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಕೇಂದ್ರದ ಹಲವು ಗಣ್ಯರು ಆಗಮಿಸಲಿದ್ದಾರೆ.

RelatedPosts

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ

ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ

ವಿದ್ಯಾರ್ಥಿ ಹೋರಾಟಕ್ಕೆ ಕೈಜೋಡಿಸಿದ ಸ್ಟಾರ್‌ಗಳು: ಯಾರ್ಯರು ಬೆಂಬಲಿಸಿದರು?

ADVERTISEMENT
ADVERTISEMENT

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶದ ಡಾ. ಮೋಹನ್ ಯಾದವ್, ಅಸ್ಸಾಂನ ಹಿಮಂತ ಬಿಸ್ವ ಶರ್ಮ, ಗುಜರಾತ್‌ನ ಭೂಪೇಂದ್ರ ಪಟೇಲ್, ಒಡಿಶಾದ ಮೋಹನ್ ಚರಣ ಮಾಝಿ ಸೇರಿದಂತೆ ಕನಿಷ್ಠ 7 ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ನಿನ್ನೆ ನಡೆದ ಸಮಾಲೋಚನಾ ಸಭೆಯ ನಂತರ, ನಿತೀಶ್ ಕುಮಾರ್ ಅವರು ತಮ್ಮ ಹಳೆಯ ಸರ್ಕಾರದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸಲ್ಲಿಸಿದರು. ಅದೇ ವೇಳೆ NDA ಘಟಕಪಕ್ಷಗಳ ಬೆಂಬಲ ಪತ್ರಗಳನ್ನೂ ರಾಜ್ಯಪಾಲರಿಗೆ ಒಪ್ಪಿಸಿದರು. ರಾಜ್ಯಪಾಲರು ಅವರ ಈ ಮನವಿಯನ್ನು ಅಂಗೀಕರಿಸಿ, ಸರ್ಕಾರ ರಚನೆಗೆ ಆಹ್ವಾನ ನೀಡಿದರು.

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್: ನ.20 ರಂದು 10 ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಪಾಟ್ನಾ, ನವೆಂಬರ್ 17: ಬಿಹಾರದ ರಾಜಕೀಯದಲ್ಲಿ ಮತ್ತೊಮ್ಮೆ ನಿತೀಶ್ ಮ್ಯಾಜಿಕ್ ಪುನರಾವರ್ತನೆಯಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಸಂಜೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ರಾಜೀನಾಮೆ ಸಲ್ಲಿಸಿ, ತಮ್ಮ ಸಂಪುಟದೊಂದಿಗೆ ಕೊನೆಯ ಸಭೆ ನಡೆಸಿದರು. ಆದರೆ ಇದು ಕೇವಲ ಔಪಚಾರಿಕತೆ ಮಾತ್ರ ! ಇದೇ ನವೆಂಬರ್ 20ರಂದು ಗುರುವಾರ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಅದ್ಧೂರಿ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. 243 ಸ್ಥಾನಗಳಲ್ಲಿ ಬೃಹತ್ ಬಹುಮತದೊಂದಿಗೆ 202 ಸ್ಥಾನಗಳನ್ನು ಪಡೆದುಕೊಂದಿದೆ. ಬಿಜೆಪಿ 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಜೆಡಿಯು 85 ಸ್ಥಾನಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದೆ. ಇತರ ಸಣ್ಣ ಪಕ್ಷಗಳು ಉಳಿದ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ.

ಇನ್ನು ವಿರೋಧ ಪಕ್ಷಗಳ ಮಹಾಘಟಬಂಧನ್ (ಆರ್‌ಜೆಡಿ + ಕಾಂಗ್ರೆಸ್ + ಇತರರು) ಕೇವಲ 35 ಸ್ಥಾನಗಳಿಗೆ ಸೀಮಿತವಾಗಿ ಭಾರೀ ಸೋಲು ಕಂಡಿದೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಕೂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಈ ಐತಿಹಾಸಿಕ ಗೆಲುವಿನ ನಂತರ ಎನ್‌ಡಿಎಯಲ್ಲಿ ಯಾರು ಮುಖ್ಯಮಂತ್ರಿ ಎಂಬ ಪ್ರಶ್ನೆಗೆ ತಕ್ಷಣ ಉತ್ತರ ಸಿಕ್ಕಿದೆ. ಅದೇ ನಿತೀಶ್‌ ಕುಮಾರ್‌..!

ಹೊಸ ಸರ್ಕಾರ ರಚನೆಗೆ ಈಗ ತೀವ್ರ ಚಟುವಟಿಕೆ ಆರಂಭವಾಗಿದೆ. ಬಿಜೆಪಿ ಮತ್ತು ಜೆಡಿಯು ನಾಯಕರು ಈಗಾಗಲೇ ಸಂಪುಟದ ಆಕಾರ, ಖಾತೆ ಹಂಚಿಕೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ನಿತೀಶ್ ಅವರ 10ನೇ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಎನ್‌ಡಿಎಯ ಎಲ್ಲ ಪ್ರಮುಖ ಮಿತ್ರಪಕ್ಷಗಳ ನಾಯಕರು ಆಗಮಿಸುವ ಸಾಧ್ಯತೆ ಇದೆ.

ಇತ್ತ ಚುನಾವಣೆಯಲ್ಲಿ ಸೋತು ನಿರಾಶೆಗೊಳಗಾದ ಕಾಂಗ್ರೆಸ್ ಇನ್ನೂ ಆ ಆಘಾತದಿಂದ ಹೊರಬಂದಿಲ್ಲ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಬಿಹಾರದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಎನ್‌ಡಿಎ ನಾಯಕರು ಮತ್ತು ಪ್ರಧಾನಿ ಮೋದಿ ಅವರು ಒಂದು ಮತಕ್ಕೆ ಮಹಿಳೆಯರಿಗೆ ₹10,000 ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಈ ಆರೋಪಕ್ಕೆ ಯಾವುದೇ ಪುರಾವೆ ನೀಡದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನಿತೀಶ್ ಕುಮಾರ್ ಅವರ ರಾಜಕೀಯ ಜೀವನವೇ ಒಂದು ಅದ್ಭುತ ಕಥೆ. 2005ರಿಂದ ಇಲ್ಲಿಯವರೆಗೆ ಹಲವು ಬಾರಿ ಮೈತ್ರಿಕೂಟ ಬದಲಾಯಿಸಿ, ಎನ್‌ಡಿಎ-ಮಹಾಘಟಬಂಧನ್-ಮತ್ತೆ ಎನ್‌ಡಿಎ ಎಂದು ತಿರುಗುವ ಪ್ರಯಾಣದಲ್ಲಿ ಯಾವಾಗಲೂ ಸಿಎಂ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಈ ಬಾರಿ ಎನ್‌ಡಿಎಯ ಭರ್ಜರಿ ಗೆಲುವಿನೊಂದಿಗೆ ಅವರ 10ನೇ ಅವಧಿಯ ಸಿಎಂ ಆಗಿ ಪ್ರಮಾಣವಚನ ಇತಿಹಾಸದ ಪುಟ ಸೇರಲಿದೆ.

ಬಿಹಾರದ ಜನತೆಗೆ ಈಗ ನಿತೀಶ್ 4.0 ಸರ್ಕಾರದಿಂದ ಏನೆಲ್ಲಾ ನಿರೀಕ್ಷೆ? ಅಭಿವೃದ್ಧಿ, ಉದ್ಯೋಗ, ಮಹಿಳಾ ಸಬಲೀಕರಣ, ಗುಣಮಟ್ಟದ ಶಿಕ್ಷಣ-ಆರೋಗ್ಯ ಈ ಎಲ್ಲದಕ್ಕೂ ಹೊಸ ಸರ್ಕಾರ ಒತ್ತು ನೀಡುತ್ತದೆ ಎಂಬ ಭರವಸೆ ಎನ್‌ಡಿಎ ನಾಯಕರು ನೀಡಿದ್ದಾರೆ.ನವೆಂಬರ್ 20ರ ಸಮಾರಂಭದ ನಂತರ ಬಿಹಾರದ ಹೊಸ ಸಂಪುಟ ರೂಪುಗೊಳ್ಳಲಿದೆ. ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಿತೀಶ್ ಯುಗ ಆರಂಭವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 26T062729.940

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ, ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ

by ದಿಶಾ ಕೆ. ಎಸ್.
July 26, 2026 - 6:29 am
0

Untitled design 2026 07 26T062605.211

ಇಂದಿನ ದಿನ ನಿಮ್ಮ ಪಾಲಿಗೆ ಹೇಗಿರಲಿದೆ? ಇಲ್ಲಿದೆ ಸಂಪೂರ್ಣ ರಾಶಿ ಭವಿಷ್ಯ

by ದಿಶಾ ಕೆ. ಎಸ್.
July 26, 2026 - 6:27 am
0

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (3)
    ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ
    July 25, 2026 | 0
  • ವಿದ್ಯಾರ್ಥಿ
    ವಿದ್ಯಾರ್ಥಿ ಹೋರಾಟಕ್ಕೆ ಕೈಜೋಡಿಸಿದ ಸ್ಟಾರ್‌ಗಳು: ಯಾರ್ಯರು ಬೆಂಬಲಿಸಿದರು?
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ
    NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು: ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version