• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 5, 2026 - 11:18 pm
in Flash News, ಕ್ರೀಡೆ
0 0
0
Untitled design 2026 04 05T233727.882

ಬೆಂಗಳೂರು, ಏಪ್ರಿಲ್ 5: ಐಪಿಎಲ್ 2026 ರ 11ನೇ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಈ ಹೈವೋಲ್ಟೇಜ್ ಪಂದ್ಯದಲ್ಲಿ RCB ತನ್ನ ಅಭಿಮಾನಿಗಳ ನಿರೀಕ್ಷೆಯಂತೆ ಭರ್ಜರಿ ಗೆಲುವು ದಾಖಲಿಸಿತು. 43 ರನ್‌ಗಳ ಅಂತರದ ಈ ಗೆಲುವಿನೊಂದಿಗೆ RCB ಟೂರ್ನಿಯಲ್ಲಿ ತನ್ನ ಎರಡನೇ ಜಯವನ್ನು ಸಾಧಿಸಿದೆ. CSK ಮೂರನೇ ಸತತ ಸೋಲಿನ ಕಹಿ ಅನುಭವಿಸಿತು.

ಟಾಸ್ ಮತ್ತು ಆರಂಭಿಕ ಹಂತ

RelatedPosts

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

ADVERTISEMENT
ADVERTISEMENT

CSK ನಾಯಕ ರುತುರಾಜ್ ಗಾಯಕ್ವಾಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಚಿನ್ನಸ್ವಾಮಿಯಲ್ಲಿ ಸಾಮಾನ್ಯವಾಗಿ ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಅನುಕೂಲವಿದ್ದರೂ, ಗಾಯಕ್ವಾಡ್ ಅವರು ಪ್ರತಿಸ್ಪರ್ಧಿಯನ್ನು ಒತ್ತಡಕ್ಕೆ ಸಿಲುಕಿಸುವ ಉದ್ದೇಶದಿಂದ ಬೌಲಿಂಗ್ ನಿರ್ಧರಿಸಿದ್ದರು. ಆದರೆ ಆರ್‌‌ಸಿಬಿ ಆರಂಭಿಕರು ಈ ತಂತ್ರವನ್ನು ಸಂಪೂರ್ಣವಾಗಿ ವಿಫಲಗೊಳಿಸಿದರು.

CSK ಬ್ಯಾಟಿಂಗ್ ಕುಸಿತ

ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆಗೆ 250 ರನ್ ಗುರಿ ನೀಡಿದ್ದ RCB.. 10 ರನ್ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡಿದ್ದ CSK, 30 ರನ್ ಗಳಿಸುವಷ್ಟರಲ್ಲಿ ಸಂಜು ಸ್ಯಾಮ್ಸನ್ ಕೂಡ ಪೆವಿಲಿಯನ್ ಸೇರಿದ್ದರು. ಇದಾದ ಬಳಿಕ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸರ್ಫರಾಜ್ ಖಾನ್ ಕೇವಲ 24 ಎಸೆತಗಳಲ್ಲಿ ಮತ್ತೊಂದು ಆಕರ್ಷಕ ಅರ್ಧಶತಕ (50 ರನ್) ಸಿಡಿಸಿ ಚೆನ್ನೈ ಪಾಳಯದಲ್ಲಿ ಕೊಂಚ ಗೆಲುವಿನ ಆಸೆ ಮೂಡಿಸಿದರು. ಆದರೆ ಕೃನಾಲ್ ಪಾಂಡ್ಯ ಒಂದೇ ಓವರ್‌ನಲ್ಲಿ ಸರ್ಫರಾಜ್ ಖಾನ್ ಹಾಗೂ ಕಾರ್ತಿಕ್ ಶರ್ಮಾ ವಿಕೆಟ್ ಕಬಳಿಸಿ CSK ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ನಂತರ CSK ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ಶಿವಂ ದುಬೆ (18), ಯುವ ಕ್ರಿಕೆಟಿಗ ಪ್ರಶಾಂತ್ ವೀರ್ (43) ಹಾಗೂ ಜೇಮಿ ಓವರ್ಟನ್ (37) ರನ್ ಸಿಡಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲಾಗಲಿಲ್ಲ. ಅಂತಿಮವಾಗಿ CSK 20 ಓವರ್‌ಗಳಲ್ಲಿ 207/8 ರನ್ ಗಳಿಸಿ 43 ರನ್‌ಗಳ ಸೋಲು ಅನುಭವಿಸಿತು.

ಭುವನೇಶ್ವರ್ ಕುಮಾರ್ ಅಪರೂಪದ ದಾಖಲೆ

RCB ಅನುಭವಿ ವೇಗಿ ಭುವನೇಶ್ವರ್ ಕುಮಾರ್, ಯುವ ಕ್ರಿಕೆಟಿಗ ಆಯುಷ್ ಮ್ಹಾತ್ರೆ ಅವರನ್ನು ಕೇವಲ ಒಂದು ರನ್‌ಗೆ ಔಟ್ ಮಾಡುವ ಮೂಲಕ ಐಪಿಎಲ್‌ನಲ್ಲಿ ತಮ್ಮ 200ನೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 200 ವಿಕೆಟ್ ಕಬಳಿಸಿದ ಮೊದಲ ವೇಗಿ ಎನ್ನುವ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಒಟ್ಟಾರೆ ಎರಡನೇ ಬೌಲರ್ (ಸ್ಪಿನ್ನರ್ ಯಜುವೇಂದ್ರ ಚಹಲ್ ನಂತರ) ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

RCB ಸ್ಫೋಟಕ ಬ್ಯಾಟಿಂಗ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ RCB ಮೊದಲ ಮೂರು ಓವರ್‌ಗಳಲ್ಲಿ ಎಚ್ಚರಿಕೆಯ ಆರಂಭ ಪಡೆಯಿತು. ವಿರಾಟ್ ಕೊಹ್ಲಿ 18 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 28 ರನ್ ಗಳಿಸಿ ಅಂಶುಲ್ ಕಾಂಬೋಜ್ ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ದೇವದತ್ ಪಡಿಕ್ಕಲ್ ಹಾಗೂ ಫಿಲ್ ಸಾಲ್ಟ್ ಜೋಡಿ ಎರಡನೇ ವಿಕೆಟ್‌ಗೆ ಕೇವಲ 37 ಎಸೆತಗಳಲ್ಲಿ 56 ರನ್ ಸಿಡಿಸಿತು. ಸಾಲ್ಟ್ 30 ಎಸೆತಗಳಲ್ಲಿ 46 ರನ್ ಸಿಡಿಸಿ ಶಿವಂ ದುಬೆಗೆ ವಿಕೆಟ್ ಒಪ್ಪಿಸಿದರು.

ಪಡಿಕ್ಕಲ್ ಸತತ ಎರಡನೇ ಅರ್ಧಶತಕ

ಕೊಹ್ಲಿ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ದೇವದತ್ ಪಡಿಕ್ಕಲ್ ಆರಂಭದಲ್ಲಿ ತಡಬಡಾಯಿಸಿದರೂ, ಪಿಚ್‌ಗೆ ಹೊಂದಿಕೊಂಡ ಬಳಿಕ ಮಿಂಚಿದರು. ಸನ್‌ರೈಸರ್ಸ್ ಎದುರು ಕೇವಲ 26 ಎಸೆತಗಳಲ್ಲಿ 61 ರನ್ ಸಿಡಿಸಿದ್ದ ಪಡಿಕ್ಕಲ್, ಇದೀಗ CSK ಎದುರು 29 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 50 ರನ್ ಚಚ್ಚಿದರು. ಟೂರ್ನಿಯಲ್ಲಿ ಸತತ ಎರಡನೇ ಅರ್ಧಶತಕ ಬಾರಿಸಿದ ಅವರು ಜೇಮಿ ಓವರ್ಟನ್‌ಗೆ ವಿಕೆಟ್ ಒಪ್ಪಿಸಿದರು.

ಪಾಟೀದಾರ್-ಟಿಮ್ ಡೇವಿಡ್ ಗುಡುಗು

ದೇವದತ್ ಪಡಿಕ್ಕಲ್ ವಿಕೆಟ್ ಪತನದ ಬಳಿಕ ಜತೆಯಾದ ಟಿಮ್ ಡೇವಿಡ್ ಹಾಗೂ ರಜತ್ ಪಾಟೀದಾರ್ CSK ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಕೇವಲ 35 ಎಸೆತಗಳಲ್ಲಿ ಈ ಜೋಡಿ 99 ರನ್‌ಗಳ ಜತೆಯಾಟವಾಡಿತು. ನಾಯಕ ರಜತ್ ಪಾಟೀದಾರ್ 19 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 48 ರನ್ ಸಿಡಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಟಿಮ್ ಡೇವಿಡ್ ಕೇವಲ 25 ಎಸೆತಗಳಲ್ಲಿ 3 ಬೌಂಡರಿ ಹಾಗೂ 8 ಮುಗಿಲೆತ್ತರದ ಸಿಕ್ಸರ್‌ಗಳ ನೆರವಿನಿಂದ ಅಜೇಯ 70 ರನ್ ಸಿಡಿಸಿದರು. ಇದರೊಂದಿಗೆ RCB 3 ವಿಕೆಟ್ ನಷ್ಟಕ್ಕೆ 250 ರನ್ ಕಲೆಹಾಕಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T191011.060

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

by ಶಾಲಿನಿ ಕೆ. ಡಿ
July 21, 2026 - 7:11 pm
0

Untitled design 2026 07 21T184330.990

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

by ಶಾಲಿನಿ ಕೆ. ಡಿ
July 21, 2026 - 6:48 pm
0

Untitled design 2026 07 21T180844.972

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ: ಕೇವಲ ₹8.75 ಲಕ್ಷಕ್ಕೆ ಪ್ರೀಮಿಯಂ ಫೀಚರ್ಸ್!

by ಶಾಲಿನಿ ಕೆ. ಡಿ
July 21, 2026 - 6:09 pm
0

Untitled design 2026 07 21T174631.947

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

by ಶಾಲಿನಿ ಕೆ. ಡಿ
July 21, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T191011.060
    ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ
    July 21, 2026 | 0
  • Untitled design 2026 07 21T184330.990
    ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ
    July 21, 2026 | 0
  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T173001.987
    ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್
    July 21, 2026 | 0
  • Untitled design 2026 07 21T170501.940
    ಪ್ರಧಾನಿ ಮೋದಿ ನಿವಾಸದ ಎದುರು ರಾಹುಲ್ ಗಾಂಧಿ-ಪ್ರಿಯಾಂಕಾ ಧರಣಿ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version