ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಿಚ್ಚು ಹೊತ್ತಿಕೊಂಡಿರುವ ಬೆನ್ನಲ್ಲೇ, ಸೋಷಿಯಲ್ ಮೀಡಿಯಾದಲ್ಲಿ ಭಾರಿ ಆಘಾತಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಜಾಗತಿಕವಾಗಿ ವೈರಲ್ ಆಗಿದೆ. ಆದರೆ, ಈ ಸುದ್ದಿಯ ಸತ್ಯಾಸತ್ಯತೆ ಕುರಿತು ಇಸ್ರೇಲ್ ಸರ್ಕಾರ ಈಗ ಸ್ಪಷ್ಟನೆ ನೀಡಿದೆ.
ವೈರಲ್ ಸುದ್ದಿಯಲ್ಲೇನಿದೆ?
ಕಳೆದ ಕೆಲವು ಗಂಟೆಗಳಿಂದ ಎಕ್ಸ್ (ಟ್ವಿಟರ್) ಮತ್ತು ಫೇಸ್‌ಬುಕ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ಇರಾನ್‌ನ ಭೀಕರ ಕ್ಷಿಪಣಿ ದಾಳಿಯ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ದಾಳಿಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಮರಣ ಹೊಂದಿದ್ದಾರೆ ಎಂದು ಕೆಲವರು ವಾದಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ನೆತನ್ಯಾಹು ಅವರ ಸಹೋದರ ಇಡ್ಡೋ ನೆತನ್ಯಾಹು ಕೂಡ ಈ ದಾಳಿಗೆ ಬಲಿಯಾಗಿದ್ದಾರೆ ಎಂಬ ವದಂತಿ ಹಬ್ಬಿದೆ. ಇಸ್ರೇಲ್‌ನ ಪ್ರಭಾವಿ ಗೃಹ ಸಚಿವ ಇಟಾಮಿರ್ ಬೆನ್ ಗ್ವಿರ್ ಅವರು ಕೂಡ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಹರಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಫ್ಘಾನಿಸ್ತಾನದ ಪ್ರಧಾನ ಮಂತ್ರಿ ಕೂಡ ಟ್ವೀಟ್ ಮಾಡಿ ಈ ಸುದ್ದಿ ನಿಜವೇ? ಎಂದು ಪ್ರಶ್ನಿಸಿದ್ದಾರೆ. ಇದರಿಂದಾಗಿ ಜಾಗತಿಕ ವಲಯದಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದೆ.
ಇಸ್ರೇಲ್ ಸರ್ಕಾರದ ಸ್ಪಷ್ಟನೆ
ಸೋಷಿಯಲ್ ಮೀಡಿಯಾದಲ್ಲಿ ಹಬ್ಬುತ್ತಿರುವ ಈ ಸುದ್ದಿಯನ್ನು ಇಸ್ರೇಲ್ ಸರ್ಕಾರ ಕಟ್ಟುನಿಟ್ಟಾಗಿ ನಿರಾಕರಿಸಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸುರಕ್ಷಿತವಾಗಿದ್ದಾರೆ ಮತ್ತು ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಸರ್ಕಾರಿ ಮೂಲಗಳು ಅಧಿಕೃತವಾಗಿ ತಿಳಿಸಿವೆ. ವೈರಿ ರಾಷ್ಟ್ರಗಳು ಹರಡುತ್ತಿರುವ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಇಸ್ರೇಲ್ ಪ್ರಜೆಗಳಿಗೆ ಮತ್ತು ವಿಶ್ವ ಸಮುದಾಯಕ್ಕೆ ಮನವಿ ಮಾಡಿದೆ.
ಇನ್ನೊಂದೆಡೆ, ಯುದ್ಧದ ತೀವ್ರತೆ ಇಟಲಿಯತ್ತಲೂ ಹಬ್ಬಿದೆ. ಇರಾನ್ ಪಡೆಗಳು ಇರಾಕ್‌ನಲ್ಲಿರುವ ಇಟಲಿಯ ಎರ್ಬಿಲ್ (Erbil) ವಾಯುನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸಿವೆ. ಇಟಲಿ ದೇಶದ ಈ ಮಿಲಿಟರಿ ತಾಣದ ಮೇಲೆ ನಡೆದ ದಾಳಿಯಲ್ಲಿ ಸಾವು-ನೋವುಗಳ ಕುರಿತು ಆತಂಕವಿತ್ತು. ಆದರೆ, ಇಟಲಿ ಸರ್ಕಾರವು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತನ್ನ ಯಾವುದೇ ಸೈನಿಕರಿಗೆ ಗಾಯಗಳಾಗಿಲ್ಲ ಮತ್ತು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ.




