“ತಾಯವ್ವ” ಖ್ಯಾತಿಯ ಗೀತಪ್ರಿಯ, ಸಿಂಧೂ ಲೋಕನಾಥ್ ಸೇರಿದಂತೆ ಹಲವು ಕಲಾವಿದರು ಚಿತ್ರೀಕರಣದಲ್ಲಿ ಭಾಗಿ

Web (5)

ಈ ಮೊದಲು ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ “ಅಪರಿಚಿತೆ” ಚಿತ್ರದ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶ್ವನಾಥ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಶಾಸಕ ಅಶ್ವಥ್ ನಾರಾಯಣ್ ಅನಾವರಣ ಮಾಡಿ ಚಿತ್ರಕ್ಕೆ ಚಾಲನೆ ನೀಡಿದ್ದರು.

ಪ್ರಸ್ತುತ ಚಿತ್ರಕ್ಕೆ ರಾಮನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಗೀತಪ್ರಿಯ, ಸಿಂಧೂ ಲೋಕನಾಥ್ ಸೇರಿದಂತೆ ಅನೇಕ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ನೈಜಘಟನೆ ಆಧಾರಿತ ಈ ಚಿತ್ರದಲ್ಲಿ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ.‌ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರ‌ ಸಹ ಹೊಂದಿದೆ ಎಂದು ನಟಿ ಗೀತಪ್ರಿಯ ತಿಳಿಸಿದ್ದಾರೆ.

ಗೀತಪ್ರಿಯ ಅವರ ಪತಿ ಸುರೇಶ್ ಕುಮಾರ್ ಅವರು ಅಮರ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಗೀತಪ್ರಿಯ, ಹಿರಿಯ ನಟ ಶ್ರೀನಾಥ್, ರೋಹಿತ್(ಶ್ರೀನಾಥ್ ಅವರ ಪುತ್ರ), ಸಿಂಧೂ ಲೋಕನಾಥ್, ಆರ್.ಜೆ ನಿಖಿತಾ ಮುಂತಾದವರಿದ್ದಾರೆ.

Exit mobile version