ಬಂಗಾರ ಖರೀದಿಸುವವರಿಗೆ ಬಂಪರ್: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

ಖ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದ ಗ್ರಾಹಕರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರ ಇಳಿಕೆ ಕಂಡುಬರುತ್ತಿದ್ದು, ಆಭರಣ ಪ್ರಿಯರಿಗೆ ಕೊಂಚ ನೆಮ್ಮದಿ ತಂದಿದೆ. ಜನವರಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದ ಚಿನ್ನದ ಬೆಲೆ, ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳ ಪರಿಣಾಮವಾಗಿ ಏರಿಳಿತ ಕಾಣುತ್ತಿದೆ. ಇದೀಗ ನವೆಂಬರ್ ತಿಂಗಳಲ್ಲೂ ಮತ್ತೆ ಬೆಲೆ ಕುಸಿತದ ಹಾದಿ ಹಿಡಿದಿದೆ.

ನವೆಂಬರ್ 12ರ ಗುರುವಾರದ ವಹಿವಾಟಿನಲ್ಲಿ ಬೆಂಗಳೂರಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗಿದೆ. ಬುಧವಾರದ ಬೆಲೆಗೆ ಹೋಲಿಸಿದರೆ 24 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂ ಬೆಲೆಯಲ್ಲಿ 218 ರೂಪಾಯಿ ಕುಸಿತ ದಾಖಲಾಗಿದೆ. ಅದೇ ರೀತಿ 22 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂ ಬೆಲೆ 200 ರೂಪಾಯಿ ಹಾಗೂ 18 ಕ್ಯಾರೆಟ್ ಚಿನ್ನದ ಬೆಲೆ 164 ರೂಪಾಯಿ ಇಳಿಕೆಯಾಗಿದೆ.

ಮಂಗಳೂರಿನಲ್ಲಿ ಚಿನ್ನದ ದರ

ನವೆಂಬರ್ 12ರಂದು ಗುರುವಾರ ಬೆಳಗಿನ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ತೀವ್ರ ಇಳಿಕೆ ದಾಖಲಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 13,980 (-218) ರೂ.ಗೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 12,815 (-200) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 10,485 (-164) ರೂ. ಬೆಲೆಗೆ ಬಂದು ನಿಂತಿದೆ.

ಸ್ಥಿರವಾದ ಬೆಳ್ಳಿಯ ದರ

ಜನವರಿಯಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಬೆಳ್ಳಿಯ ಬೆಲೆ ನಂತರ ಕುಸಿತದ ಹಾದಿಯಲ್ಲಿತ್ತು. ಮಂಗಳೂರಿನಲ್ಲಿ ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಆಗಸ್ಟ್ ಆರಂಭದ ವಾರಗಳಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,60,000 ರೂ.ವರೆಗೆ ಏರಿತ್ತು. ಆಗಸ್ಟ್ ಕೊನೆ ವಾರದಲ್ಲಿ ಮತ್ತು ಸೆಪ್ಟೆಂಬರ್ ಆರಂಭದಲ್ಲಿ ಬೆಳ್ಳಿಯ ದರ ಕುಸಿದು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ನಿಂತಿತ್ತು.

ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು)
ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ

ಕಳೆದ ವಾರಕ್ಕೆ ಹೋಲಿಸಿದರೆ ಶೇ. 4.26ರಷ್ಟು ಬೆಲೆ ಇಳಿಕೆಯಾಗಿದೆ. ಇದೀಗ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 1,28,150 ರೂ. ಇದ್ದು, ಕಳೆದ ವಾರ ಇದೇ ದರ 1,33,850 ರೂ. ಇತ್ತು. ಅಂದರೆ 22 ಕ್ಯಾರೆಟ್ ಚಿನ್ನದ ದರದಲ್ಲಿ ಬರೋಬ್ಬರಿ 5,700 ರೂ. ಇಳಿಕೆಯಾಗಿದೆ. ಬೆಳ್ಳಿ ದರದಲ್ಲೂ 1 ಕೆಜಿಗೆ 10 ಸಾವಿರ ರೂ. ಇಳಿಕೆ ಕಂಡುಬಂದಿದೆ. ಕಳೆದ ವಾರ 2 ಲಕ್ಷದ 10 ಸಾವಿರ ರೂ. ಇದ್ದ 1 ಕೆಜಿ ಬೆಳ್ಳಿ ಬೆಲೆ ಇದೀಗ 2 ಲಕ್ಷ ರೂ.ಗೆ ಇಳಿಕೆ ಕಂಡಿದೆ.

ಚಿನ್ನದ ಬೆಲೆ ಕುಸಿತಕ್ಕೆ ಕಾರಣಗಳೇನು?

ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತಿವೆ. ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಆತಂಕ ಕಡಿಮೆಯಾಗಿರುವುದು ಸುರಕ್ಷಿತ ಹೂಡಿಕೆಯಾಗಿ ಚಿನ್ನದ ಮೇಲಿದ್ದ ಬೇಡಿಕೆಯನ್ನು ತಗ್ಗಿಸಿದೆ ಎನ್ನಲಾಗಿದೆ.

ಇದರ ಜೊತೆಗೆ ಅಮೆರಿಕದ ಡಾಲರ್ ಮೌಲ್ಯ ಬಲಿಷ್ಠವಾಗುತ್ತಿರುವುದು ಚಿನ್ನದ ಬೆಲೆಯ ಮೇಲೆ ಒತ್ತಡ ಉಂಟುಮಾಡಿದೆ. ಅಮೆರಿಕದ ಹಣದುಬ್ಬರದ ದತ್ತಾಂಶ ನಿರೀಕ್ಷೆಗಿಂತ ಹೆಚ್ಚಾಗಿರುವುದು ಹಾಗೂ ಫೆಡರಲ್ ರಿಸರ್ವ್‌ನ ಬಡ್ಡಿದರ ನೀತಿಯ ಕುರಿತು ಹೂಡಿಕೆದಾರರಲ್ಲಿ ಮೂಡಿರುವ ನಿರೀಕ್ಷೆಗಳು ಕೂಡ ಚಿನ್ನದ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿವೆ.

Exit mobile version