• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಬಳ್ಳಾರಿ ಯುವಕ ಸಾವು, ಮೂವರ ಸ್ಥಿತಿ ಗಂಭೀರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 10:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 29T222806.978

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಉಂಟಾಗುವ ದುರಂತಗಳು ದಿನೇ ದಿನೇ ಹೆಚ್ಚುತ್ತಿವೆ. ಇದೀಗ ನಗರದ ಕುಂದಲಹಳ್ಳಿ ಪ್ರದೇಶದಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕುಂದಲಹಳ್ಳಿ ಬಳಿ ‘ಸೆವೆನ್ ಹಿಲ್ಸ್ ಕೋ-ಲಿವಿಂಗ್’ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭೀಕರ ಸ್ಪೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬಳ್ಳಾರಿ ಮೂಲದ ಅರವಿಂದ್ ಎಂಬ ಯುವಕ ಸಾವನ್ನಪ್ಪಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.

ಈ ಘಟನೆ ಪಿಜಿಯ ಕೆಳಮಹಡಿಯಲ್ಲಿ ಇರುವ ಕಿಚನ್ ಸ್ಟೋರ್‌ನಲ್ಲಿ ನಡೆದಿದೆ ಎನ್ನಲಾಗಿದೆ. ದಿನನಿತ್ಯದ ಅಡುಗೆ ಕಾರ್ಯಕ್ಕಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್‌ನಲ್ಲಿ ಏಕಾಏಕಿ ಸೋರಿಕೆಯಾಗಿ, ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದಿಂದ ಕಿಚನ್ ಸಂಪೂರ್ಣವಾಗಿ ಹಾನಿಯಾಗಿದೆ.

ಸಿಲಿಂಡರ್ ಸ್ಪೋಟದ ವೇಳೆ ಅರವಿಂದ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರವಿಂದ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇನ್ನೂ ಮೂವರು ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತ ಅರವಿಂದ್ ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿದ್ದು, ಉದ್ಯೋಗದ ನಿಮಿತ್ತ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ.  ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಕೆಲಕಾಲ ಪಿಜಿಯಲ್ಲಿದ್ದವರನ್ನು ಹೊರಗೆ ಕರೆತರುವಲ್ಲಿ ಸಿಬ್ಬಂದಿಗೆ ಹರಸಾಹಸ ಪಡಬೇಕಾಯಿತು.

ಘಟನೆಯ ಮಾಹಿತಿ ಪಡೆದ ಹೆಚ್‌ಎಎಲ್ ಪೊಲೀಸ್ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು.

https://youtu.be/RVPiOVmmF3A?si=LgZUW8qdOMPPol2i

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಉದ್ಘಾಟನೆಗೂ ಮುನ್ನವೇ ಕಾಫಿ ಶಾಪ್‌ ಬ್ಲಾಸ್ಟ್

 

ಬೆಂಗಳೂರು ಉತ್ತರ ತಾಲೂಕಿನ ಅಚ್ಯುತನಗರದಲ್ಲಿ ಗ್ಯಾಸ್ ಸೋರಿಕೆಯಿಂದ ಸಂಭವಿಸಿದ ಭೀಕರ ಅಗ್ನಿ ದುರಂತವೊಂದು ನಡೆದಿದೆ. ಉದ್ಘಾಟನೆಗೆ ಸಿದ್ಧವಾಗಿದ್ದ ಕಾಫಿ ಶಾಪ್ ಸುಟ್ಟು ಭಸ್ಮವಾಗಿಸಿದೆ. ಕಾಫಿ ಆಂಡ್ ಕೋ ಹೆಸರಿನ ಈ ಕಾಫಿ ಶಾಪ್ ಅನ್ನು ಭುವದಾಸ್ ಅವರು ಪ್ರಾರಂಭಿಸಲು ಸಜ್ಜಾಗಿದ್ದರು, ಸುಜಯ್ ಎಂಬುವರ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ದುರಂತದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಒಂದೇ ಸಮಾಧಾನ.

RelatedPosts

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

“ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ

ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3 ವರ್ಷದ ಮಗು ಸಾವು

ADVERTISEMENT
ADVERTISEMENT

ದುರಂತದ ದಿನದಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ, ಕಾಫಿ ಶಾಪ್‌ಗೆ ಭಾರತ್ ಫ್ಯೂಲ್ ಏಜೆನ್ಸಿಯಿಂದ ಎರಡು ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳನ್ನು ಖರೀದಿಸಲಾಗಿತ್ತು. ಖರೀದಿಯಾದ ಒಂದು ಗಂಟೆಯೊಳಗೆ, ಗ್ಯಾಸ್ ಸೋರಿಕೆಯಿಂದ ಸಿಲಿಂಡರ್‌ನಲ್ಲಿ ಬ್ಲಾಸ್ಟ್ ಸಂಭವಿಸಿದ್ದು, ಕಾಫಿ ಶಾಪ್ ಧಗಧಗನೆ ಹೊತ್ತಿ ಉರಿಯಿತು. ಈ ಘಟನೆಯಿಂದ ಕಾಫಿ ಶಾಪ್‌ನ ಒಳಗಿದ್ದವರು ಪವಾಡ ದೃಶ ರೀತಿಯಲ್ಲಿ ಪಾರಾಗಿದ್ದಾರೆ. ಆದರೆ, ಶಾಪ್‌ನ ಎಲ್ಲಾ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಕಾಫಿ ಶಾಪ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಕೇರಳದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಆಕರ್ಷಿಸುವ ಉದ್ದೇಶದಿಂದ ಕಾಫಿ ಆಂಡ್ ಕೋ ಶಾಪ್‌ನ್ನು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿತ್ತು. ಸಂಜೆಯ ವೇಳೆಗೆ ಶಾಪ್‌ನ ಉದ್ಘಾಟನೆಗೆ ಎಲ್ಲ ಸಿದ್ಧತೆಗಳು ನಡೆದಿದ್ದವು. ಆದರೆ, ಬೆಳಿಗ್ಗೆ ನಡೆದ ಈ ದುರಂತವು ಎಲ್ಲ ಯೋಜನೆಗಳನ್ನು ಧ್ವಂಸಗೊಳಿಸಿತು.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಭಾರತ್ ಫ್ಯೂಲ್ ಏಜೆನ್ಸಿಯ ವಿರುದ್ಧ ಕಳಪೆ ಗುಣಮಟ್ಟದ ಸಿಲಿಂಡರ್ ಪೂರೈಕೆ ಮಾಡಿದ ಆರೋಪದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಘಟನೆಯ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ.

ಕಾಫಿ ಶಾಪ್‌ನ ಪಕ್ಕದಲ್ಲೇ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ಇದ್ದು, ಘಟನೆ ಸ್ವಲ್ಪ ದೊಡ್ಡ ಪ್ರಮಾಣದಲ್ಲಿ ಸಂಭವಿಸಿದ್ದರೆ, ಗಂಭೀರ ಸಾವು-ನೋವುಗಳು ಉಂಟಾಗುವ ಸಾಧ್ಯತೆಯಿತ್ತು. ಆದರೆ, ತಕ್ಷಣದ ಕ್ರಮದಿಂದ ಒಳಗಿದ್ದವರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಈ ಘಟನೆಯು ಗ್ಯಾಸ್ ಸಿಲಿಂಡರ್‌ಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಈ ಘಟನೆಯು ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಾತರಿಪಡಿಸುವ ಅಗತ್ಯವನ್ನು ಒತ್ತಿಹೇಳಿದೆ. ವ್ಯಾಪಾರಿಗಳು ಮತ್ತು ಏಜೆನ್ಸಿಗಳು ಸಿಲಿಂಡರ್‌ಗಳನ್ನು ಪೂರೈಸುವ ಮೊದಲು ಕಟ್ಟುನಿಟ್ಟಾದ ಗುಣಮಟ್ಟ ತಪಾಸಣೆ ನಡೆಸಬೇಕು ಎಂಬ ಕರೆ ಜೋರಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (67)

ಜಿಯೋದಿಂದ ಏರ್‌ಟೇಲ್‌ಗೆ ಪೋರ್ಟ್ ಮಾಡಲು ಒಪ್ಪಿಲ್ಲ ಅಂತ ಹೆತ್ತವರ ಕೊಂದ ಮಗ!

by ಶ್ರೀದೇವಿ ಬಿ. ವೈ
June 4, 2026 - 1:32 pm
0

BeFunky collage (66)

“ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು

by ಶ್ರೀದೇವಿ ಬಿ. ವೈ
June 4, 2026 - 12:52 pm
0

BeFunky collage (65)

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ‘ಕಾಕ್ರೋಚ್ ಜನತಾ ಪಕ್ಷ’ದ ಬೃಹತ್ ಜಾಗೃತಿ ರ‍್ಯಾಲಿ

by ಶ್ರೀದೇವಿ ಬಿ. ವೈ
June 4, 2026 - 12:35 pm
0

BeFunky collage (64)

ಒರಾಕಲ್‌ನಲ್ಲಿ ಬೃಹತ್ ಲೇ ಆಫ್! 30,000 ಉದ್ಯೋಗಿಗಳಿಗೆ ಶಾಕ್‌

by ಶ್ರೀದೇವಿ ಬಿ. ವೈ
June 4, 2026 - 12:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (66)
    “ಅಧಿಕಾರ ಬೇಕಾದವರು ಡಿಕೆ ಜೊತೆ ಹೋಗಿ, ಪಕ್ಷಕ್ಕಾಗಿ ನನ್ನ ಜೊತೆ ಬನ್ನಿ : ಬಿ.ಕೆ. ಹರಿಪ್ರಸಾದ್ ಖಡಕ್ ಮಾತು
    June 4, 2026 | 0
  • BeFunky collage (63)
    ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಕೆ! ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ
    June 4, 2026 | 0
  • BeFunky collage (58)
    ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?
    June 4, 2026 | 0
  • BeFunky collage (55)
    ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ
    June 4, 2026 | 0
  • Untitled design 2026 06 03T233417.416
    ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version