• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೆಪ್ಟೆಂಬರ್ 22ರಿಂದ GST ಕಡಿತ: ಹಲವು ವಸ್ತುಗಳು ಅಗ್ಗ..ಇಲ್ಲಿದೆ ನೋಡಿ ಕಂಪ್ಲೀಟ್ ಲಿಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 4, 2025 - 8:08 am
in Flash News, ವಾಣಿಜ್ಯ
0 0
0
Untitled design 2025 09 04t080101.633

ನವದೆಹಲಿ: ಮಧ್ಯಮ ವರ್ಗ ಮತ್ತು ಸಾಮಾನ್ಯ ಗ್ರಾಹಕರಿಗೆ ದೊಡ್ಡ ಸಂತೋಷದ ಸುದ್ದಿ ತಂದಿದೆ ಕೇಂದ್ರ ಸರ್ಕಾರ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಸುಧಾರಣೆ ತಂದು, ಹಲವಾರು ಅಗತ್ಯ ವಸ್ತುಗಳ ತೆರಿಗೆಯನ್ನು ಕಡಿಮೆ ಮಾಡಲಾಗಿದೆ. ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಹೊಸ ತೆರಿಗೆ ದರಗಳು ಸೆಪ್ಟೆಂಬರ್ 22, 2024 ರಿಂದ ಜಾರಿಗೆ ಬರಲಿವೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಎಲ್ಲಾ ರಾಜ್ಯಗಳ ವಿತ್ತ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಿದ್ದ ಈ ಸಭೆಯು ದೇಶದ ಆರ್ಥಿಕತೆಯನ್ನು ಬಲಪಡಿಸುವ ಹಲವು ಕ್ರಮಗಳನ್ನು ಚರ್ಚಿಸಿತ್ತು. ಈಗ ಇರುವ ಶೇ.5, 12, 18 ಮತ್ತು 28ರ ತೆರಿಗೆ ಸ್ಲ್ಯಾಬ್‌ಗಳನ್ನು ರದ್ದುಗೊಳಿಸಿ, ಕೇವಲ ಶೇ.5 ಮತ್ತು ಶೇ.18ರ ಎರಡು ಸ್ಲ್ಯಾಬ್‌ಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

PF ಹಣಕ್ಕೆ ಡಿಜಿಟಲ್ ಕ್ರಾಂತಿ: UPI ಮೂಲಕ ಹಣ ವಿತ್‌ಡ್ರಾ

ADVERTISEMENT
ADVERTISEMENT

ಇದರಿಂದಾಗಿ ಸಾಮಾನ್ಯ ಜನರ ದೈನಂದಿನ ಅಗತ್ಯ ವಸ್ತುಗಳ ಬೆಲೆಯಲ್ಲಿ ಗಣನೀಯ ಕಡಿತವಾಗಲಿದ್ದು, ಮಧ್ಯಮ ವರ್ಗದ ಕುಟುಂಬಗಳು ಹೆಚ್ಚು ಉಳಿತಾಯ ಮಾಡಲು ಸಾಧ್ಯವಾಗಲಿದೆ. ಅಲ್ಲದೆ, ವೈಯಕ್ತಿಕ ಜೀವ ವಿಮೆ ಮತ್ತು ಆರೋಗ್ಯ ವಿಮೆಯ ಪ್ರೀಮಿಯಂಗಳ ಮೇಲಿನ ತೆರಿಗೆಯನ್ನು ಶೇ.18ರಿಂದ ಸಂಪೂರ್ಣ ಶೂನ್ಯಕ್ಕೆ ಇಳಿಸಲಾಗಿದೆ.

ಈ ಬದಲಾವಣೆಯ ಹಿನ್ನೆಲೆಯಲ್ಲಿ ಅಮೆರಿಕದಂತಹ ದೇಶಗಳು ಭಾರತೀಯ ಉತ್ಪನ್ನಗಳ ಮೇಲೆ ಹೇರಿರುವ ದುಬಾರಿ ತೆರಿಗೆಗಳು ರಫ್ತು ವಲಯಕ್ಕೆ ಸಂಕಷ್ಟ ಉಂಟುಮಾಡಿವೆ. ಇದನ್ನು ಸರಿದೂಗಿಸಲು ದೇಶೀಯ ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಎಸ್‌ಟಿ ಕಡಿತವನ್ನು ಕೈಗೊಳ್ಳಲಾಗಿದೆ. ಮಧ್ಯಮ, ಸಣ್ಣ ಮತ್ತು ಕಿರು ಉದ್ಯಮಗಳು (ಎಂಎಸ್‌ಎಂಇ) ಹಾಗೂ ಸ್ಟಾರ್ಟಪ್‌ಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿ, ಹಾಲಿ 30 ದಿನಗಳ ಗಡುವನ್ನು ಕೇವಲ 3 ದಿನಗಳಿಗೆ ಇಳಿಸುವ ನೀತಿಗೂ ಮಂಡಳಿ ಅನುಮೋದನೆ ನೀಡಿದೆ.

ಇನ್ನು ಮುಂದೆ ಜಿಎಸ್‌ಟಿ ಸ್ಲ್ಯಾಬ್‌ ಶೇ. 5 ಮತ್ತು ಶೇ. 18 ಮಾತ್ರ ಇರಲಿದೆ. ಪಾನ್ ಮಸಾಲಾ, ಸಿಗರೇಟ್, ಕೂಲ್‌ ಡ್ರಿಂಕ್ಸ್‌, ಕಾರ್ಬೊನೇಟೆಡ್ ಪಾನೀಯಗಳು, ಐಷಾರಾಮಿ ಕಾರು, ದೊಡ್ಡ ಎಸ್‌ಯುವಿಗಳಿಗೆ ಶೇ. 40ರಷ್ಟು ಜಿಎಸ್‌ಟಿ ಇರಲಿದೆ.

ಹೊಸ ತೆರಿಗೆ ಸ್ಲ್ಯಾಬ್‌ಗಳ ವಿವರ
ಜಿಎಸ್‌ಟಿಯಿಂದ ವಿನಾಯಿತಿ ಪಡೆದ ಉತ್ಪನ್ನಗಳು
  • 33 ಜೀವರಕ್ಷಕ ಔಷಧಗಳು, ಕ್ಯಾನ್ಸರ್ ಔಷಧಗಳು, ಅಪರೂಪದ ಕಾಯಿಲೆಗಳ ಔಷಧಗಳು
  • ವೈಯಕ್ತಿಕ ಜೀವ ವಿಮೆ, ಆರೋಗ್ಯ ಪಾಲಿಸಿಗಳು
  • ಮ್ಯಾಪ್‌, ಚಾರ್ಟ್‌, ಗ್ಲೋಬ್‌ಗಳು, ಪೆನ್ಸಿಲ್‌ಗಳು, ಶಾರ್ಪನರ್‌ಗಳು, ಕ್ರಯೋನ್‌ಗಳು, ಪ್ಯಾಸ್ಟೆಲ್‌ಗಳು, ನೋಟ್‌ಬುಕ್‌ಗಳು, ಎರೇಸರ್
  • ಅತಿ ಹೆಚ್ಚಿನ ತಾಪಮಾನ (UHT)ದ ಹಾಲು, ಪನೀರ್, ಪಿಜ್ಜಾ ಬ್ರೆಡ್, ಖಾಖ್ರಾ, ಚಪಾತಿ ಅಥವಾ ರೋಟಿ
ಜಿಎಸ್‌ಟಿ ದರ: ಶೇ. 5ರ ಉತ್ಪನ್ನಗಳು
  • ಹೇರ್‌ ಆಯಿಲ್‌, ಶಾಂಪೂ, ಟೂತ್‌ಪೇಸ್ಟ್, ಸೋಪ್, ಟೂತ್ ಬ್ರಷ್, ಶೇವಿಂಗ್ ಕ್ರೀಮ್
  • ಬೆಣ್ಣೆ, ತುಪ್ಪ, ಚೀಸ್, ಡೇರಿ ಉತ್ಪನ್ನಗಳು, ನಾಮ್‌ಕೀನ್‌ಗಳು, ಪಾತ್ರೆಗಳು
  • ಫೀಡಿಂಗ್ ಬಾಟಲಿಗಳು, ಶಿಶುಗಳ ನ್ಯಾಪ್‌ಕಿನ್‌ಗಳು ಮತ್ತು ಕ್ಲಿನಿಕಲ್ ಡೈಪರ್‌ಗಳು
  • ಹೊಲಿಗೆ ಯಂತ್ರಗಳು ಮತ್ತು ಭಾಗಗಳು
  • ಥರ್ಮಾಮೀಟರ್, ವೈದ್ಯಕೀಯ ದರ್ಜೆಯ ಆಮ್ಲಜನಕ, ಎಲ್ಲ ರೋಗನಿರ್ಣಯ ಕಿಟ್‌, ಗ್ಲುಕೋಮೀಟರ್
  • ಕನ್ನಡಕಗಳು
  • ಟ್ರ್ಯಾಕ್ಟರ್ ಟೈರ್‌ಗಳು, ಭಾಗಗಳು,
  • ಟ್ರ್ಯಾಕ್ಟರ್‌ಗಳು ನಿರ್ದಿಷ್ಟ ಜೈವಿಕ ಕೀಟನಾಶಕಗಳು, ಸೂಕ್ಷ್ಮ ಪೋಷಕಾಂಶಗಳು
  • ಹನಿ ನೀರಾವರಿ ವ್ಯವಸ್ಥೆ ಮತ್ತು ಸ್ಪ್ರಿಂಕ್ಲರ್‌ ಕೃಷಿ, ತೋಟಗಾರಿಕೆ ಯಂತ್ರಗಳು
ಜಿಎಸ್‌ಟಿ ದರ: ಶೇ. 18ರ ಉತ್ಪನ್ನಗಳು
  • ಎಸಿ, ಟಿವಿ, ಡಿಶ್‌ವಾಶರ್‌ಗಳು
  • ಸಣ್ಣ ಕಾರುಗಳು, 350 ಸಿಸಿಗಿಂತ ಕಡಿಮೆ ಇರುವ ಬೈಕ್‌ಗಳು, ಬಸ್‌ಗಳು, ಟ್ರಕ್‌ಗಳು, ಆಂಬ್ಯುಲೆನ್ಸ್‌ಗಳು
  • ಪೆಟ್ರೋಲ್ ಮತ್ತು ಹೈಬ್ರಿಡ್, ಎಲ್‌ಪಿಜಿ, ಸಿಎನ್‌ಜಿ ಕಾರುಗಳು (1,200 ಸಿಸಿ ಮತ್ತು 4,000 ಎಂಎಂ ಒಳಗಿನ)
  • ಡೀಸೆಲ್ ಮತ್ತು ಹೈಬ್ರಿಡ್ ಕಾರುಗಳು (1,500 ಸಿಸಿ ಮತ್ತು 4,000 ಎಂಎಂ ಒಳಗಿನ)
  • ಎಲ್ಲ ಆಟೋ ಬಿಡಿಭಾಗಗಳು, ತ್ರಿಚಕ್ರ ವಾಹನಗಳು
  • ಸಿಮೆಂಟ್ ಮಾನಿಟರ್‌ಗಳು ಮತ್ತು ಪ್ರೊಜೆಕ್ಟರ್‌ಗಳು

ಜಿಎಸ್‌ಟಿ ದರ: ಶೇ. 40ರ ಉತ್ಪನ್ನಗಳು

ಪಾನ್ ಮಸಾಲ, ಸಿಗರೇಟ್, ಗುಟ್ಕಾ, ಜಗಿಯುವ ತಂಬಾಕು, ಬೀಡಿಗಳು ಕೂಲ್‌ ಡ್ರಿಂಕ್ಸ್‌, ಕೆಫೀನ್‌ಯುಕ್ತ ಪಾನೀಯಗಳು, ಆಲ್ಕೊಹಾಲಿಕ್‌ ಇಲ್ಲದ ಪಾನೀಯಗಳು 350 ಸಿಸಿ ಮೀರಿದ ಬೈಕ್‌, ವಿಹಾರ ನೌಕೆಗಳು

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version