• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 16, 2026 - 11:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2026 01 16T234117.739

ಬೀದರ್, ಜ.16: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಇಂದು ರಾತ್ರಿ ಲಿಂಗೈಕ್ಯರಾಗಿದ್ದಾರೆ.

ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು ಇಂದು ವಿಧಿವಶರಾಗಿದ್ದಾರೆ ಎಂದು ಅರಣ್ಯಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

RelatedPosts

ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಬೌಲರ್ ವೈಶಾಕ್..!

ವೈವಾಹಿಕ ಜೀವನಕ್ಕೆ ಕಾಲಿಟ್ಟ ತೆಂಡೂಲ್ಕರ್-ಸಾನಿಯಾ: ಸೆಲೆಬ್ರೆಟಿಗಳ ದಂಡೇ ತುಂಬಿದ ಅದ್ಧೂರಿ ಮದುವೆ!

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ಪೋಕ್ಸೋ ಕೇಸ್‌ನಲ್ಲಿ ಜೈಲುಪಾಲಾದ ಮಲ್ಲಿಕಾರ್ಜುನ ಮುತ್ಯಾ

ADVERTISEMENT
ADVERTISEMENT

ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಹರಚರ ಗುರುಮೂರ್ತಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಭೀಮಣ್ಣ ಖಂಡ್ರೆ ಅವರನ್ನು ನೋಡಿ, ಆರೋಗ್ಯ ವಿಚಾರಿಸಿದ್ದರು. ಹಲವರು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಭೀಮಣ್ಣ ಖಂಡ್ರೆ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು.

ಭೀಮಣ್ಣ ಖಂಡ್ರೆ ಅವರಿಗೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ ಕುಮಾರ ಖಂಡ್ರೆ ಸೇರಿ ಇಬ್ಬರು ಗಂಡು ಮಕ್ಕಳು ಹಾಗೂ ನಾಲ್ವರು ಪುತ್ರಿಯರಿದ್ದಾರೆ. ಇವರ ಮತ್ತೊಬ್ಬ ಪುತ್ರ ಮಾಜಿ ಶಾಸಕ ಡಾ. ವಿಜಯಕುಮಾರ್ ಖಂಡ್ರೆ 2019ರಲ್ಲಿ ನಿಧನಹೊಂದಿದ್ದರು.

ಭೀಮಣ್ಣ ಖಂಡ್ರೆ ಅವರು ವೃತ್ತಿಯಲ್ಲಿ ವಕೀಲರಾಗಿ ಬಡಜನರಿಗೆ ರೈತರಿಗೆ ನ್ಯಾಯ ಕೊಡಿಸುವ ಮೂಲಕ ಜನನಾಯಕರಾಗಿ ಹೊರಹೊಮ್ಮಿದರು. 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು.

1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, 4 ಬಾರಿ ಶಾಸಕರಾಗಿ, 2 ಬಾರಿ ವಿಧಾನಪರಿಷತ್ ಸದಸ್ಯರಾಗಿ, ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1976ರಲ್ಲಿ ಕೆಲವು ಅಧಿಕಾರಿಗಳು ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮದಡಿ ಬಲವಂತದಿಂದ ಯುವಜನರಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸುತ್ತಿದ್ದುದನ್ನು ಖಂಡಿಸಿ, ತಾವೇ ಜನರ ಮನವೊಲಿಸಿ ಒಂದೇ ದಿನದಲ್ಲಿ 2500ಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವಂತೆ ಮನವೊಲಿಸಿದ್ದರು ಅಂದು ಬಿಬಿಸಿಯಲ್ಲಿ ಈ ಸುದ್ದಿ ಪ್ರಸಾರವಾಗಿತ್ತು.

ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯ ಮಹಾತ್ಮಾ ಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾರಂಜಾ ಮತ್ತು ಕಾರಂಜಾ ನೀರಾವರಿ ಯೋಜನೆಗಳ ಅನುಷ್ಠಾನದಲ್ಲೂ ಭೀಮಣ್ಣ ಖಂಡ್ರೆ ಪ್ರಮುಖ ಪಾತ್ರ ವಹಿಸಿದ್ದರು.
ಸ್ವಾತಂತ್ರ್ಯ ಸೇನಾನಿಯಾಗಿ, ಹೈದ್ರಾಬಾದ್ ವಿಮೋಚನೆಯ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯ ಪ್ರತಿಭಟಿಸಿದ್ದ ಅವರು, ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಲು ಶ್ರಮಿಸಿದ್ದರು. ಅವರ ಈ ಕೊಡುಗೆಗಾಗಿ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿ ಸಹ ಅವರಿಗೆ ಲಭಿಸಿತ್ತು.

ಶಾಂತಿವರ್ಧಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಜಿಲ್ಲೆಯ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸಲು ಬೀದರ್ ನಲ್ಲಿ ಅಕ್ಕಮಹಾದೇವಿ ಕಾಲೇಜು, ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಸಾವಿರಾರು ಯುವಜನರ ಭವಿಷ್ಯ ರೂಪಿಸಿದ್ದರು. ತಮ್ಮ ಸ್ವಕ್ಷೇತ್ರ ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಸಲುವಾಗಿ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು.

ತಮ್ಮ ದೀಕ್ಷಾ ಗುರು ಲಿಂಗೈಕ್ಯ ಡಾ. ಚನ್ನಬಸವ ಪಟ್ಟದ್ದೇವರ ಆಣತಿಯಂತೆ ಬಸವಕಲ್ಯಾಣದಲ್ಲಿ ಈಗಿರುವ ಶಿವಲಿಂಗಾಕಾರದ ಅನುಭವ ಮಂಟಪ ನಿರ್ಮಾಣಕ್ಕೆ ತಮ್ಮನ್ನೇ ತಾವು ಅರ್ಪಿಸಿದ್ದ ಅವರು, ಸ್ವಯಂ ತಲೆಯ ಮೇಲೆ ಮರಳು, ಜಲ್ಲಿಯ ಕಾಂಕ್ರೀಟ್ ಹೊತ್ತು ಕಾಮಗಾರಿ ಪೂರ್ಣಗೊಳಿಸಲು ಶ್ರಮಿಸಿದ್ದರು.

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಒಗ್ಗೂಡಿಸುವಲ್ಲಿ ಶ್ರಮಿಸಿದ ಅವರು ಕೆಲವೇ ಸಾವಿರ ಇದ್ದ ಸಭಾದ ಸದಸ್ಯತ್ವವನ್ನು ಲಕ್ಷಕ್ಕೆ ತೆಗೆದುಕೊಂಡು ಹೋಗುವ ಮೂಲಕ ತಮ್ಮ ಸಂಘಟನಾ ಸಾಮರ್ಥ್ಯ ಪ್ರದರ್ಶಿಸಿದ್ದರು.

ಬಾಲ್ಯದಲ್ಲಿ ತೀವ್ರ ಅನಾರೋಗ್ಯಪೀಡಿತರಾದಾಗ ಮುಚಳಂಬದ ಸದ್ಗುರು ಶ್ರೀ ನಾಗಭೂಷಣ ಶಿವಯೋಗಿಗಳಿಂದ ಯೋಗ ಕಲಿತು ನಿತ್ಯ ಯೋಗ, ಪ್ರಾಣಾಯಾಮ ಹಾಗೂ ಇಷ್ಟಲಿಂಗ ಪೂಜೆ ಮಾಡುತ್ತಾ, ಶುದ್ಧ ಸಸ್ಯಾಹಾರವನ್ನಷ್ಟೇ ಸ್ವೀಕರಿಸುತ್ತಿರುವುದೇ ತಮ್ಮ ಶತಾಯುಷ್ಯದ ಗುಟ್ಟು ಎಂದು ಹೇಳುತ್ತಿದ್ದ ಭೀಮಣ್ಣಖಂಡ್ರೆ ಅವರು ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರ ಪರಮ ಭಕ್ತರಾಗಿದ್ದರು. ಭೀಮಣ್ಣ ಖಂಡ್ರೆ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಪಟ್ಟದ್ದೇವರು ಭೀಮಣ್ಣ ಅವರಿಗೆ ಲೋಕನಾಯಕ ಎಂಬ ಬಿರುದು ನೀಡಿದ್ದರು. ಸದ್ಯ ಅವರ ಅಗಲಿಕೆಗೆ ಸಾವಿರಾರು ಅನುಯಾಯಿಗಳು ಸಂತಾಪ ಸೂಚಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

'ನಾಗಬಂಧಂ'

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’

by ಶ್ರೀದೇವಿ ಬಿ. ವೈ
March 5, 2026 - 6:13 pm
0

BeFunky collage 2026 03 05T181015.010

ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 6:08 pm
0

KVN..ಧ್ರುವ, ದಳಪತಿ, ಯಶ್

ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 6:01 pm
0

RCB ಮಾಜಿ ವೇಗಿ ವೈಶಾಕ್ ವಿಜಯ್ ಕುಮಾರ್ ಮದುವೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಬೌಲರ್ ವೈಶಾಕ್..!

by ಶ್ರೀದೇವಿ ಬಿ. ವೈ
March 5, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • RCB ಮಾಜಿ ವೇಗಿ ವೈಶಾಕ್ ವಿಜಯ್ ಕುಮಾರ್ ಮದುವೆ
    ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಬೌಲರ್ ವೈಶಾಕ್..!
    March 5, 2026 | 0
  • ಅರ್ಜುನ್ ತೆಂಡೂಲ್ಕರ್-ಸಾನಿಯಾ ಮದುವೆ
    ವೈವಾಹಿಕ ಜೀವನಕ್ಕೆ ಕಾಲಿಟ್ಟ ತೆಂಡೂಲ್ಕರ್-ಸಾನಿಯಾ: ಸೆಲೆಬ್ರೆಟಿಗಳ ದಂಡೇ ತುಂಬಿದ ಅದ್ಧೂರಿ ಮದುವೆ!
    March 5, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮಲ್ಲಿಕಾರ್ಜುನ ಮುತ್ಯಾ ಪೋಕ್ಸೋ ಕೇಸ್
    ಪೋಕ್ಸೋ ಕೇಸ್‌ನಲ್ಲಿ ಜೈಲುಪಾಲಾದ ಮಲ್ಲಿಕಾರ್ಜುನ ಮುತ್ಯಾ
    March 5, 2026 | 0
  • ಬೆಂಗಳೂರು ಮದುವೆಯಾದವರಿಗೆ ದುಬಾರಿ
    ಒಂದಾ ಇಬ್ಬರು ದುಡಿಯಬೇಕು, ಇಲ್ಲ ಊರು ಬಿಡಬೇಕು: ಮದುವೆಯಾದವರಿಗೆ ಬೆಂಗಳೂರು ದುಬಾರಿ
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version