ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಜಯ್ ರಾವ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದ್ದು, ಆತನ ಪತ್ನಿ ಸ್ವಪ್ನಾ ರಾವ್ ವಿಚ್ಚೇದನ ಕೋರಿ ಬೆಂಗಳೂರಿನ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅಜಯ್ ರಾವ್ ಮತ್ತು ಸ್ವಪ್ನಾ 2014ರಲ್ಲಿ ಪರಸ್ಪರ ಪ್ರೀತಿಸಿ ಧರ್ಮಸ್ಥಳದಲ್ಲಿ ಸರಳವಾಗಿ ವಿವಾಹವಾಗಿದ್ದರು. ಅಜಯ್ ಚಿತ್ರರಂಗದಲ್ಲಿ ತೊಡಗಿದ್ದರೆ, ಸ್ವಪ್ನಾ ಸಾಫ್ಟ್‌ವೇರ್ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 10 ವರ್ಷಗಳ ದಾಂಪತ್ಯ ಜೀವನದ ಬಳಿಕ, ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಸ್ವಪ್ನಾ ಅವರು ಪತಿಯ ವಿರುದ್ಧ ಕೌಟುಂಬಿಕ ದೌರ್ಜನ್ಯದ ಆರೋಪದಡಿ ಕೇಸ್ ದಾಖಲಿಸಿ, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಸ್ವಪ್ನಾ ಅವರು ಕೌಟುಂಬಿಕ ದೌರ್ಜನ್ಯದ ಆಧಾರದ ಮೇಲೆ ಕೇಸ್ ದಾಖಲಿಸಿದ್ದು, ವಿಚ್ಚೇದನಕ್ಕಾಗಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಘಟನೆಯು ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಪ್ರಕರಣವು ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿದ್ದು, ಮುಂದಿನ ತೀರ್ಪು ಏನಾಗಲಿದೆ ಎಂಬುದು ಕಾದು ನೋಡಬೇಕು.