• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಕೀಯ ದಿಗ್ಗಜ ಶಾಮನೂರು ಶಿವಶಂಕರಪ್ಪ ನಿಧನ: ಕಂಬನಿ ಮಿಡಿದ ಗಣ್ಯರು

ಯಶಸ್ವಿನಿ ಎಂ by ಯಶಸ್ವಿನಿ ಎಂ
December 14, 2025 - 8:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ, ಬೆಂ. ನಗರ
0 0
0
Untitled design 2025 12 14T205312.282

ಬೆಂಗಳೂರು: ಕರ್ನಾಟಕದ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಅನನ್ಯ ಛಾಪು ಮೂಡಿಸಿದ್ದ, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ತಮ್ಮ 95ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆಯೇ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ವಿರೋಧ ಪಕ್ಷದ ನಾಯಕರು ಸೇರಿದಂತೆ ಪಕ್ಷಾತೀತವಾಗಿ ಎಲ್ಲಾ ಗಣ್ಯರು ತೀವ್ರ ದುಃಖ ವ್ಯಕ್ತಪಡಿಸಿ, ಕಂಬನಿ ಮಿಡಿದಿದ್ದಾರೆ.

RelatedPosts

ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ದಾಟಲು ಇರಾನ್ ಅನುಮತಿ

ಮದುವೆಯಾದ 3 ತಿಂಗಳಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹ*ತ್ಯೆಗೈದ ಪತ್ನಿ

ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!

ADVERTISEMENT
ADVERTISEMENT

ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಮ್ಮ ಎಕ್ಸ್‌ (X) ಖಾತೆಯಲ್ಲಿ ಪೋಸ್ಟ್‌ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿರುವ ಅವರು, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಮತ್ತು ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ತಮ್ಮ ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ… pic.twitter.com/432ygHGNIP

— DK Shivakumar (@DKShivakumar) December 14, 2025

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಹೆಚ್‌.ಡಿ ಕುಮಾರಸ್ವಾಮಿ ಕೂಡ ಹಿರಿಯ ನಾಯಕರ ಅಗಲಿಕೆಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾಗಿದ್ದ ಶಾಮನೂರು ಶಿವಶಂಕರಪ್ಪನವರು. ವೈಯಕ್ತಿಕವಾಗಿ ನಾನು ಅವರನ್ನು ಬಹಳ ಗೌರವಿಸುತ್ತಿದ್ದೆ. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟ ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದು ಹೆಚ್‌ಡಿಕೆ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ… pic.twitter.com/432ygHGNIP

— DK Shivakumar (@DKShivakumar) December 14, 2025

ಸಚಿವ ಈಶ್ವರ್‌ ಖಂಡ್ರೆ ಅವರು ಶಿವಶಂಕರಪ್ಪ ಅವರ ಕೊಡುಗೆಗಳನ್ನು ಸ್ಮರಿಸಿ ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ವ್ಯಕ್ತಿ ಶಾಮನೂರು ಶಿವಶಂಕರಪ್ಪ. ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದರು. ಅವರ ನಿಧನದಿಂದ ನಾವು ಒಬ್ಬ ಶ್ರೇಷ್ಠ ಮುತ್ಸದ್ದಿ ಹಾಗೂ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇವೆ ಎಂದು ಕಂಬನಿ ಮಿಡಿದಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅಣ್ಣನವರ ನಿಧನವು ನನಗೆ ಹಾಗೂ ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅಣ್ಣನವರು ತಮ್ಮ ನೇರ ನುಡಿ, ದೃಢ ನಿರ್ಧಾರ ಮತ್ತು… pic.twitter.com/0MvnVj1WFc

— Eshwar Khandre (@eshwar_khandre) December 14, 2025

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಶಿವಶಂಕರಪ್ಪ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ರಾಜ್ಯಕ್ಕೆ, ದಾವಣಗೆರೆ ಜಿಲ್ಲೆಗೆ, ವೀರಶೈವ ಸಮಾಜಕ್ಕೆ ಮತ್ತು ನನಗೆ ವಯಕ್ತಿಕವಾಗಿ ತುಂಬಲಾರದ ಹಾನಿಯಾಗಿದೆ ಎಂದು ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪ ರವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು.

ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಶಾಸಕರಾಗಿ ಹಾಗೂ ಸಚಿವರಾಗಿ ದಕ್ಷ ಹಾಗೂ ಪ್ರಾಮಣಿಕತೆಯಿಂದ… pic.twitter.com/EccI0vLPZl

— Basavaraj S Bommai (@BSBommai) December 14, 2025

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರಾಗಿ ಸಮಸ್ತ ಸಮಾಜದ ಏಕತೆ ಮತ್ತು ಏಳಿಗೆಗಾಗಿ ನಿರಂತರ ಶ್ರಮಿಸಿದ್ದ ಇವರ ಅಗಲಿಕೆಯಿಂದ ನಾಡು ಒಬ್ಬ ಹಿರಿಯ ಸಾಧಕ ರಾಜಕಾರಣಿಯನ್ನು, ಸಮುದಾಯ ತನ್ನ ಹಿರಿಯ ಮಾರ್ಗದರ್ಶಕರನ್ನು ಕಳೆದುಕೊಂಡಿದೆ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕರು, ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶಾಮನೂರು ಶಿವಶಂಕಪ್ಪನವರು ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಉದ್ಯಮಿಯಾಗಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರಾಗಿ ಸಮಸ್ತ ಸಮಾಜದ ಏಕತೆ ಮತ್ತು… pic.twitter.com/wNhwFSCFE9

— Vijayendra Yediyurappa (@BYVijayendra) December 14, 2025

ಶಾಮನೂರು ಶಿವಶಂಕರಪ್ಪ ಅವರ ನಿಧನವು ರಾಜ್ಯದ ಸಮಸ್ತ ರಾಜಕೀಯ ವರ್ಗ, ವೀರಶೈವ ಸಮುದಾಯ ಮತ್ತು ಅವರು ಕಟ್ಟಿದ ಶೈಕ್ಷಣಿಕ ಸಂಸ್ಥೆಗಳಿಗೆ ಬಹುದೊಡ್ಡ ಆಘಾತವನ್ನು ಉಂಟುಮಾಡಿದೆ. ಇವರ ನಿಧನಕ್ಕೆ ರಾಜ್ಯದ ಸಚಿವರು, ಶಾಸಕರು ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 12T111416.118

ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ದಾಟಲು ಇರಾನ್ ಅನುಮತಿ

by ಶಾಲಿನಿ ಕೆ. ಡಿ
March 12, 2026 - 11:19 am
0

Untitled design 2026 03 12T105105.664

ಮದುವೆಯಾದ 3 ತಿಂಗಳಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹ*ತ್ಯೆಗೈದ ಪತ್ನಿ

by ಶಾಲಿನಿ ಕೆ. ಡಿ
March 12, 2026 - 11:01 am
0

Untitled design 2026 03 12T103936.161

ಪೆಟ್ರೋಲ್-ಡೀಸೆಲ್ ಬೆಲೆ ಇಂದು ಯಾವ ಜಿಲ್ಲೆಯಲ್ಲಿ ಎಷ್ಟು? ಸಂಪೂರ್ಣ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
March 12, 2026 - 10:42 am
0

Untitled design 2026 03 12T102536.077

ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

by ಶಾಲಿನಿ ಕೆ. ಡಿ
March 12, 2026 - 10:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T111416.118
    ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ದಾಟಲು ಇರಾನ್ ಅನುಮತಿ
    March 12, 2026 | 0
  • Untitled design 2026 03 12T105105.664
    ಮದುವೆಯಾದ 3 ತಿಂಗಳಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹ*ತ್ಯೆಗೈದ ಪತ್ನಿ
    March 12, 2026 | 0
  • Untitled design 2026 03 12T102536.077
    ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ
    March 12, 2026 | 0
  • Peee
    ಪೆಟ್ರೋಲ್ ದರ ಏರಿಕೆ ಭೀತಿ: ವಾಟರ್ ಜಾರ್‌ಗೆ ಪೆಟ್ರೋಲ್ ತುಂಬಿಸಿದ ವಾಹನ ಸವಾರ.!
    March 12, 2026 | 0
  • Untitled design 2026 03 12T092407.180
    ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version