ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಇತ್ತೀಚೆಗೆ ರೆಪೊ ದರವನ್ನು ಶೇಕಡ 5.5ಕ್ಕೆ ಇಳಿಕೆ ಮಾಡಿದ್ದರೂ, ದೇಶದ ಅತಿದೊಡ್ಡ ಸಾಲದಾತ ಸಂಸ್ಥೆಯಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಹೊಸ ಗ್ರಾಹಕರಿಗೆ ಗೃಹ ಸಾಲದ ಬಡ್ಡಿ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಮಾಡಿದೆ. ಇದರ ಪರಿಣಾಮವಾಗಿ, ಗೃಹ ಸಾಲದ ಬಡ್ಡಿ ದರವು ಶೇಕಡ 8.45ರಿಂದ ಶೇಕಡ 8.70ಕ್ಕೆ ಏರಿಕೆಯಾಗಿದೆ.
ಗ್ರಾಹಕರ ಕ್ರೆಡಿಟ್ ಸ್ಕೋರ್‌ಗೆ ತಕ್ಕಂತೆ ಬಡ್ಡಿ ದರದಲ್ಲಿ ವ್ಯತ್ಯಾಸವಿರುತ್ತದೆ. ಅತ್ಯುತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವ ಗ್ರಾಹಕರಿಗೆ ಬಡ್ಡಿ ದರ ಶೇಕಡ 7.50 ರಷ್ಟಿರುತ್ತದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ.
ಆದರೆ, ಕಡಿಮೆ ಕ್ರೆಡಿಟ್ ಸ್ಕೋರ್ ಹೊಂದಿರುವ ಗ್ರಾಹಕರು ಹೆಚ್ಚಿನ ಬಡ್ಡಿ ದರದ ಹೊರೆಯನ್ನು ಭರಿಸಬೇಕಾಗುತ್ತದೆ. ಈ ಬಡ್ಡಿ ದರ ಏರಿಕೆಯಿಂದ ಗೃಹ ಸಾಲಗಾರರಿಗೆ ಆರ್ಥಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ.