ದೂರಿನಲ್ಲಿ ಸಂತ್ರಸ್ತೆ, ಮನು ತಮ್ಮನ್ನು ಮದುವೆಯಾಗುವ ಭರವಸೆ ನೀಡಿದ್ದರು ಎಂದು ತಿಳಿಸಿದ್ದಾರೆ. ಆದರೆ, ಮನುಗೆ ಈಗಾಗಲೇ ಮದುವೆಯಾಗಿ ಒಂದು ಮಗುವಿದೆ ಎಂಬ ವಿಷಯವನ್ನು ಗಮನಿಸಿದ ಸಂತ್ರಸ್ತೆ, ಮನು ತಮ್ಮನ್ನು ಮೋಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆ ಎರಡು ಬಾರಿ ಗರ್ಭಿಣಿಯಾದಾಗ, ಮನು ಗರ್ಭಪಾತದ ಮಾತ್ರೆಗಳನ್ನು ನೀಡಿ ಗರ್ಭಪಾತ ಮಾಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದಲ್ಲದೇ, ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‌ಮೇಲ್ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಮನು ಅವರ ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ಗಾಗಿ ಸಂತ್ರಸ್ತೆ ಲಕ್ಷಾಂತರ ರೂಪಾಯಿಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.