ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಉತ್ತೇಜನ ನೀಡಲಾಗಿದೆ. ಜಾತಿ ಆಧಾರಿತ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸುವುದು, ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ, ಹೊಸ ಕೋರ್ಸುಗಳ ಆರಂಭ, ವಿದ್ಯಾರ್ಥಿನಿಯರಿಗೆ ವಿಶೇಷ ಸೌಲಭ್ಯಗಳು ಮತ್ತು 2,000 ಬೋಧಕ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಕ್ರಮಗಳು ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯ ಗುಣಮಟ್ಟವನ್ನು ಏರಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ನಿರೀಕ್ಷೆಯನ್ನು ಮೂಡಿಸಿದೆ.
ಪ್ರಮುಖ ಘೋಷಣೆಗಳು ಮತ್ತು ಅನುದಾನ :
ADVERTISEMENT
ADVERTISEMENT
- ರೋಹಿತ್ ವೇಮುಲ ಕಾಯ್ದೆ ಜಾರಿ : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ, ಕಿರುಕುಳ ತಡೆಗೆ ಕಟ್ಟುನಿಟ್ಟಿನ ಕಾಯ್ದೆ ಅನುಷ್ಠಾನ.
- 2,000 ಬೋಧಕ ಹುದ್ದೆಗಳ ಭರ್ತಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ ಸಂಸ್ಥೆಗಳು ಮತ್ತು ಯೂವಿಸಿಇ ವಿಶ್ವವಿದ್ಯಾಲಯದಲ್ಲಿ ಶೀಘ್ರ ಭರ್ತಿ ಪ್ರಕ್ರಿಯೆ
- ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳ ಬಲವರ್ಧನೆಗೆ ADB ನೆರವಿನೊಂದಿಗೆ ₹2,500 ಕೋಟಿ ವೆಚ್ಚದ “ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ”
- 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ ಸಂಸ್ಥೆಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸುವುದು
- ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಗೆ 9 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ
- ವಿದ್ಯಾರ್ಥಿನಿಯರಿಗೆ ವಿಶೇಷ ಸೌಲಭ್ಯ : ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್ ಮತ್ತು 3 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಮೂಲಸೌಕರ್ಯಕ್ಕೆ ₹31 ಕೋಟಿ ವೆಚ್ಚ
- 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೀಠೋಪಕರಣಗಳು, ಕಟ್ಟಡ ದುರಸ್ತಿ ಮತ್ತು ನವೀಕರಣಕ್ಕೆ ₹100 ಕೋಟಿ (ಮೂರು ವರ್ಷಗಳಲ್ಲಿ)
- ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಮತ್ತು 5 ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಸೌಕರ್ಯಕ್ಕೆ ವಿಶೇಷ ಅನುದಾನ
- ಹೊಸ ಕಾಲೇಜುಗಳ ಸ್ಥಾಪನೆ
- ವಿಜಯಪುರದ ಚಡಚಣ, ಬೆಳಗಾವಿ ಗ್ರಾಮಾಂತರ, ಮೈಸೂರು ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು
- ರಾಯಚೂರು ಮಸ್ಕಿಯಲ್ಲಿ ಕಲ್ಯಾಣ ಕರ್ನಾಟಕ ಮಂಡಳಿ ಅನುದಾನದಿಂದ ಹೊಸ ಕಾಲೇಜು
- ನಿಂಬರಗಾ (ಕಲಬುರಗಿ), ಕಕ್ಕೇರಾ (ಯಾದಗಿರಿ), ಅಂಬಾಮಠ (ರಾಯಚೂರು), ಬೇವೂರು (ಕೊಪ್ಪಳ)ಯಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳು – ತಲಾ ₹18 ಕೋಟಿ ವೆಚ್ಚ
- ಹೊಸ ತಂತ್ರಜ್ಞಾನಾಧಾರಿತ ಕೋರ್ಸುಗಳು 11 ಪಾಲಿಟೆಕ್ನಿಕ್ ಮತ್ತು ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಸೇರಿದಂತೆ 15 ಹೊಸ ಕೋರ್ಸುಗಳ ಆರಂಭ
- ಮಹಿಳಾ ಪದವೀಧರರ ಕೌಶಲ್ಯಾಭಿವೃದ್ಧಿ AnitaB.org India ಜೊತೆಗೆ ಸಹಭಾಗಿತ್ವದಲ್ಲಿ STEM ಕ್ಷೇತ್ರದ 3,000 ಮಹಿಳಾ ಪದವೀಧರರಿಗೆ ₹13.50 ಕೋಟಿ ವೆಚ್ಚದ ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿನಿರತ ತರಬೇತಿ
- ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಅನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ₹500 ಕೋಟಿ ಯೋಜನೆ (ಈ ವರ್ಷ ₹100 ಕೋಟಿ ಹಂಚಿಕೆ)
- ದೀಪಿಕಾ ವಿದ್ಯಾರ್ಥಿ ವೇತನ ಯೋಜನೆ ಮುಂದುವರಿಕೆ. 10 ಮತ್ತು 12ನೇ ತರಗತಿ ಪೂರ್ಣಗೊಳಿಸಿ ಉನ್ನತ ಶಿಕ್ಷಣ ಮುಂದುವರಿಸುವ 37,000 ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ₹30,000 ವೇತನ
- ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯ
- ಹೆಸರಘಟ್ಟ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಸೌಂಡ್ ರೆಕಾರ್ಡಿಂಗ್ ಮತ್ತು ಸಿನಿಮಾಟೋಗ್ರಫಿ ಕೋರ್ಸುಗಳಿಗೆ ಆಧುನಿಕ ಉಪಕರಣಗಳು
- ಧಾರವಾಡ ಮತ್ತು ಬೆಂಗಳೂರಿನಲ್ಲಿ ತಲಾ ₹10 ಕೋಟಿ ವೆಚ್ಚದ ಡಿಜಿಟಲ್ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರಗಳ ಸ್ಥಾಪನೆ
- NCC ಚಟುವಟಿಕೆಗಳು ಪ್ರಸ್ತುತ 96,000 ಕ್ಯಾಡೆಟ್‌ಗಳ ಸಂಖ್ಯೆಯನ್ನು ಮುಂದಿನ ಎರಡು ವರ್ಷಗಳಲ್ಲಿ 10,000 ಹೆಚ್ಚಿಸುವ ಗುರಿ
- ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು ನೀಡುವ ನಿರ್ಧಾರ.
ಈ ಘೋಷಣೆಗಳು ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಥ, ಸಮಾನತೆಯುಕ್ತ ಮತ್ತು ಆಧುನಿಕಗೊಳಿಸುವ ದಿಕ್ಕಿನಲ್ಲಿ ದೊಡ್ಡ ಹೆಜ್ಜೆಯಾಗಿದೆ.





