• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೇದಿಕೆ ಸಜ್ಜು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 8:05 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 27T200306.046

ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದ್ದು, ಗುರುವಾರ (ಜನವರಿ 29) ಸಂಜೆ 5ಕ್ಕೆ ವಿಧಾನಸೌಧದ ಮುಂಭಾಗ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ನ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್‍ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿ ಬಹುಭಾಷಾ ನಟ ಪ್ರಕಾಶ್‍ ರಾಜ್‍ ಮತ್ತು ನಟಿ ರುಕ್ಮಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಉಪಸ್ಥಿತರಿರಲಿದ್ದಾರೆ.

RelatedPosts

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ADVERTISEMENT
ADVERTISEMENT

ಸಂಜೆ 5.30ಕ್ಕೆ ಡಾ. ಜ್ಯೋತ್ಸ್ನಾ ಶ್ರೀಕಾಂತ್‍ ಅವರ ನೇತೃತ್ವದಲ್ಲಿ 35 ಕಲಾವಿದರಿಂದ ‘ವಿಶ್ವ ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದ್ದು, ಸಂಜೆ ಆರು ಗಂಟೆಗೆ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ರಾತ್ರಿ 8ಕ್ಕೆ ಚಿತ್ರೋತ್ಸವದ ಉದ್ಘಾಟನಾ ವೇದಿಕೆಯಲ್ಲಿ ನೆದರ್‍ಲ್ಯಾಂಡ್‍ ದೇಶದ ‘ಪೋರ್ಟ್ ಬ್ಯಾಗೇಜ್‍’ ಚಿತ್ರವು ಉದ್ಘಾಟನಾ ಚಿತ್ರವಾಗಿ ಪ್ರದರ್ಶನವಾಗಲಿದೆ.

ಜನವರಿ 30ರಿಂದ ಫೆಬ್ರವರಿ 06ರವರೆಗೂ, ಈ ಚಿತ್ರೋತ್ಸವದಲ್ಲಿ 65 ದೇಶಗಳ ಸುಮಾರು 225 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು ಆಯಾ ದೇಶದ ಸ್ಥಿತಿ-ಗತಿ, ಜನ ಜೀವನ ಮತ್ತು ಸಂಸ್ಕೃತಿಯನ್ನು ಬಿಂಬಿಸಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಈ ಚಿತ್ರೋತ್ಸವದಲ್ಲಿ ‘ಬೆಂಗಳೂರಿನಲ್ಲಿ ಜಗತ್ತು’ ಎನ್ನುವ ಶೀರ್ಷಿಕೆಯಡಿ ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಇದಲ್ಲದೆ ಈ ಚಿತ್ರೋತ್ಸವದಲ್ಲಿ ಏಷಿಯನ್‌ ಸಿನಿಮಾ ಸ್ಪರ್ಧಾ ವಿಭಾಗ, ಚಿತ್ರ ಭಾರತಿ (ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗ), ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಸಮಕಾಲೀನ ವಿಶ್ವ ಸಿನಿಮಾ, ಕನ್ನಡ ಜನಪ್ರಿಯ ಸಿನಿಮಾ, ಫಿಪ್ರೆಸ್ಕಿ – ವಿಮರ್ಶಕರ ವಾರ, ಜೀವನ ಕಥನ ಆಧಾರಿತ ಚಿತ್ರಗಳು, ದೇಶ ಕೇಂದ್ರಿತ ವಿಶೇಷ: ಪೋಲೆಂಡ್‌, ಭಾರತೀಯ ಉಪಭಾಷಾ ಚಲನಚಿತ್ರಗಳು, ಪುನರಾವಲೋಕನ‌ ಮುಂತಾದ ವಿಭಾಗಗಳಡಿ ಹಲವು ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.

ಕನ್ನಡದ ಮೇರು ನಟ ಪದ್ಮಭೂಷಣ ಡಾ. ರಾಜಕುಮಾರ್‌ ಅಭಿನಯದ ಐದು ಮಹತ್ವದ ಕನ್ನಡ ಚಲನಚಿತ್ರಗಳ ಪ್ರದರ್ಶನ, ಪೋಲೆಂಡಿನ ಪ್ರಖ್ಯಾತ ನಿರ್ದೇಶಕ ಆಂದ್ರೆ ವಾಜ್ದಾ ಅವರ ನಿರ್ದೇಶನದ ಏಳು ಪೋಲಿಷ್‌ ಚಲನಚಿತ್ರಗಳ ಪ್ರದರ್ಶನ, ಖ್ಯಾತ ಅಭಿನೇತ್ರಿ ಸ್ಮಿತಾ ಪಾಟೀಲ್‌ ಅವರ ಹೆಸರಾಂತ ಚಲನಚಿತ್ರಗಳ ಪ್ರದರ್ಶನ, ಥಾಯ್ಲೆಂಡಿನ ಖ್ಯಾತ ನಿರ್ದೇಶಕ ಅಚಿತಪಾಂಗ್‌ ವೀರಸೆಥಕುಲ್ ಅವರ ನಾಲ್ಕು ಪ್ರಮುಖ ಚಲನಚಿತ್ರಗಳ ಪ್ರದರ್ಶನ, ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಜನಮನ್ನಣೆ ಪಡೆದ ಸಮಕಾಲೀನ ಭಾರತೀಯ ಚಲನಚಿತ್ರಗಳ ಪ್ರದರ್ಶನ, ಸಂರಕ್ಷಿಸಲ್ಪಟ್ಟ ಮಹತ್ವದ ಭಾರತೀಯ ಚಲನಚಿತ್ರಗಳ ಪ್ರದರ್ಶನ ಕೂಡಾ ನಡೆಯಲಿದೆ.

ಚಿತ್ರೋತ್ಸವ ನಡೆಯುವ ಎಂಟು ದಿನಗಳ ಕಾಲ ಪ್ರತೀ ದಿನ ಚಿತ್ರ ನಿರ್ಮಾಣ, ನಿರ್ದೇಶನ, ಚಿತ್ರಕತೆ, ತಂತ್ರಜ್ಞಾನ ಮತ್ತು ಉದ್ಯಮಕ್ಕೆ ಸಂಬಂಧಪಟ್ಟಂತೆ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಮಾಸ್ಟರ್‌ ಕ್ಲಾಸ್‌, ವಿಚಾರ ಸಂಕಿರಣ ಮೊದಲಾದ ಕಾರ್ಯಕ್ರಮಗಳಿರುತ್ತವೆ. ಚಿತ್ರೋತ್ಸವದ ರಾಯಭರಿ ಪ್ರಕಾಶ್‍ ರಾಜ್‍ ಅವರಿಂದ ‘ನಾವು ಮತ್ತು ನಮ್ಮ ಸಿನಿಮಾ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ.

ಮಿಕ್ಕಂತೆ ಖ್ಯಾತ ಸಂಕಲನಕಾರರಾದ ಶ್ರೀಕರ್ ಪ್ರಸಾದ್ ಅವರಿಂದ ‘ಚಲನಚಿತ್ರದ ಸಂಕಲನದ ಮಹತ್ವ’, ನಿರ್ದೇಶಕ ಮತ್ತು ಸಂಕಲನಕಾರ ಮಹೇಶ್ ನಾರಾಯಣನ್ ಅವರಿಂದ ‘ಸಮಕಾಲೀನ ಚಲನಚಿತ್ರ ಕಥನ ನಿರೂಪಣೆ ಮತ್ತು ಶೈಲಿ’, ಹೆಸರಾಂತ ಧ್ವನಿ ವಿನ್ಯಾಸಕರಾದ ಬಿಶ್ವದೀಪ್‌ ಚಟರ್ಜಿ ಅವರಿಂದ ‘ದೃಶ್ಯಾತೀತ ಧ್ವನಿ – ಆಡಿಯೋಗ್ರಫಿಯ ಕಲೆ’, ಅನುರಾಗ್‌ ಕಶ್ಯಪ್‌ರವರಿಂದ‌ ‘ಸಾಂಪ್ರದಾಯಿಕ ಕಲ್ಪನೆಗಳಾಚೆಗಿನ ಚಲನಚಿತ್ರ ಕಥನಗಾರಿಕೆ’ ಕುರಿತ ಉಪನ್ಯಾಸ ನಡೆಯಲಿದೆ.

ಹೆಸರಾಂತ ಛಾಯಾಗ್ರಾಹಕ ವಿ.ಕೆ. ಮೂರ್ತಿ ಕುರಿತು ವಾರ್ಷಿಕ ಸ್ಮಾರಕ ಉಪನ್ಯಾಸ ನಡೆಯಲಿದ್ದು, ‘ಲೆನ್ಸ್‌ಗಳ ಆಯ್ಕೆ, ಬೆಳಕಿನ ವಿನ್ಯಾಸ ಮತ್ತು ಛಾಯಾಗ್ರಹಣ ಕಲೆ’ ಕುರಿತು ಮಾತುಕತೆ ನಡೆಯಲಿದ್ದು, ಹಿರಿಯ ಛಾಯಾಗ್ರಾಹಕರಾದ ಜಿ.ಎಸ್‌. ಭಾಸ್ಕರ್‌ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.

ಡಾ. ಗಿರೀಶ್ ಕಾಸರವಳ್ಳಿ, ಡಾ. ಸಾಧು ಕೋಕಿಲ, ಡಾ. ಜಯಮಾಲ ಹಾಗೂ ಇತರರೊಂದಿಗೆ ಕಳೆದ ನಾಲ್ಕು ದಶಕಗಳ ಕನ್ನಡ ಸಿನಿಮಾ ಬಗ್ಗೆ ಸಂವಾದ, ಗಿರೀಶ್ ಕಾಸರವಳ್ಳಿ ಅವರಿಂದ ʼಚಲನಚಿತ್ರ ಕಥನಗಳಲ್ಲಿ ನಮ್ಮತನ ಮತ್ತು ನೈಜತೆʼ ಕುರಿತ ಉಪನ್ಯಾಸ ನಡೆಯಲಿದೆ. ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಚಿತ್ರೋತ್ಸವದ ಧ್ಯೇಯವಾಕ್ಯ ಕೇಂದ್ರಿತ ಸಂವಾದ ಕಾರ್ಯಕ್ರಮ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ನಡೆಯಲಿವೆ.

ಈ ಪ್ರತಿಷ್ಠಿತ ಚಿತ್ರೋತ್ಸವವು ಜನವರಿ 29ರಿಂದ ಫೆಬ್ರವರಿ 06ರವರೆಗೂ ನಡೆಯಲಿದ್ದು, ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್‍ನ ಸಿನಿಪೊಲಿಸ್‍ ಮಲ್ಟಿಪ್ಲೆಕ್ಸ್ ಅಲ್ಲದೆ, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ ಮತ್ತು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಚಿತ್ರಗಳು ಪ್ರದರ್ಶನವಾಗಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (13)

ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 19, 2026 - 2:36 pm
0

ವಾಂಗ್ಚುಕ್ (12)

ಫಿಫಾ ವಿಶ್ವಕಪ್ ಫೈನಲ್ 2026: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು CM DK ಶಿವಕುಮಾರ್ ಮನವಿ

by ದಿಶಾ ಕೆ. ಎಸ್.
July 19, 2026 - 1:42 pm
0

ವಾಂಗ್ಚುಕ್ (11)

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಹಾಸನದಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್

by ದಿಶಾ ಕೆ. ಎಸ್.
July 19, 2026 - 12:55 pm
0

ವಾಂಗ್ಚುಕ್ (10)

ಅಮೆರಿಕ ದೇಶಕ್ಕೆ ಎಂದೂ ಮರೆಯದ ಪಾಠ ಕಲಿಸುತ್ತೇವೆ!: ಟ್ರಂಪ್ ಗೆ ಇರಾನ್ ಸರ್ವೋಚ್ಛ ನಾಯಕ ವಾರ್ನಿಂಗ್

by ದಿಶಾ ಕೆ. ಎಸ್.
July 19, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version