• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ರಾಜ್ಯ ರಾಜಕೀಯದಿಂದ ದೂರ ಸರಿಯೋ ಮಾತೇ ಇಲ್ಲ’: ಹೆಚ್‌ಡಿ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 12:50 pm
in Flash News, ಕರ್ನಾಟಕ
0 0
0
Untitled design 2026 01 15T124015.594

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವೇ ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್‌.ಡಿ.ಕುಮಾರಸ್ವಾಮಿ (H.D. Kumaraswamy), “ನಾನು ರಾಜ್ಯ ರಾಜಕೀಯದಿಂದ ದೂರ ಸರಿಯೋ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ ರಾಜಕಾರಣಕ್ಕೆ ನಾನು ಬರುತ್ತೇನೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು, ಯಾವ ಸ್ಥಾನದಲ್ಲಿರಬೇಕು ಎಂಬುದನ್ನು ತೀರ್ಮಾನ ಮಾಡೋದು ನನ್ನ ಕೈಯಲ್ಲಿಲ್ಲ. ರಾಜ್ಯದ ಜನತೆಯೇ ಅದನ್ನು ನಿರ್ಧರಿಸುತ್ತಾರೆ” ಎಂದು ಹೇಳಿದರು. ತಾವು ರಾಜ್ಯ ರಾಜಕೀಯದಿಂದ ದೂರ ಉಳಿಯುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ ಹೆಚ್‌ಡಿಕೆ.

RelatedPosts

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?

ADVERTISEMENT
ADVERTISEMENT

ರಾಜ್ಯದಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿಯ ಬಗ್ಗೆ ಮಾತನಾಡಿದ ಅವರು, “ನಾವು ಮೈತ್ರಿಯ ಒಪ್ಪಂದ ಮಾಡಿಕೊಂಡಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೂ ಅವಕಾಶ ಕೊಡಬಾರದು. ನಮ್ಮ ಉದ್ದೇಶ ಒಂದೇ, ರಾಜ್ಯದಲ್ಲಿ ಒಳ್ಳೆಯ ಸರ್ಕಾರವನ್ನು ತರುವುದು ಮತ್ತು ಜನರನ್ನು ನೆಮ್ಮದಿಯಿಂದ ಬದುಕಿಸುವುದು” ಎಂದು ಹೇಳಿದರು. ವೈಯಕ್ತಿಕ ಆಸೆಗಿಂತ ಜನಹಿತವೇ ಮೊದಲ ಆದ್ಯತೆ ಎಂದು ಹೇಳಿದರು.

ರಾಜ್ಯದ ಆಡಳಿತ ವ್ಯವಸ್ಥೆಯ ಮೇಲೂ ಹೆಚ್‌ಡಿಕೆ ಕಣ್ಣಿಟ್ಟಿದ್ದಾರೆ. “ರಾಜ್ಯದಲ್ಲಿ ಆಡಳಿತ ಹೇಗೆ ನಡೆಯುತ್ತಿದೆ ಎಂಬುದನ್ನು ನಾನು ನಿರಂತರವಾಗಿ ಗಮನಿಸುತ್ತಿದ್ದೇನೆ. ಜನರಿಗೆ ಅನುಕೂಲವಾಗುವ, ಪ್ರಾಮಾಣಿಕ ಆಡಳಿತ ನೀಡುವ ಸರ್ಕಾರ ಬರಬೇಕು” ಎಂದು ಹೇಳಿದರು. ನಾನು ಯಾವ ಸ್ಥಾನದಲ್ಲಿ ಇರಬೇಕು ಎಂಬುದನ್ನು ಜನತೆಯೇ ತೀರ್ಮಾನಿಸಬೇಕು ಎಂದು ತಿಳಿಸಿದರು.

ಕೇಂದ್ರ ಸಚಿವರಾಗಿ ತಮಗೆ ನೀಡಿರುವ ಜವಾಬ್ದಾರಿಯ ಬಗ್ಗೆ ಮಾತನಾಡಿದ ಹೆಚ್‌ಡಿಕೆ, “ಪ್ರಧಾನಮಂತ್ರಿಗಳು ನನಗೆ ಎರಡು ಮಹತ್ವದ ಇಲಾಖೆಗಳನ್ನು ನೀಡಿದ್ದಾರೆ. ಆ ಇಲಾಖೆಗಳ ಮೂಲಕ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡಲು ಈಗಾಗಲೇ ಬಲವಾದ ಅಡಿಪಾಯ ಹಾಕಿದ್ದೇನೆ” ಎಂದು ಹೇಳಿದರು. ಆದರೂ ರಾಜ್ಯ ರಾಜಕೀಯಕ್ಕೆ ಮರಳುವುದು ಅನಿವಾರ್ಯ ಎಂದು ಸೂಚಿಸಿದ ಅವರು, “ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅನ್ನೋದನ್ನು ತೀರ್ಮಾನ ಮಾಡ್ತೀನಿ. ಆದರೆ ಬರಲೇಬೇಕಾಗುತ್ತದೆ” ಎಂದು ಹೇಳಿದರು.

ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದ ಕುರಿತು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹೆಚ್‌ಡಿಕೆ, “ಈ ಸರ್ಕಾರ ಬಂದ ಮೇಲೆ ಅಧಿಕಾರಿಗಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಅಧಿಕಾರದಲ್ಲಿರುವವರವರೆಗೂ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಾನೂನುಬಾಹಿರ ತೀರ್ಮಾನ ಮಾಡಿಸ್ತಿದ್ದಾರೆ” ಎಂದು ಆರೋಪಿಸಿದರು.

“ಯಾರೇ ತಪ್ಪು ಮಾಡಿದ್ರೂ ಅವರ ವಿರುದ್ಧ ಕಠಿಣ ಕ್ರಮ ಆಗಬೇಕು. ಯಾವುದೇ ಪಕ್ಷದವರೇ ಆಗಲಿ, ತಪ್ಪಿಗೆ ಮನ್ನಾ ಇರಬಾರದು. ಸರ್ಕಾರ ಗಂಭೀರವಾಗಿ ಕ್ರಮ ತೆಗೆದುಕೊಂಡಿದ್ದರೆ ಇಂತಹ ಘಟನೆಗಳು ಮರುಕಳಿಸೋದಿಲ್ಲ” ಎಂದು ಅವರು ಹೇಳಿದರು. ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಒಳಗಾಗದೇ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು ಎಂಬ ಸಲಹೆ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (79)

ಸದಾ ಎದೆ ಉರಿ, ಅಜೀರ್ಣ ಕಾಡುತ್ತಿದೆಯೇ ? ಅದು ಕೇವಲ ಗ್ಯಾಸ್ಟ್ರಿಕ್ ಅಲ್ಲ, ಕ್ಯಾನ್ಸರ್ ಇರಬಹುದು ಎಚ್ಚರ

by ಯಶಸ್ವಿನಿ ಎಂ
March 6, 2026 - 11:39 pm
0

Untitled design (77)

ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು

by ಯಶಸ್ವಿನಿ ಎಂ
March 6, 2026 - 11:13 pm
0

Untitled design (78)

ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!

by ಯಶಸ್ವಿನಿ ಎಂ
March 6, 2026 - 10:22 pm
0

Untitled design (76)

ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!

by ಯಶಸ್ವಿನಿ ಎಂ
March 6, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (77)
    ಒತ್ತಡದಿಂದ ನಿದ್ದೆ ಬರುತ್ತಿಲ್ಲವೇ ? ಬೇಗ ಮಲಗಲು ಇಲ್ಲಿವೆ ನೋಡಿ ಬೆಸ್ಟ್ ಐಡಿಯಾಗಳು
    March 6, 2026 | 0
  • Untitled design (78)
    ಜಾಗತಿಕ ಯುದ್ದಕ್ಕೆ ಉತ್ತರ ಕೊರಿಯಾ ಎಂಟ್ರಿ ? ಇರಾನ್ ಕೇಳಿದರೆ ಕ್ಷಿಪಣಿ ಪೂರೈಸಲು ಸಿದ್ಧ ಎಂದ ಕಿಮ್ ಜಾಂಗ್ ಉನ್..!
    March 6, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • Untitled design (75)
    ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?
    March 6, 2026 | 0
  • Untitled design (74)
    ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version