ವಾಹನ ಸವಾರರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್: ಪೆಟ್ರೋಲ್-ಡೀಸೆಲ್ ದರ ಏರಿಕೆ

ಬೆಂಗಳೂರು: ಕೇಂದ್ರ ಸರ್ಕಾರ ಮತ್ತೊಮ್ಮೆ ವಾಹನ ಸವಾರರ ಮೇಲೆ ಭಾರಿ ಹೊಡೆತ ನೀಡಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲದ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು CNG ದರಗಳನ್ನು ಏರಿಸಲಾಗಿದೆ.

ಇಂದಿನಿಂದ ಜಾರಿಗೆ ಬಂದಂತೆ ಪೆಟ್ರೋಲ್ ಮತ್ತು ಡೀಸೆಲ್‌ಗೆ ಪ್ರತಿ ಲೀಟರ್‌ಗೆ ಸುಮಾರು 3 ರೂಪಾಯಿ ಏರಿಕೆಯಾಗಿದೆ. CNG ದರವೂ ಪ್ರತಿ ಕೆಜಿ‌ಗೆ 2 ರೂಪಾಯಿ ಹೆಚ್ಚಳವಾಗಿದೆ.

ಬೆಂಗಳೂರಿನ ಹೊಸ ದರಗಳು:

ಇತರೆ ಪ್ರಮುಖ ನಗರಗಳಲ್ಲೂ ಇದೇ ರೀತಿ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ₹97.77ಕ್ಕೆ, ಕೋಲ್ಕತ್ತಾ ₹108.74ಕ್ಕೆ, ಮುಂಬೈ ₹106.68ಕ್ಕೆ ಏರಿದೆ.

ಏಕೆ ಏರಿಕೆ?

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ತಕ್ಷಣ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದ್ದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಇದರ ಪರಿಣಾಮವಾಗಿ ದೇಶೀಯ ತೈಲ ಕಂಪನಿಗಳು ದರ ಏರಿಸುವಂತೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಡೀಸೆಲ್ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಾಗುವುದು ಖಚಿತವಾಗಿದೆ. ಬಸ್ ಟಿಕೆಟ್ ದರಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆ ಇದೆ. ತರಕಾರಿ, ಹಾಲು, ದಿನಸಿ ವಸ್ತುಗಳು, ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಭೀತಿ ಇದೆ. ಮಧ್ಯಮ ವರ್ಗದ ಜನರ ಜೀವನ ವೆಚ್ಚ ಇನ್ನಷ್ಟು ಹೆಚ್ಚಾಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಪೆಟ್ರೋಲ್-ಡೀಸೆಲ್ ದರ ಏರಿಕೆಯು ಮೋದಿ ಸರ್ಕಾರದ “ಮಿತವ್ಯಯ” ನೀತಿಗೆ ತೀವ್ರ ತಿರುಗೇಟು ನೀಡಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಕೇಂದ್ರ ಸರ್ಕಾರ ಈ ಏರಿಕೆಯನ್ನು ಹಂತಹಂತವಾಗಿ ಮಾಡುತ್ತಿದೆ ಎಂದು ಹೇಳಿದ್ದರೂ, ಜನಸಾಮಾನ್ಯರ ಮೇಲೆ ಭಾರಿ ಹೊರೆ ಬಿದ್ದಿದೆ.

Exit mobile version