ಬಿಗ್ ಬಾಸ್ ಕನ್ನಡ ಸೀಸನ್ 12, Expect The Unexpected ಎಂಬ ಥೀಮ್‌ನಲ್ಲಿ ಅತ್ಯಂತ ರೋಚಕವಾಗಿ ಸಾಗುತ್ತಾ ಬಂದಿದೆ. ಈಗ ಇನ್ನೊಂದು ಅನಿರೀಕ್ಷಿತವನ್ನು ಕೊಡಲಿದೆ ಬಿಗ್ ಬಾಸ್ ! ಅದುವೇ ಮಿಡ್ ಸೀಸನ್ ಫಿನಾಲೆ. ಹೌದು, ಇದೇ ಮೊದಲ ಬಾರಿಗೆ ಮೂರನೇ ವಾರಕ್ಕೆ ಫಿನಾಲೆ ನಡೆಯಲಿದೆ. ಇದು ನಿರೀಕ್ಷೆಗೂ ಮೀರಿದ, ಕುತೂಹಲಕರ ತಿರುವುಗಳನ್ನು ತರಲಿದೆ.
ಈ ಫಿನಾಲೆಯಲ್ಲಿ ಭಾರೀ ಎಲಿಮಿನೇಷನ್ ನಡೆಯಲಿದ್ದು, ಜೊತೆಗೆ ಹೊಸ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಯಲ್ಲಿ ಕಾಲಿಡುತ್ತಿದ್ದಾರೆ. ಇವರ ಆಗಮನದಿಂದ ಈಗಾಗಲೇ ಇರುವ ಸ್ಪರ್ಧಿಗಳ ಆಟಕ್ಕೆ ಹೊಸ ಉತ್ಸಾಹ ಮತ್ತು ತಿರುವು ಸಿಗಲಿದೆ.
ಇದಲ್ಲದೆ, ಈ ಬಾರಿ ಮಿಡ್ ಸೀಸನ್ ವಿನ್ನರ್ ಯಾರೆಂದು ಘೋಷಿಸಲಾಗುವುದು ಮತ್ತು ಅವರಿಗೆ ಬಹುಮಾನ ಕೂಡಾ ನೀಡಲಾಗುತ್ತದೆ.
ಈ ವಾರಾಂತ್ಯ ಪ್ರೇಕ್ಷಕರಿಗೆ ನೃತ್ಯ ಪ್ರದರ್ಶನ, ಹಾಸ್ಯಭರಿತ ಮಾತುಕತೆ ಹಾಗೂ ಅನಿರೀಕ್ಷಿತ ಸೆಲೆಬ್ರಿಟಿಗಳು ಕೂಡಾ ಬಿಗ್ ಬಾಸ್ ಮನೆಗೆ ಬರಲಿದ್ದಾರೆ. ಅವರು ಮನೆಯಲ್ಲಿ ಆಟಗಳನ್ನು ಆಡುವುದಲ್ಲದೆ , ಸ್ಪರ್ಧಿಗಳೊಂದಿಗೆ ಬೆರೆಯುತ್ತಾ ಮರೆಯಲಾಗದ ಮನರಂಜನೆಯನ್ನು ನೀಡಲಿದ್ದಾರೆ.
ಒಟ್ಟು 6 ಗಂಟೆಗಳ ಮನರಂಜನಾ ಸಂಭ್ರಮ ಇದು. ದಿನಾಂಕ- ಅಕ್ಟೋಬರ್ 18 ಮತ್ತು 19 ರಂದು ಕಲರ್ಸ್ ಕನ್ನಡದಲ್ಲಿ ರಾತ್ರಿ 8 ರಿಂದ 11 ಗಂಟೆಗಳವರೆಗೆ ಪ್ರಸಾರವಾಗುವ ಮಿಡ್ ಸೀಸನ್ ಫಿನಾಲೆ ಅತ್ಯಂತ ಅಪೂರ್ವ ಅಪರೂಪದ ಆಕರ್ಷಕ ಕಾರ್ಯಕ್ರಮವಾಗಿದ್ದು ತಪ್ಪದೇ ನೋಡಿ.