ಪ್ರೀತಿ ಮಾಡಿ, ಮದುವೆಯಾಗಿ ಮೂರೇ ತಿಂಗಳಾದ 23 ವರ್ಷದ ನವವಿವಾಹಿತೆ ಅಮೂಲ್ಯ (23) ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಿಂದೆ ಅಂದ್ರಹಳ್ಳಿಯ ವಾಸ್ತವ್ಯ ಹೊಂದಿದ್ದ ಅಮೂಲ್ಯ ಮತ್ತು ವಿದ್ಯಾಮಾನ ನಗರದ ವಾಸ್ತವ್ಯದ ಅಭಿಷೇಕ್ (30) ಆಸುಪಾಸಿನ ನಗರದವಗರಾಗಿದ್ದರು. ಇಬ್ಬರ ನಡುವೆ ಪ್ರೀತಿಯಾಗಿದೆ. ಸುಮಾರು ಮೂರು ತಿಂಗಳ ಹಿಂದೆ ಇಬ್ಬರೂ ಕುಟುಂಬದವರ ಒಪ್ಪಿಗೆಯೊಂದಿಗೆ ವಿವಾಹವಾಗಿದ್ದರು. ಆದರೆ ಜೀವನ ಇನ್ನೂ ಜೀವನ ಪ್ರಾರಂಭಿಸುವ ಮೊದಲೇ ವಧು ಅಮೂಲ್ಯ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಈ ದುರಂತದ ನಂತರ ಅಮೂಲ್ಯರ ಕುಟುಂಬದವರು ವರನ ಕುಟುಂಬದವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಮಗಳ ಸಾವಿನ ಹಿಂದೆ ಅಭಿಷೇಕ್ ಮತ್ತು ಅವರ ಕುಟುಂಬದವರೇ ಕಾರಣ. ನನ್ನ ಮಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ಗಂಡ ಮತ್ತು ಅತ್ತೆ ಸೇರಿ ನನ್ನ ಮಗಳಿಗೆ ಹಿಂಸೆ ಕೊಟಿದ್ದಾರೆ ಎಂದು ಅಮೂಲ್ಯ ತಾಯಿ ಗಂಭೀರ ಆರೋಪ ಮಾಡಿದ್ದಾರೆ.
ಸಾವಿಗೆ ನಿಖರವಾದ ಕಾರಣ ಏನು..? ಅಮೂಲ್ಯಗೆ ಮಾನಸಿಕ ಹಿಂಸೆ ನೀಡಿದ್ದಾರೆಯೇ..? ಅಮೂಲ್ಯ ತಾಯಿ ಮಾಡುತ್ತಿರುವ ಆರೋಪ ನಿಜವೇ ಎಂಬುದನ್ನ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಘಟನೆಯ ನಂತರ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅಮೂಲ್ಯರ ಕುಟುಂಬದವರಿಂದ ದೂರು ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಸಂಬಂಧಿತ ಎಲ್ಲರ ವಿವರಗಳನ್ನು ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ಬೃಹತ್ ಮತ್ತು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದಲ್ಲಿ ಒಂದರ ಹಿಂದೆ ಒಂದರಂತೆ ನಡೆಯುತ್ತಿರುವ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಸನ್ನಿವೇಶವನ್ನು ಸೃಷ್ಟಿಸಿವೆ. ಇದೀಗ ನಗರದ ಐಟಿ ಹಬ್ ಎಂದೇ ಕರೆಯಲಾಗುವ ವೈಟ್‌ಫೀಲ್ಡ್ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವ್ಯಕ್ತಿಯೊಬ್ಬರು ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈಟ್‌ಫೀಲ್ಡ್‌ನಲ್ಲಿ ಮೌನವಾದ ಆಕ್ರಂದನ
ಈ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮುರಳಿ ಎಂದು ಗುರುತಿಸಲಾಗಿದೆ. ಮುರಳಿ ಅವರು ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲೇರಿ, ಅಲ್ಲಿಂದ ಕೆಳಗೆ ಜಿಗಿದು ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯರು ಈ ಭೀಕರ ದೃಶ್ಯವನ್ನು ಕಂಡ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.





