ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಕೇಸ್: ಸಿಸಿಬಿಯಿಂದ 380 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Untitled design (11)

ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಮ್ಯಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಕ್ರೈಂ ಬ್ರಾಂಚ್ (ಸಿಬಿಬಿ) ಪೊಲೀಸರು 380 ಪುಟಗಳ ಚಾರ್ಜ್‌ಶೀಟ್ ಅನ್ನು 45ನೇ ಎಸಿಜೆಎಂ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ 11 ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ. ಈ ಚಾರ್ಜ್‌ಶೀಟ್‌ನಲ್ಲಿ ಅಶ್ಲೀಲ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು, ಆರೋಪಿಗಳ ಐಪಿ ವಿಳಾಸಗಳು, ಮತ್ತು ಇತರ ಸಾಕ್ಷ್ಯಾಧಾರಗಳನ್ನು ಸಿಬಿಬಿ ಪೊಲೀಸರು ಸಂಗ್ರಹಿಸಿ ಸಿದ್ಧಪಡಿಸಿದ್ದಾರೆ.

ಕಳೆದ ಜುಲೈ ತಿಂಗಳಲ್ಲಿ ನಟಿ ರಮ್ಯಾ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದರು. ಈ ಕಾಮೆಂಟ್‌ಗೆ ಪ್ರತಿಕ್ರಿಯೆಯಾಗಿ ಕೆಲವು ಕಿಡಿಗೇಡಿಗಳು ರಮ್ಯಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು. ಈ ಸಂದೇಶಗಳಿಗೆ ಸಂಬಂಧಿಸಿದಂತೆ 43 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಘಟನೆಯ ತನಿಖೆಯನ್ನು ಸಿಬಿಬಿ ಪೊಲೀಸರು ತೆಗೆದುಕೊಂಡು, ಕಿಡಿಗೇಡಿಗಳಿಗೆ ಕಾನೂನಿನ ಕಠಿಣ ಕ್ರಮದ ಬಿಸಿ ಮುಟ್ಟಿಸಿದ್ದಾರೆ.

ಸಿಬಿಬಿ ಪೊಲೀಸರು ಈ ಪ್ರಕರಣದಲ್ಲಿ ತೀವ್ರ ತನಿಖೆ ನಡೆಸಿ, 48 ಐಪಿ ವಿಳಾಸಗಳನ್ನು ಪತ್ತೆ ಹಚ್ಚಿದ್ದಾರೆ. ಈ ಐಪಿ ವಿಳಾಸಗಳ ಮೂಲಕ 15 ಆರೋಪಿಗಳನ್ನು ಗುರುತಿಸಲಾಗಿದ್ದು, ಹಲವರನ್ನು ಬಂಧಿಸಲಾಗಿದೆ. ಕೆಲವರು ಸಾಮಾನ್ಯ ಕಾಮೆಂಟ್‌ಗಳನ್ನು ಮಾಡಿದ್ದರೆ, ಇನ್ನೂ ಕೆಲವರು ಅರಿವಿಲ್ಲದೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದರು. ಇಂತಹವರಿಗೆ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ. ಕೆಲವರು ಕ್ಷಮೆಯಾಚನೆ ಮಾಡಿದ್ದಾರೆ. ಆದರೆ, ಗಂಭೀರವಾಗಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದವರು ತಮ್ಮ ಐಪಿ ವಿಳಾಸಗಳನ್ನು ಬ್ಲಾಕ್ ಮಾಡಿ, ಊರು ಬಿಟ್ಟು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Exit mobile version