• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಂಡಿಗೋ ಫ್ಲೈಟ್ ಕ್ಯಾನ್ಸಲ್‌ ಎಫೆಕ್ಟ್: ಗಗನಕ್ಕೇರಿದ ವಿಮಾನ ಟಿಕೆಟ್ ರೇಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 6, 2025 - 12:55 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 06T123710.388

ಬೆಂಗಳೂರು: ದೇಶದೆಲ್ಲೆಡೆ ಇಂಡಿಗೋ ವಿಮಾನ ಹಾರಾಟ ಕಳೆದ 5 ದಿನಗಳಿಂದ ವ್ಯತ್ಯಯ ಉಂಟಾಗಿದ್ದು, ಸಾವಿರಾರು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿವೆ. ಇದರ ಪರಿಣಾಮವಾಗಿ ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ ಹಾಗೂ ಕೊಚ್ಚಿ ಸೇರಿದಂತೆ ಪ್ರಮುಖ ನಗರಗಳ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ.

ವಿಮಾನಯಾನ ಸಂಸ್ಥೆಯ ಕಾರ್ಯಾಚರಣೆಯಲ್ಲಿ ಸಂಭವಿಸಿರುವ ತಾಂತ್ರಿಕ ಮತ್ತು ನಿರ್ವಹಣಾ ಸಮಸ್ಯೆಗಳ ಪರಿಣಾಮವಾಗಿ ಹಾರಾಟಗಳ ವೇಳಾಪಟ್ಟಿ ಬದಲಾಗಿದ್ದು, ನಿರ್ದಿಷ್ಟ ಮಾಹಿತಿ ಸಿಗದ ಕಾರಣ ಪ್ರಯಾಣಿಕರು ಪರದಾಡಬೇಕಾದ ಪರಿಸ್ಥಿತಿಯು ಮುಂದುವರಿದಿದೆ. ಈ ನಡುವೆ ವಿಮಾನ ಟಿಕೆಟ್‌ಗಳ ದರ ಗಗನಕ್ಕೇರಿದೆ.

RelatedPosts

ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ಸಿಗರೇಟ್, ನಿಷೇಧಿತ ಮಾದಕ ವಸ್ತುಗಳು ಪತ್ತೆ: ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್ ಅರೆಸ್ಟ್

ಫಸ್ಟ್ ನೈಟ್ ಗಲಾಟೆ: ಕನ್ಯತ್ವ-ಪುರುಷತ್ವ ಪರೀಕ್ಷೆ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!

ADVERTISEMENT
ADVERTISEMENT

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆ ಇತರೆ ಏರ್‌ಲೈನ್ ಸಂಸ್ಥೆಗಳು ಭಾರಿ ಪ್ರಮಾಣದಲ್ಲಿ  ಟಿಕೆಟ್ ದರ ಹೆಚ್ಚಳ ಮಾಡಿ ಲಾಭ ಪಡೆದುಕೊಳ್ಳುತ್ತಿವೆ. ಸಾಮಾನ್ಯವಾಗಿ ಒಂದು ನಿರ್ದಿಷ್ಟ ಸೀಸನ್ ಅಥವಾ ತುರ್ತು ಪರಿಸ್ಥಿತಿಗಳಲ್ಲಿ ದರ ಹೆಚ್ಚಳ ಕಾಣಿಸಿಕೊಳ್ಳುವುದು ಸಹಜ. ಆದರೆ ಈ ಬಾರಿ ದರ ಏರಿಕೆ ಪ್ರಮಾಣ ‘ಅತಿರೇಕ’ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೆಲವು ವಿಮಾನಯಾನ ಸಂಸ್ಥೆಗಳು ಏರ್ ಫೇರ್ ನಿಯಮಗಳನ್ನು ಉಲ್ಲಂಘಿಸಿ, ಸಾಮಾನ್ಯ ದರದ ಹತ್ತರಿಂದ ಹದಿನೈದು ಪಟ್ಟು ಹೆಚ್ಚಳ ಮಾಡಿವೆ. ಮಹಾನಗರಗಳಿಗೆ ಪ್ರಯಾಣಿಸುವ ವಿಮಾನಗಳ ಟಿಕೆಟ್ ದರದಲ್ಲಿ ₹5,000 ರಿಂದ ₹8,000ರವರೆಗೆ  ಏರಿಕೆ ಕಂಡುಬಂದಿದೆ. ಹಲವು ಎಕಾನಮಿ ಕ್ಲಾಸ್ ಟಿಕೆಟ್‌ಗಳು ₹50,000 ರಿಂದ ₹80,000ರವರೆಗೆ ಏರಿಕೆಯಾಗಿದೆ.

ಬೆಂಗಳೂರು–ಮುಂಬೈ ಮಾರ್ಗದಲ್ಲಿ ಟಿಕೆಟ್ ದರಗಳು ₹25,000 ರಿಂದ ₹75,000ರವರೆಗೆ ಏರಿಕೆಯಾಗಿದೆ. ಇದೇ ರೀತಿಯಲ್ಲಿ ಬೆಂಗಳೂರು–ಕೊಚ್ಚಿ ಮಾರ್ಗದಲ್ಲಿ ₹18,000ರವರೆಗೆ ಹೆಚ್ಚಳ ದಾಖಲಾಗಿದೆ.

ಇನ್ನು ಇತರ ವಿಮಾನಯಾನ ಸಂಸ್ಥೆಗಳು ಟಿಕೆಟ್‌ ದರ ಹೆಚ್ಚಳ ಮಾಡಿ ಪ್ರಯಾಣಿಕರಿಂದ ವಸೂಲಿಗಿಳಿದಿದ್ದು, ತೀವ್ರ ಆಕ್ರೋಶ ಕಾರಣವಾಗಿದೆ. ಇಂಡಿಗೋ ಹಾರಾಟದಲ್ಲಿ ವ್ಯತ್ಯಯ ಇತರ ವಿಮಾನಗಳ ಟಿಕೆಟ್‌ ದರ ಭಾರಿ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವಂತೆ ವಿಪಕ್ಷಗಳು ಸಂಸತ್‌ ಅಧಿವೇಶನದಲ್ಲಿ ಧ್ವನಿ ಎತ್ತಿದೆ.

3ನೇ ದಿನವೂ ಇಂಡಿಗೋ ವಿಮಾನಯಾನದಲ್ಲಿ ಗೊಂದಲ: ಬೆಂಗಳೂರಿನಲ್ಲಿ 73 ವಿಮಾನ ರದ್ದು

ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾದ ಇಂಡಿಗೋ (IndiGo) ವಿಮಾನಗಳ ಹಾರಾಟದಲ್ಲಿ ಉಂಟಾಗಿರುವ ಗಂಭೀರ ಅಡಚಣೆಯು ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ತಾಂತ್ರಿಕ ದೋಷಗಳು, ಸಿಬ್ಬಂದಿ ಕೊರತೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ದೇಶಾದ್ಯಂತ ವಿಮಾನಗಳ ಹಾರಾಟ ರದ್ದಾಗಿದ್ದು, ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿನ್ನೆ (ಎರಡನೇ ದಿನ) ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು.

ಇಂದಿಗೂ ಮುಂದುವರಿದ ರದ್ದತಿ: ದೇಶಾದ್ಯಂತ 100+ ವಿಮಾನಗಳ ಮೇಲೆ ಪರಿಣಾಮ ಈ ಸಮಸ್ಯೆ ಮೂರನೇ ದಿನವೂ ಮುಂದುವರಿಯುವ ಸಾಧ್ಯತೆಗಳಿದ್ದು, ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ಇಂದು ಕೂಡ ರದ್ದಾಗುವ ಭೀತಿ ಎದುರಾಗಿದೆ. ಇನ್ನು ಹಲವು ವಿಮಾನಗಳ ಹಾರಾಟದಲ್ಲಿ ಗಣನೀಯ ವಿಳಂಬ ಕಂಡುಬರುತ್ತಿದ್ದು, ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರೀ ವ್ಯತ್ಯಯ

ರಾಜಧಾನಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport – KIA) ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

  • ನಿನ್ನೆ (ಎರಡನೇ ದಿನ) ಬೆಂಗಳೂರಿನಿಂದ 43 ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು.

  • ಆದರೆ, ಇಂದು (ಮೂರನೇ ದಿನ) ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು, ಒಟ್ಟು 73 ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಇಂಡಿಗೋ ಪ್ರಯಾಣಿಕರು ತಮ್ಮ ಪ್ರವಾಸವನ್ನು ರದ್ದುಗೊಳಿಸುವುದು ಇಲ್ಲವೇ ಬೇರೆ ವಿಮಾನಯಾನ ಸಂಸ್ಥೆಗಳನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ.

ಡಿಜಿಸಿಎಯಿಂದ ಇಂಡಿಗೋ ಅಧಿಕಾರಿಗಳಿಗೆ ಬುಲಾವ್

ಸತತ ವಿಮಾನಗಳ ರದ್ದತಿ ಮತ್ತು ವಿಳಂಬದಿಂದಾಗಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA), ಇಂಡಿಗೋ ಸಂಸ್ಥೆಗೆ ನೋಟಿಸ್ ನೀಡಿದೆ.

  • ವಿಮಾನಗಳ ವಿಳಂಬ ಮತ್ತು ರದ್ದತಿಗಳ ಹಿಂದಿನ ನಿಖರ ಕಾರಣಗಳನ್ನು ವಿವರಿಸುವಂತೆ ಡಿಜಿಸಿಎ ಸೂಚಿಸಿದೆ.

  • ಅಲ್ಲದೇ, ಪ್ರಯಾಣಿಕರ ಸಂಕಷ್ಟವನ್ನು ಪರಿಹರಿಸಲು ಮತ್ತು ಪರಿಸ್ಥಿತಿ ಸುಧಾರಿಸಲು ಸ್ಪಷ್ಟ ಯೋಜನೆಯನ್ನು ಒದಗಿಸುವಂತೆ ಇಂಡಿಗೋಗೆ ಆದೇಶಿಸಿದೆ.

  • ಈ ವಿಷಯದ ಬಗ್ಗೆ ಚರ್ಚಿಸಲು, ಡಿಜಿಸಿಎ ಇಂದು ಮಧ್ಯಾಹ್ನ ನಡೆಯಲಿರುವ ಉನ್ನತ ಮಟ್ಟದ ಸಭೆಗೆ ಇಂಡಿಗೋ ಅಧಿಕಾರಿಗಳಿಗೆ ತುರ್ತು ಬುಲಾವ್ ನೀಡಿದೆ.

48 ಗಂಟೆಗಳಲ್ಲಿ ಸುಧಾರಣೆಯ ಭರವಸೆ ನೀಡಿದ ಇಂಡಿಗೋ

ಸಂಸ್ಥೆಯಲ್ಲಿ ಉಂಟಾಗಿರುವ ಗೊಂದಲ ಮತ್ತು ಅಡಚಣೆಗಳ ಕುರಿತು ಇಂಡಿಗೋ ಸಂಸ್ಥೆಯು ಔಪಚಾರಿಕ ಪ್ರತಿಕ್ರಿಯೆ ನೀಡಿದೆ. ಸಂಸ್ಥೆಯು ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ಕ್ಷಮೆಯಾಚಿಸುತ್ತೇವೆ. ಸಮಸ್ಯೆಯನ್ನು ಬಗೆಹರಿಸಿ, ಮುಂದಿನ 48 ಗಂಟೆಗಳೊಳಗೆ ಪರಿಸ್ಥಿತಿಯನ್ನು ಸುಧಾರಿಸುತ್ತೇವೆ ಎಂದು ಭರವಸೆ ನೀಡಿದೆ.

ಇಂಡಿಗೋ ನೀಡಿದ ಕಾರಣಗಳು:

ಇಂಡಿಗೋ ಸಂಸ್ಥೆಯು ವಿಮಾನ ಹಾರಾಟದ ಅಡಚಣೆಗೆ ಹಲವು ಅನಿರೀಕ್ಷಿತ ಕಾರ್ಯಾಚರಣೆಗಳನ್ನ ತಿಳಿಸಿವೆ ಅವುಗಳೆಂದರೆ:

  1. ತಾಂತ್ರಿಕ ದೋಷಗಳು.

  2. ಚಳಿಗಾಲದ ವೇಳಾಪಟ್ಟಿಯಲ್ಲಿನ ಹೊಂದಾಣಿಕೆಗಳು

  3. ಹವಾಮಾನ ಪರಿಸ್ಥಿತಿ.

  4. ವಿಮಾನ ನಿಲ್ದಾಣಗಳಲ್ಲಿನ ದಟ್ಟಣೆ

  5. ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಹೊಸ ಅನುಷ್ಠಾನ

ಈ ಎಲ್ಲಾ ಕಾರಣಗಳಿಂದಾಗಿ ಸಿಬ್ಬಂದಿ ಲಭ್ಯತೆಗೆ ಅನುಗುಣವಾಗಿ ವಿಮಾನ ಕಾರ್ಯಾಚರಣೆಯನ್ನು ಸ್ಥಿರಗೊಳಿಸಲು ತಾತ್ಕಾಲಿಕವಾಗಿ ಕೆಲ ವಿಮಾನಗಳ ವೇಳಾಪಟ್ಟಿ ಬದಲಾವಣೆ ಮತ್ತು ರದ್ದತಿ ಅನಿವಾರ್ಯವಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1111 (2)

ಎಲ್ಲೆಲ್ಲೂ ಡೆವಿಲ್ ಹವಾ.. ರಾಜ್ಯಾದ್ಯಂತ ಫ್ಯಾನ್ಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 6, 2025 - 2:42 pm
0

1111 (1)

BBK 12: ಗಿಲ್ಲಿಗೆ ಒಂದು ತುತ್ತು ಊಟ ಕೊಡದ ಕುಚಿಕು..ರಘು ವರ್ತನೆಗೆ ಫ್ಯಾನ್ಸ್‌ ಗರಂ

by ಶಾಲಿನಿ ಕೆ. ಡಿ
December 6, 2025 - 2:28 pm
0

1111

ಟಾಕ್ಸಿಕ್, ರಾಮಾಯಣ ನಡುವೆ ಯಶ್ ಮಗಳ ಬರ್ತ್ ಡೇ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 6, 2025 - 2:03 pm
0

Untitled design 2025 12 06T132954.417

IND vs SA: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ: ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!

by ಶಾಲಿನಿ ಕೆ. ಡಿ
December 6, 2025 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T114249.915
    ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ
    December 6, 2025 | 0
  • Untitled design 2025 12 06T112501.796
    ಸಿಗರೇಟ್, ನಿಷೇಧಿತ ಮಾದಕ ವಸ್ತುಗಳು ಪತ್ತೆ: ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್ ಅರೆಸ್ಟ್
    December 6, 2025 | 0
  • Untitled design 2025 12 06T103123.459
    ಫಸ್ಟ್ ನೈಟ್ ಗಲಾಟೆ: ಕನ್ಯತ್ವ-ಪುರುಷತ್ವ ಪರೀಕ್ಷೆ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ
    December 6, 2025 | 0
  • Untitled design 2025 12 06T084629.919
    ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ ಮುನ್ಸೂಚನೆ!
    December 6, 2025 | 0
  • Web 2025 12 05T190730.419
    ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್
    December 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version