ಭಾರತೀಯ ಸಂಗೀತ ಲೋಕದ ದಿಗ್ಗಜ ಗಾಯಕಿ ಆಶಾ ಭೋಸ್ಲೆ (92) ಅವರ ಅಂತ್ಯಕ್ರಿಯೆ ಏಪ್ರಿಲ್ 13ರಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸರ್ಕಾರಿ ಗೌರವದೊಂದಿಗೆ ನಡೆಯಿತು.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಆಶಾ ಭೋಸ್ಲೆ ಅವರು ಏಪ್ರಿಲ್ 12ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಗಲಿಕೆಯಿಂದ ಸಂಗೀತ ಲೋಕವೇ ಶೋಕಾಕುಲವಾಗಿದೆ.
ಅಂತ್ಯಕ್ರಿಯೆಯಲ್ಲಿ ಯಾರೆಲ್ಲಾ ಭಾಗಿಯಾದರು. ಅಂತ್ಯಕ್ರಿಯೆಯಲ್ಲಿ ಚಿತ್ರರಂಗ, ಕ್ರೀಡಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಹಾಜರಿದ್ದರು. ರಣವೀರ್ ಸಿಂಗ್, ಸಚಿನ್ ತೆಂಡೂಲ್ಕರ್,ಎ.ಆರ್. ರೆಹಮಾನ್, ಟಬು, ಜಾಕಿ ಶ್ರಾಫ್ , ರಿತೇಶ್ ದೇಶಮುಖ್, ರಾಕೇಶ್ ರೋಷನ್, ಆಮಿರ್ ಖಾನ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದರು.
ರಾಜಕೀಯ ನಾಯಕರಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್ ಅವರು ಪುಷ್ಪ ನಮನ ಸಲ್ಲಿಸಿದರು.
ಅಪಾರ ಸಂಖ್ಯೆಯ ಅಭಿಮಾನಿಗಳು ಆಶಾ ಭೋಸ್ಲೆ ಅವರ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದರು.
ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ
ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಸಾಮಾಜಿಕ ಮಾಧ್ಯಮಗಳ ಮೂಲಕ ಆಶಾ ಭೋಸ್ಲೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಆಶಾ ಭೋಸ್ಲೆ ಅವರ ಸಾಧನೆ
80 ವರ್ಷಗಳ ಕಾಲ ಸಂಗೀತ ಲೋಕದಲ್ಲಿ ಸಕ್ರಿಯರಾಗಿದ್ದ ಆಶಾ ಭೋಸ್ಲೆ ಅವರು ಸಾವಿರಾರು ಗೀತೆಗಳಿಗೆ ಧ್ವನಿ ನೀಡಿದ್ದರು. ಹಿಂದಿ, ತಮಿಳು, ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರ ಗಾಯನ ಜನಪ್ರಿಯವಾಗಿತ್ತು. ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಪದ್ಮ ವಿಭೂಷಣ ಸೇರಿದಂತೆ ಅನೇಕ ಗೌರವಗಳು ಲಭಿಸಿವೆ.
ಆಶಾ ಭೋಸ್ಲೆ ಅವರು ಭಾರತೀಯ ಸಂಗೀತ ಇತಿಹಾಸದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಅವರ ಅಗಲಿಕೆಯು ಸಂಗೀತ ಪ್ರಿಯರಿಗೆ ತುಂಬಲಾರದ ನೋವನ್ನು ಉಂಟುಮಾಡಿದೆ.





