• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್”(BRAT) ಚಿತ್ರದ ” ನಾನೇ ನೀನಂತೆ ” ಹಾಡಿಗೆ ಮೆಚ್ಚುಗೆಯ ಸುರಿಮಳೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 26, 2025 - 8:12 pm
in ಸಿನಿಮಾ
0 0
0
Web 2025 07 26t200345.658

ಸದಭಿರುಚಿಯ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶನದ, ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ ” ಬ್ರ್ಯಾಟ್” ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಈ ಚಿತ್ರದ “ನಾನೇ ನೀನಂತೆ” ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಹಾಡನ್ನು ಜನಪ್ರಿಯ ಗಾಯಕ ಸಿದ್ ಶ್ರೀರಾಮ್ ಹಾಡಿದ್ದಾರೆ. ಕನ್ನಡದ ಫಿಮೇಲ್ ವರ್ಷನ್ “ಸರಿಗಮಪ” ಖ್ಯಾತಿಯ ಲಹರಿ ಮಹೇಶ್ ಹಾಡಿದ್ದಾರೆ.

ಉಳಿದ ನಾಲ್ಕು ಭಾಷೆಗಳಲ್ಲಿ ಫೀಮೇಲ್ ವರ್ಷನ್ ಸಿರೀಶ ಹಾಡಿದ್ದಾರೆ. ಹಿಂದಿಯಲ್ಲಿ ಮೇಲ್ ವರ್ಷನ್ ನಿಹಾಲ್ ತವ್ರು ಹಾಗೂ ತೆಲುಗು – ತಮಿಳಿನಲ್ಲಿ ಶ್ರೀಕಾಂತ್ ಹರಿಹರನ್ ಹಾಡಿದ್ದಾರೆ. ಈ ಹಿಂದೆ ಶಶಾಂಕ್, ಅರ್ಜುನ್ ಜನ್ಯ ಹಾಗೂ ಸಿದ್ ಶ್ರೀರಾಮ್ ಅವರ ಕಾಂಬಿನೇಶನ್ ನಲ್ಲಿ “ಲವ್ 360” ಚಿತ್ರದ “ಜಗವೇ ನೀನು ಗೆಳತಿಯೇ” ಹಾಡು ಭರ್ಜರಿ ಯಶಸ್ಸು ಕಂಡಿತ್ತು‌. ಈಗ ಈ ಹಾಡಿಗೂ ಎಲ್ಲಾ ಭಾಷೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯೂ ಆಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ನಟ ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟ್ರೈಲರ್ ಲಾಂಚ್‌ಗೆ ಡೇಟ್ ಫಿಕ್ಸ್

ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!

ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ

ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ

ADVERTISEMENT
ADVERTISEMENT

Whatsapp image 2025 07 26 at 7.42.56 pm (1)

“ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ನನ್ನ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರ “ಬ್ರ್ಯಾಟ್”. ನನ್ನ ಈ ಚಿತ್ರದ ಲುಕ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣರಾದ ನಿರ್ದೇಶಕ ಶಶಾಂಕ್ ಹಾಗೂ ತಂಡಕ್ಕೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಿದ್ ಶ್ರೀರಾಮ್ ಹಾಗೂ ಲಹರಿ ಅವರ ಗಾಯನ ಹಾಡಿಗೆ ಪೂರಕವಾಗಿದೆ. ಮುಂದಿನ ತಿಂಗಳು ಚಿತ್ರದ ಇನ್ನೊಂದು ಹಾಡು ಬಿಡುಗಡೆಯಾಗಲಿದೆ. ಆ ಹಾಡಂತೂ ನನ್ನ ಮಗಳಿಗೆ ಬಹಳ ಇಷ್ಟ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು.

Whatsapp image 2025 07 26 at 7.42.56 pm

ನನ್ನ ಹಾಗೂ ಅರ್ಜುನ್ ಜನ್ಯ ಅವರ ಕಾಂಬಿನೇಶನ್ ನಲ್ಲಿ ಬಂದಿರುವ ಎಲ್ಲಾ ಹಾಡುಗಳು ಅತೀ ಹೆಚ್ಚು ಜನಪ್ರಿಯವಾಗಿದೆ. ಈಗ ಆ ಸಾಲಿಗೆ “ನಾನೇ ನೀನಂತೆ” ಹಾಡು ಕೂಡ ಸೇರಲಿದೆ. ನನ್ನ ಸಿನಿ ಜರ್ನಿಯಲ್ಲೇ ಅತೀ ಹೆಚ್ಚು ವೆಚ್ಚದಲ್ಲಿ ಮೂಡಿಬಂದಿರುವ ಹಾಡಿದು. ಈ ಹಾಡಿನ ಟ್ಯೂನ್ ಅಂತಿಮಗೊಳಿಸಲು ಸುಮಾರು 6 ತಿಂಗಳ ಸಮಯ ಬೇಕಾಯಿತು. ನಿರ್ಮಾಪಕ ಮಂಜುನಾಥ್ ಅವರಂತೂ ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ.

Whatsapp image 2025 07 26 at 7.42.55 pm (2)

ಕನ್ನಡ ಹಾಗೂ ತೆಲುಗಿನಲ್ಲಿ ಸಿದ್ ಶ್ರೀರಾಮ್ ಅವರ ಧ್ವನಿಯಂತೂ ಹೇಳಿ ಮಾಡಿಸಿದ ಹಾಗಿದೆ. ಹಿಂದಿಯಲ್ಲಿ ಕನ್ನಡದ ಹುಡುಗ ನಹಾಲ್ ತವ್ರು , ತಮಿಳು, ಮಲೆಯಾಳಂ ನಲ್ಲಿ ಶ್ರೀಕಾಂತ್ ಹರಿಹರನ್ ಈ ಹಾಡನ್ನು ಹಾಡಿದ್ದಾರೆ‌. ಕನ್ನಡದಲ್ಲಿ ಫೀಮೇಲ್ ವರ್ಷನ್ ಲಹರಿ ಮಹೇಶ್ ಹಾಡಿದ್ದು , ಉಳಿದ ನಾಲ್ಕು ಭಾಷೆಗಳಲ್ಲಿ ಹೆಣ್ಣು ಧ್ವನಿ ಸಿರೀಶ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಕನ್ನಡದಲ್ಲಿ ಈ ಹಾಡನ್ನು ನಾನೇ ಬರೆದಿದ್ದೇನೆ. ಆನಂದ್ ಆಡಿಯೋ ಮೂಲಕ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದೆ. ಸದ್ಯದಲ್ಲೇ ಉಳಿದ ಹಾಡುಗಳು ಸಹ ಬಿಡುಗಡೆಯಾಗಲಿದೆ. ಅಂದುಕೊಂಡ ಹಾಗೆ ಆದರೆ ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಶಶಾಂಕ್ ತಿಳಿಸಿದರು.

Whatsapp image 2025 07 26 at 7.42.55 pm (1)

ನಮ್ಮ ಮೊದಲ ನಿರ್ಮಾಣದ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ಗೆಲುವಿಗೆ ನೀವೆಲ್ಲಾ ನೀಡಿದ ಪ್ರೋತ್ಸಾಹವೇ ಕಾರಣ. ಇದು ನಮ್ಮ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರ. ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿರುವ ಈ ಹಾಡು ಸುಮಧುರವಾಗಿದೆ‌. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್.

Whatsapp image 2025 07 26 at 7.42.55 pm

ನಾನು ಕನ್ನಡದವಳು. ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮವರ್ಗದ ಹುಡುಗಿ ಪಾತ್ರ. ಚಿತ್ರದಲ್ಲೂ ನನ್ನ ಪಾತ್ರದ ಹೆಸರು ಮನಿಶಾ. ಇಂದು ಬಿಡುಗಡೆಯಾಗಿರುವ “ನಾನೇ ನೀನಂತೆ” ನನ್ನ ಇಷ್ಟದ ಹಾಡು ಎಂದರು ನಾಯಕಿ ಮನಿಶಾ ಕಂದಕೂರ್.

ಗಾಯಕಿ ಲಹರಿ, ಆನಂದ್ ಆಡಿಯೋ ಶ್ಯಾಮ್, ನೃತ್ಯ ನಿರ್ದೇಶಕ‌ ಕಲೈ ಮಾಸ್ಟರ್ ಹಾಗೂ ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ ಸಹ “ನಾನೇ ನೀನಂತೆ” ಹಾಡಿನ ಕುರಿತು ಮಾತನಾಡಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 01T123006.873

ಮಸಾಲಾ ಬಾಂಡ್ ಹಗರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ED ನೋಟಿಸ್

by ಶಾಲಿನಿ ಕೆ. ಡಿ
December 1, 2025 - 12:37 pm
0

Untitled design 2025 12 01T121548.643

ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ : 50 ಕ್ಕೂ ಹೆಚ್ಚು ಮಂದಿ ಪೊಲೀಸ್‌ ವಶಕ್ಕೆ

by ಶಾಲಿನಿ ಕೆ. ಡಿ
December 1, 2025 - 12:21 pm
0

Untitled design 2025 12 01T114647.464

ನಟ ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟ್ರೈಲರ್ ಲಾಂಚ್‌ಗೆ ಡೇಟ್ ಫಿಕ್ಸ್

by ಶಾಲಿನಿ ಕೆ. ಡಿ
December 1, 2025 - 11:48 am
0

Untitled design 2025 12 01T111605.484

ಸಂಸತ್‌ ಭವನವು ಡ್ರಾಮಾ ಮಾಡುವ ವೇದಿಕೆ ಅಲ್ಲ: ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
December 1, 2025 - 11:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 01T114647.464
    ನಟ ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟ್ರೈಲರ್ ಲಾಂಚ್‌ಗೆ ಡೇಟ್ ಫಿಕ್ಸ್
    December 1, 2025 | 0
  • Untitled design 2025 11 30T215449.468
    ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!
    November 30, 2025 | 0
  • Untitled design 2025 11 30T200428.504
    ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ
    November 30, 2025 | 0
  • Untitled design 2025 11 30T191619.433
    ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ
    November 30, 2025 | 0
  • Untitled design 2025 11 30T184257.823
    ‘ಅಪಾರ್ಥ ಮಾಡ್ಕೋಬೇಡಿ’ ಎಂದು ರಂಜಿಸಿದ್ದ ನಟ ಉಮೇಶ್ ಇನ್ನು ನೆನಪು ಮಾತ್ರ.!
    November 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version