ಮುಂಬೈ: ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸೆಂಬರ್ 8ರಂದು ತಮ್ಮ 90ನೇ ಹುಟ್ಟುಹಬ್ಬ ಆಚರಿಸಲಿರುವ ಈ ಹಿರಿಯ ನಟ ಆರೋಗ್ಯ ಸ್ಥಿತಿ ಏರುಪೇರಾಗಿರುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಧರ್ಮೇಂದ್ರ ಅವರನ್ನು ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ವಯಸ್ಸನ್ನು ಪರಿಗಣಿಸಿ ಕಾಲಕಾಲಕ್ಕೆ ನಡೆಸುವ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.ಧರ್ಮೇಂದ್ರ ಅವರು ಸಂಪೂರ್ಣವಾಗಿ ಚೆನ್ನಾಗಿದ್ದಾರೆ ಮತ್ತು ಆತಂಕವೇನಿಲ್ಲ. ಇದು ಕೇವಲ ರೊಟೀನ್ ಮೆಡಿಕಲ್ ಚೆಕಪ್ ಮಾತ್ರ ಎಂದು ವೈಧ್ಯರು ತಿಳಿಸಿದ್ದಾರೆ.
ಈ ಸಮಯದಲ್ಲಿ ಧರ್ಮೇಂದ್ರ ಅವರ ಪುತ್ರರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಅವರು ತಂದೆಯ ಆರೋಗ್ಯದ ಬಗ್ಗೆ ವೈದ್ಯರಿಂದ ನೇರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕುಟುಂಬದ ಸದಸ್ಯರು ಅವರೊಂದಿಗೆ ನೇರವಾಗಿ ಸಂಪರ್ಕದಲ್ಲಿದ್ದು, ಆತಂಕವಿಲ್ಲ ಎಂದು ತಿಳಿಸಿದ್ದಾರ.
ಈ ವರ್ಷ ಏಪ್ರಿಲ್ ತಿಂಗಳಲ್ಲಿ ನಟ ಧರ್ಮೇಂದ್ರ ಕಣ್ಣಿನ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. 89 ವರ್ಷದ ನಟರಿಗೆ ಮಾಡಲಾದ ಈ ಶಸ್ತ್ರಚಿಕಿತ್ಸೆಯ ನಂತರದ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವೈದಯರು ತಿಳಿಸಿದ್ದಾರೆ.
ಧರ್ಮೇಂದ್ರ ತಮ್ಮ 90 ವರ್ಷದ ವಯಸ್ಸಿನಲ್ಲೂ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ಇತೀಚಿಗೆ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಮುಂದೆ, ಅವರು ‘ಇಕ್ಕಿಸ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ಅವರ ಶೋಲೆ ಚಿತ್ರದ ಸಹನಟ ಅಮಿತಾಬ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ರ ನಂದಾ ಕೂಡ ನಟಿಸಿದ್ದಾರೆ.
 
			
 
					




 
                             
                             
                             
                             
                            