• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

admin by admin
March 17, 2026 - 10:41 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 03 17T223328.062

ಚೆನ್ನೈ: ರಾಜಕೀಯ ಟೀಕೆಗಳ ಭರದಲ್ಲಿ ಸಂಸದೀಯ ಘನತೆಯನ್ನು ಮರೆತ ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ ಅವರ ಅಸಭ್ಯ ಮಾತುಗಳು ಈಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಂಚಲನ ಮೂಡಿಸಿವೆ. ಲೇಡಿ ಸೂಪರ್‌ಸ್ಟಾರ್ ನಯನತಾರಾ ಅವರ ಹೆಸರನ್ನು ಬಳಸಿ ನೀಡಿದ ಅವಹೇಳನಕಾರಿ ಹೇಳಿಕೆಯ ವಿರುದ್ಧ ದಕ್ಷಿಣ ಭಾರತ ಚಲನಚಿತ್ರ ಕಲಾವಿದರ ಸಂಘ (ನಡಿಗರ್ ಸಂಗಂ) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೇಷರತ್ ಕ್ಷಮೆಯಾಚನೆಗೆ ಆಗ್ರಹಿಸಿದೆ.

ವಿವಾದದ ಕಿಡಿ ಹಚ್ಚಿದ ಆ ಒಂದು ಹೇಳಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕನಸುಗಳನ್ನು ಹಂಚಿಕೊಳ್ಳಿ ಎಂಬ ಆಶ್ವಾಸನೆಯನ್ನು ಟೀಕಿಸುವ ಭರದಲ್ಲಿ ಸಂಸದ ಷಣ್ಮುಗಂ ವಿವೇಚನೆ ಕಳೆದುಕೊಂಡು ಮಾತನಾಡಿದ್ದಾರೆ.

RelatedPosts

ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ

ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ

ADVERTISEMENT
ADVERTISEMENT

ಸಂಸದ ಷಣ್ಮುಗಂ ಮಾತನಾಡುತ್ತಾ.. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಕನಸು ಕಾಣಲು ಹೇಳಿದರು. ಈಗ ಸ್ಟಾಲಿನ್ ಅವರು ನಿಮ್ಮ ಕನಸುಗಳನ್ನು ನಾವು ಈಡೇರಿಸುತ್ತೇವೆ ಎನ್ನುತ್ತಿದ್ದಾರೆ. ಒಂದು ವೇಳೆ ನನಗೆ ನಟಿ ನಯನತಾರಾ ಜೊತೆ ಮದುವೆಯಾಗಬೇಕೆಂಬ ಕನಸಿದ್ದರೆ, ಸ್ಟಾಲಿನ್ ಅವರು ಅದನ್ನು ಈಡೇರಿಸುತ್ತಾರಾ ? ಯಾರಾದರೂ ಹೋಗಿ ನನಗೆ ನಯನತಾರಾ ಜೊತೆ ಮದುವೆ ಮಾಡಿಸಿ ಎಂದರೆ ಅವರು ಮಾಡಿಸುತ್ತಾರಾ ? ಎಂದು ಷಣ್ಮುಗಂ ವ್ಯಂಗ್ಯವಾಗಿ ಮಾತಾಡಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ ಇತರ ನಾಯಕರು ನಗುತ್ತಾ ಇದನ್ನು ಸಂಭ್ರಮಿಸಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

@thenewsminute : when are you going to report against CV Shanmugam, ADMK? pic.twitter.com/1QFwpWYBIL

— Vetri S M (@Vetrism29) March 17, 2026

ಕಲಾವಿದರ ಸಂಘದ ತೀವ್ರ ಖಂಡನೆ

ನಯನತಾರಾ ಅವರಂತಹ ಹಿರಿಯ ಮತ್ತು ಗೌರವಾನ್ವಿತ ನಟಿಯ ಹೆಸರನ್ನು ಇಂತಹ ಕೀಳುಮಟ್ಟದ ಉದಾಹರಣೆಗೆ ಬಳಸಿದ್ದನ್ನು ಕಲಾವಿದರ ಸಂಘವು ಬಲವಾಗಿ ಖಂಡಿಸಿದೆ. ಸಂಸದರಿಗೆ ಅಧಿಕೃತ ಪತ್ರ ಬರೆದಿರುವ ಸಂಘವು, ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ನೀವು ಮಹಿಳೆಯರ ಬಗ್ಗೆ ಮಾತನಾಡುವ ರೀತಿ ಅತ್ಯಂತ ನಾಚಿಕೆಗೇಡಿನ ಸಂಗತಿ. ಸಂಸದರು ಎಂಬುದನ್ನ ಮರೆತು ನಮ್ಮ ಸಹೋದ್ಯೋಗಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದೆ.

ಚಿತ್ರರಂಗದ ಮಹಿಳೆಯರನ್ನು ಕೇವಲ ಹಾಸ್ಯದ ವಸ್ತುವಿನಂತೆ ಬಿಂಬಿಸುವುದು ಖಂಡನೀಯ ಎಂದು ಹೇಳಿರುವ ಸಂಘವು, ಸಿ.ವಿ. ಷಣ್ಮುಗಂ ಅವರು ಕೂಡಲೇ ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. ಅಲ್ಲದೆ, ಭವಿಷ್ಯದಲ್ಲಿ ಯಾವುದೇ ಕಲಾವಿದರ ಬಗ್ಗೆ ಅಥವಾ ಮಹಿಳೆಯರ ಬಗ್ಗೆ ಇಂತಹ ಹಗುರವಾದ ಹೇಳಿಕೆಗಳನ್ನು ನೀಡಬಾರದು ಎಂದು ಎಚ್ಚರಿಕೆ ನೀಡಿದೆ.

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ನಯನತಾರಾ ಅಭಿಮಾನಿಗಳು ಸಂಸದರ ವಿರುದ್ಧ ಅಭಿಯಾನ ಆರಂಭಿಸಿದ್ದು, ರಾಜಕೀಯ ಲಾಭಕ್ಕಾಗಿ ಮಹಿಳೆಯರ ಘನತೆಗೆ ಧಕ್ಕೆ ತರುವ ವರ್ತನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 02T094625.193

ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ

by ಶಾಲಿನಿ ಕೆ. ಡಿ
May 2, 2026 - 9:47 am
0

Untitled design 2026 05 02T092113.280

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

by ಶಾಲಿನಿ ಕೆ. ಡಿ
May 2, 2026 - 9:23 am
0

Untitled design 2026 05 02T090002.250

ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ

by ಶಾಲಿನಿ ಕೆ. ಡಿ
May 2, 2026 - 9:07 am
0

Untitled design 2026 05 02T081929.347

ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ

by ಶಾಲಿನಿ ಕೆ. ಡಿ
May 2, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T094625.193
    ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ
    May 2, 2026 | 0
  • Untitled design 2026 05 02T092113.280
    ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ
    May 2, 2026 | 0
  • Untitled design 2026 05 02T090002.250
    ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ
    May 2, 2026 | 0
  • Untitled design 2026 05 02T081929.347
    ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ
    May 2, 2026 | 0
  • Untitled design 2026 05 02T081107.161
    ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version