• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನನಗೆ ಕಾಂಗ್ರೆಸ್‌ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯ ಇಲ್ಲ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 3:09 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 21T150327.437

ಬೆಂಗಳೂರು, ಡಿ.21: “ನನಗೆ ಕಾಂಗ್ರೆಸ್‌ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಅವರಿಗೆ ಸಿಎಂ ಆಪ್ತರೇನು? ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ ನವನು. ಅಂದು ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷನನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ” ಎಂದರು.

RelatedPosts

“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!

ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ

ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”

ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದ ಅಂಗಡಿಗೇ ಕನ್ನ!

ADVERTISEMENT
ADVERTISEMENT

ರಾಜಕೀಯ ಬೆಂಬಲಕ್ಕೆ ಕೆ.ಎನ್. ರಾಜಣ್ಣ ಹಾಗೂ ನೀವು ಭೇಟಿ ಮಾಡಿದ್ದೀರಿ ಎಂದಾಗ, “ನಾವು ಸಹೋದ್ಯೋಗಿಗಳು. ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 16 ವರ್ಷಗಳಿಂದ, ಅವರು ನಮ್ಮ ಪಕ್ಷಕ್ಕೆ ಬಂದ ದಿನದಿಂದ ನನಗೂ ಮುಖ್ಯಮಂತ್ರಿಯವರಿಗೂ ಬಿನ್ನಾಭಿಪ್ರಾಯಗಳು ಏನಾದರೂ ಇದೆಯಾ? ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳು, ವಿರೋಧ ಪಕ್ಷಗಳು ಸೃಷ್ಟಿ ಮಾಡುತ್ತಿವೆ. ತಮಗೆ ಬೇಕಾದ ಆಹಾರ ಸೃಷ್ಟಿಸುತ್ತಿದ್ದಾರೆ.

ಕೆಲವು ಸಂದರ್ಭಗಳಲ್ಲಿ ರಾಜಕೀಯವಾಗಿ ಹೇಳಿಕೆ ಕೊಟ್ಟಿರುತ್ತಾರೆ. ಇದಕ್ಕೆ ಬೇಸರ ಮಾಡಿಕೊಳ್ಳಲು ಆಗುತ್ತದೆಯೇ? ಅಣ್ಣ ತಮ್ಮಂದಿರೇ ಜಗಳ ಮಾಡುತ್ತಾರಂತೆ, ಇನ್ನು ನಮ್ಮದು ಯಾವ ಜಗಳ” ಎಂದರು.

“ಎಲ್ಲಾ ಕಾಂಗ್ರೆಸ್ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ನನ್ನ ಸ್ನೇಹಿತರು, ಸಹೋದ್ಯೋಗಿಗಳು, ಒಟ್ಟಿಗೆ ಇದ್ದೇವೆ. ನಾನಂತು ಯಾರ ಮೇಲೂ ಜಗಳ ಮಾಡಲು ಹೋಗಿಲ್ಲ. ಯಾವ ವಿಚಾರಕ್ಕೂ ಒಬ್ಬರ ಮೇಲೆ ಇನ್ನೊಬ್ಬರು ಇದುವರೆಗೂ ಹೇಳಿಕೆ ನೀಡಿಲ್ಲ. ದಾಖಲೆಗಳನ್ನು ತೆಗೆದು ನೋಡಿ. ವಿರೋಧ ಪಕ್ಷದವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ಹೊರತು ನಾನಾಗಿಯೇ ಯಾರ ಮೇಲೂ ಹೇಳಿಕೆ ನೀಡಿಲ್ಲ. ನಾನಾಗಿಯೇ ಒಬ್ಬರ ಮೇಲಾದರೂ ಹೇಳಿಕೆ ನೀಡಿದ್ದರೆ ತಿಳಿಸಿ” ಎಂದರು.

“ರಾಜಣ್ಣ ಅವರು ನಮ್ಮ ಶಾಸಕರು, ನಮ್ಮ ಜತೆ ಮಂತ್ರಿಯಾಗಿದ್ದವರು. ಸೌಹಾರ್ದಯುತ ಭೇಟಿ ಮಾಡುತ್ತೇವೆ. ಶನಿವಾರ ಸರಿಯಾಗಿ ಮಾತನಾಡಲು ಆಗಲಿಲ್ಲ. ಅದಕ್ಕೆ ಇಂದು (ಭಾನುವಾರ) ಸಹ ಭೇಟಿ ಮಾಡುತ್ತೇನೆ ಎಂದು ಹೇಳಿದ್ದೇನೆ. ರಾಜ್ಯಪಾಲರ ಕಾರ್ಯಕ್ರಮ ಇರುವ ಕಾರಣಕ್ಕೆ ಆನಂತರ ಭೇಟಿ ಮಾಡುತ್ತೇನೆ”ಎಂದರು.

ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ

ಬಿ.ಆರ್. ಸುದರ್ಶನ ಅವರು ಎಲ್ಲಾ ಗೊಂದಲಗಳನ್ನು ಬಗೆಹರಿಸಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ‌ ಬರೆದಿರುವ ಬಗ್ಗೆ ಕೇಳಿದಾಗ, “ನನ್ನ ಪ್ರಕಾರ ಯಾವ ಗೊಂದಲವೂ ಇಲ್ಲ. ಗೊಂದಲ ಎಲ್ಲಿದೆ. ಗೊಂದಲ ಮಾಧ್ಯಮ‌ ಹಾಗೂ ಬಿಜೆಪಿ ಸೃಷ್ಟಿ. ಅವರ ಪಕ್ಷದಲ್ಲಿ ಸಾಕಷ್ಟು ತೊಂದರೆಗಳಿವೆ ಅದಕ್ಕೆ ‌ಮಾಡುತ್ತಿದ್ದಾರೆ. ಮಾಧ್ಯಮಗಳಿಗೂ ಸುದ್ದಿ ಬೇಕು. ಅದಕ್ಕೆ ದಿನಾ ತೋರಿಸುತ್ತಿದ್ದೀರಿ ಅಷ್ಟೇ” ಎಂದರು.

ಪರಮೇಶ್ವರ್ ಅವರು ಸಹ ಗೊಂದಲ‌ ಬಗೆಹರಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಕೇಳಿದಾಗ, “ನಾನು ಅವರ ವಕ್ತಾರನಲ್ಲ. ಅವರು ಬಹಳ ನಾಯಕರು ಉತ್ತರ ನೀಡುತ್ತಾರೆ” ಎಂದರು.

ಜನರ ಆಶೀರ್ವಾದವೇ ನನಗೆ ಆತ್ಮ ವಿಶ್ವಾಸ

ಹೆಚ್ಚು ಆತ್ಮವಿಶ್ವಾಸ ಇರುವಂತೆ ಕಾಣುತ್ತಿದ್ದೀರಿ ಎಂದು ಕೇಳಿದಾಗ, “ನೀವೇ (ಮಾಧ್ಯಮಗಳ) ನನಗೆ ಆತ್ಮವಿಶ್ವಾಸ. ಅನವಶ್ಯಕ ಪ್ರಚಾರ ನೀಡುತ್ತಿದ್ದೀರಿ. ಜನರ ಆಶೀರ್ವಾದವೇ ನನಗೆ ಆತ್ಮವಿಶ್ವಾಸ” ಎಂದರು.

ಹೈಕಮಾಂಡ್ ನಿಂದ ಫೋನ್ ಕರೆ ಬರುವ ಮುಂಚೆಯೇ ಆತ್ಮವಿಶ್ವಾಸ ಕಾಣುತ್ತಿದೆ ಎಂದಾಗ, “ಈಗ ತಾನೇ ಹೈಕಮಾಂಡ್ ನಾಯಕರ ಜತೆ ಮಾತನಾಡಿದೆ. ಪರಿಷತ್ ಚುನಾವಣೆ ವಿಚಾರವಾಗಿ ನಾಲ್ಕು ಜನಕ್ಕೆ ಬಿ ಫಾರಂ ನೀಡುವ ವಿಚಾರ ಚರ್ಚೆ ನಡೆಸಿದೆ. ಹೆಸರನ್ನು ಘೋಷಿಸಿ ಎಂದು ಚರ್ಚೆ ನಡೆಸಿದೆ” ಎಂದರು.

ಹೈಕಮಾಂಡ್ ಭೇಟಿಗೆ ದಿನಾಂಕ ನಿಗದಿಯಾಗಿದೆಯೇ ಎಂದಾಗ, “ಎಲ್ಲಿಗೆ ಹೋದರು ರಾಜಕೀಯಕ್ಕೆ ಬರುತ್ತಿದ್ದೀರಿ. ರಸ್ತೆಗುಂಡಿ ವಿಚಾರ ಬಿಡಲಾಯಿತು. ಎಲ್ಲಾ ಗುಂಡಿ‌ ಮುಚ್ಚಲಾಗಿದೆ. ನಮ್ಮ ಜಿಬಿಎ ಆಯುಕ್ತರು ಬೆಳಿಗ್ಗೆ ಸಂಜೆ ಓಡಾಡಿ ಕೆಲಸ ಮಾಡುತ್ತಿದ್ದಾರೆ ಅದನ್ನೂ ತೋರಿಸುತ್ತಿಲ್ಲ” ಎಂದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

14

“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!

by ಪವಿತ್ರಾ ಗಣಪತಿ
June 5, 2026 - 1:44 pm
0

13

ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ

by ಪವಿತ್ರಾ ಗಣಪತಿ
June 5, 2026 - 1:23 pm
0

12

ಚಿನ್ನದ ಬೆಲೆ 2 ದಿನಗಳಲ್ಲಿ 45 ರೂ. ಇಳಿಕೆ; ಬೆಳ್ಳಿ ಬೆಲೆಯಲ್ಲೂ ಕುಸಿತ

by ಪವಿತ್ರಾ ಗಣಪತಿ
June 5, 2026 - 12:40 pm
0

11

ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”

by ಪವಿತ್ರಾ ಗಣಪತಿ
June 5, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • 14
    “ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!
    June 5, 2026 | 0
  • 13
    ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ
    June 5, 2026 | 0
  • 11
    ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”
    June 5, 2026 | 0
  • 09
    ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದ ಅಂಗಡಿಗೇ ಕನ್ನ!
    June 5, 2026 | 0
  • 08
    ಸರ್ಕಾರಿ ಆಸ್ಪತ್ರೆಯಲ್ಲಿ ಬಡವರ ರಕ್ತ ಹೀರುವ ಭ್ರಷ್ಟಾಚಾರ! KC ಜನರಲ್ ಆಸ್ಪತ್ರೆಯಲ್ಲಿ ದುಡ್ಡು ಕೊಟ್ರೆ ಮಾತ್ರ ಕೆಲಸ
    June 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version