• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2026 - 1:47 pm
in Flash News, ದೇಶ
0 0
0
Untitled design 2026 03 11T132619.070

RelatedPosts

ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರ ಬಾಂಬ್ ಅಳವಡಿಸಿದ ಇರಾನ್: ಟ್ರಂಪ್ ಕೆಂಡಾಮಂಡಲ! ಏನಿದು ನೇವಲ್ ಮೈನ್ಸ್..?

ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!

ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು

ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು

ADVERTISEMENT
ADVERTISEMENT

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯದ ಚರ್ಚೆ ಲೋಕಸಭೆಯಲ್ಲಿ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಯಿತು. ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆದಿದ್ದು, ಸದನದ ವಾತಾವರಣ ಕ್ಷಣಕ್ಷಣಕ್ಕೂ ತೀವ್ರಗೊಂಡಿತು.

ವಿರೋಧ ಪಕ್ಷಗಳ ಸಂಸದರು ಸ್ಪೀಕರ್ ಸರ್ಕಾರದ ಒತ್ತಡಕ್ಕೆ ಒಳಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಸಂಸತ್ತಿನ ಕಲಾಪಗಳನ್ನು ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿ ನಡೆಸುವ ಸ್ಪೀಕರ್ ಬೇಕು ಎಂದು ಅವರು ಒತ್ತಾಯಿಸಿದರು. ಆದರೆ ಆಡಳಿತ ಪಕ್ಷದ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರ ನಡೆ ನ್ಯಾಯಯುತವಾಗಿದೆ ಎಂದು ಬಲವಾಗಿ ಸಮರ್ಥಿಸಿದರು.

ವಿರೋಧ ಪಕ್ಷದ ನಾಯಕರು ಮಾತನಾಡುತ್ತಾ, ಬಿರ್ಲಾ ವ್ಯಕ್ತಿಯಾಗಿ ಸಜ್ಜನರಾಗಿದ್ದರೂ ಸರ್ಕಾರದ ಒತ್ತಡದ ಕಾರಣದಿಂದ ಕೆಲ ನಿರ್ಧಾರಗಳಲ್ಲಿ ಪಕ್ಷಪಾತ ಕಾಣಿಸುತ್ತಿದೆ ಎಂದು ಆರೋಪಿಸಿದರು. ಡಿಎಂಕೆ ನಾಯಕ ಟಿ.ಆರ್. ಬಾಲು ಮಾತನಾಡಿ, “ಬಿರ್ಲಾ ಅವರು ಸಜ್ಜನ ವ್ಯಕ್ತಿ. ಆದರೆ ವಿರೋಧ ಪಕ್ಷಗಳ ಸದಸ್ಯರ ವಿರುದ್ಧ ತೆಗೆದುಕೊಂಡಿರುವ ಕಠಿಣ ಕ್ರಮಗಳು ವಿಷಾದಕರ. ತಮ್ಮ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಟಿಡಿಪಿ ಸಂಸದ ಲಾವು ಶ್ರೀಕೃಷ್ಣ ದೇವರಾಯಲು ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದರು. “ನಾವು ಈ ಅವಿಶ್ವಾಸ ನಿರ್ಣಯವನ್ನು ಜಯಕ್ಕಾಗಿ ತರಲ್ಲ. ಆದರೆ ಸಂಸತ್ತಿನ ಕಾರ್ಯವೈಖರಿಯಲ್ಲಿ ಕೆಲವು ಮಹತ್ವದ ಬದಲಾವಣೆಗಳು ಆಗಬೇಕೆಂಬ ಉದ್ದೇಶದಿಂದ ಈ ನಿರ್ಣಯ ಮಂಡಿಸಲಾಗಿದೆ” ಎಂದು ಹೇಳಿದರು.

ಇದೇ ವೇಳೆ ಶಿವಸೇನಾ (ಯುಬಿಟಿ) ಸಂಸದ ಅರವಿಂದ್ ಸಾವಂತ್ ಮಾತನಾಡಿ, “ಸ್ಪೀಕರ್ ಓಂ ಬಿರ್ಲಾ ಒಳ್ಳೆಯ ವ್ಯಕ್ತಿ. ಆದರೆ ವಿರೋಧ ಪಕ್ಷದ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಅವರಿಗೆ ಹೆಚ್ಚು ಒತ್ತಡ ಬರುತ್ತಿದೆ ಎಂಬುದು ಗೋಚರಿಸುತ್ತಿದೆ” ಎಂದು ಅಭಿಪ್ರಾಯಪಟ್ಟರು.

ಈ ನಡುವೆ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತೀವ್ರ ವಾಗ್ದಾಳಿ ನಡೆಸಿದರು. “2014ರಲ್ಲಿ ಅಧಿಕಾರ ಕಳೆದುಕೊಂಡ ನಂತರ ಕಾಂಗ್ರೆಸ್ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದೆ. ಈಗ ಸ್ಪೀಕರ್ ಹುದ್ದೆಯನ್ನೇ ಗುರಿಯಾಗಿಸಿಕೊಂಡು ರಾಜಕೀಯ ನಡೆಸುತ್ತಿದೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ” ಎಂದು ಅವರು ಆರೋಪಿಸಿದರು.

ಸ್ಪೀಕರ್ ಸ್ಥಾನದಲ್ಲಿದ್ದುಕೊಂಡು ಓಂ ಬಿರ್ಲಾ ತೆಗೆದುಕೊಂಡಿರುವ ಎಲ್ಲ ಕ್ರಮಗಳನ್ನು ರಿಜಿಜು ಸಮರ್ಥಿಸಿದರು. “ಲೋಕಸಭೆಯಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ ಎಂಬುದನ್ನು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಮತ್ತು ರಾಜೀವ್ ಗಾಂಧಿ ಕೂಡ ಹೇಳಿದ್ದರು” ಎಂದು ಅವರು ನೆನಪಿಸಿದರು.

ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬಗ್ಗೆ ಕೂಡ ರಿಜಿಜು ಟೀಕಿಸಿದರು. “ರಾಹುಲ್ ಗಾಂಧಿ ಸದನದ ನಿಯಮಗಳನ್ನು ಕಡೆಗಣಿಸುತ್ತಿದ್ದು ಅಪ್ರಬುದ್ಧತೆ ತೋರಿಸುತ್ತಿದ್ದಾರೆ. ಅವರಿಗಿಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರೋಧ ಪಕ್ಷದ ಉತ್ತಮ ನಾಯಕಿಯಾಗಬಲ್ಲರು” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಿಜಿಜು ಮತ್ತೊಂದು ಹೇಳಿಕೆ ನೀಡಿ, “ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದು ನಮಗೆ ಇಷ್ಟವಿಲ್ಲ ಎಂದು ಸುಮಾರು 50 ವಿರೋಧ ಪಕ್ಷದ ಸದಸ್ಯರು ವೈಯಕ್ತಿಕವಾಗಿ ಹೇಳಿದ್ದಾರೆ. ಆದರೆ ರಾಜಕೀಯ ಒತ್ತಡದಿಂದ ಅವರು ಇದನ್ನು ಬೆಂಬಲಿಸುತ್ತಿದ್ದಾರೆ” ಎಂದು ಹೇಳಿದರು.

ವಿರೋಧ ಪಕ್ಷಗಳ ಪರವಾಗಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, ಈ ಅವಿಶ್ವಾಸ ನಿರ್ಣಯವನ್ನು “ದೈವಿಕ ಕರ್ಮ” ಎಂದು ಕರೆದರು. 2023ರಲ್ಲಿ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟಿಸಲಾಗಿತ್ತು.

ಸದನದಲ್ಲಿ ಪರಿಸ್ಥಿತಿ ಇನ್ನಷ್ಟು ತೀವ್ರಗೊಂಡಾಗ ವಿರೋಧ ಪಕ್ಷದ ಸದಸ್ಯರು ಸ್ಪೀಕರ್ ಪೀಠದ ಎದುರು ಹೋಗಿ ಘೋಷಣೆಗಳನ್ನು ಕೂಗಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯೋಗದ ವಿರುದ್ಧವೂ ಘೋಷಣೆಗಳನ್ನು ಕೂಗುತ್ತಾ ಮತಕಳ್ಳತನದ ಆರೋಪಗಳನ್ನು ಮಾಡಿದರು.

ಈ ಗದ್ದಲದ ನಡುವೆ ಲೋಕಸಭಾ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಬೇಕಾಯಿತು. ಬಳಿಕ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯದ ನೋಟಿಸ್ ಓದಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T163249.072

ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರ ಬಾಂಬ್ ಅಳವಡಿಸಿದ ಇರಾನ್: ಟ್ರಂಪ್ ಕೆಂಡಾಮಂಡಲ! ಏನಿದು ನೇವಲ್ ಮೈನ್ಸ್..?

by ಯಶಸ್ವಿನಿ ಎಂ
March 11, 2026 - 4:34 pm
0

Untitled design 2026 03 11T160546.971

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

by ಯಶಸ್ವಿನಿ ಎಂ
March 11, 2026 - 4:11 pm
0

Untitled design 2026 03 11T155538.870

ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!

by ಯಶಸ್ವಿನಿ ಎಂ
March 11, 2026 - 3:56 pm
0

Untitled design 2026 03 11T152827.982

ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು

by ಯಶಸ್ವಿನಿ ಎಂ
March 11, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T163249.072
    ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರ ಬಾಂಬ್ ಅಳವಡಿಸಿದ ಇರಾನ್: ಟ್ರಂಪ್ ಕೆಂಡಾಮಂಡಲ! ಏನಿದು ನೇವಲ್ ಮೈನ್ಸ್..?
    March 11, 2026 | 0
  • Untitled design 2026 03 11T155538.870
    ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!
    March 11, 2026 | 0
  • Untitled design 2026 03 11T152827.982
    ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು
    March 11, 2026 | 0
  • Untitled design 2026 03 11T142425.251
    ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು
    March 11, 2026 | 0
  • Untitled design 2026 03 11T122445.441
    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version