ಚೌಕಿದಾರ್ ಟೀಸರ್ ರಿಲೀಸ್: ರಕ್ತಸಿಕ್ತ ಅವತಾರದಲ್ಲಿ ಪೃಥ್ವಿ ಅಂಬರ್ ಅಬ್ಬರ

Untitled design 2025 05 25t154153.306

ಪೃಥ್ವಿ ಅಂಬರ್ ಹಾಗೂ ಧನ್ಯ ರಾಮ್ ಕುಮಾರ್ ನಟನೆಯ ಚೌಕಿದಾರ್ ಸಿನಿಮಾದ ಟೀಸರ್ MRT ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ರಕ್ತಸಿಕ್ತ ಅವತಾರವೆತ್ತಿರುವ ಪೃಥ್ವಿ ಹೊಸ ಲುಕ್ ಸಿನಿರಸಿಕರಿಗೆ ಕಿಕ್ ಕೊಟ್ಟಿದ್ದಾರೆ. ನಾಯಕಿ ಧನ್ಯ ರಾಮ್ ಕುಮಾರ್ ಡಿ ಗ್ಲಾಮರ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಟೀಸರ್ ನಲ್ಲಿ ಎಲ್ಲಾ ಪಾತ್ರಗಳನ್ನು ತೋರಿಸಿರುವ ಚಂದ್ರಶೇಖರ್ ಬಂಡಿಯಪ್ಪ ಕಥೆಯ ಗುಟ್ಟನ್ನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದ್ದು, ಖಾಕಿ ಲುಕ್ ನಲ್ಲಿ ಸುಧಾರಾಣಿ‌ ಖದರ್ ತೋರಿಸಿದ್ದಾರೆ. ಹಿರಿಯ ನಟ ಸಾಯಿ ಕುಮಾರ್ ಪೃಥ್ವಿ ತಂದೆ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ಧರ್ಮ, ಹಿರಿಯ ನಟಿ ಶ್ವೇತಾ ತಾರಾ ಬಳಗದಲ್ಲಿದ್ದಾರೆ.

ಸಚಿನ್ ಬಸ್ರೂರ್ ಸಂಗೀತ ಟೀಸರ್‌ನಲ್ಲಿ ಗಮನಸೆಳೆಯುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ವಿ.ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ಪೃಥ್ವಿರಾಜ್ ಧಘಾರಿ ಸಹನಿರ್ದೇಶನ ಸಿನಿಮಾಗಿದೆ.

‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಟೀಸರ್ ನೋಡುತ್ತಿದ್ದರೇ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಯಾವುದೋ ಹೊಸ ಕಥೆಯನ್ನು ಹರವಿಡಲು ಹೊರಟಿರುವುದು ಗೊತ್ತಾಗುತ್ತಿದೆ.

ಜೂ1 ರಂದು ಮೊದಲ ಹಾಡು ರಿಲೀಸ್

ಟೀಸರ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಜೂನ್ 1ರಂದು ಚೌಕಿದಾರ್ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲಿದೆ. ಶೀಘ್ರದಲ್ಲೇ ರಿಲೀಸ್ ಡೇಟ್ ನ್ನು ಚಿತ್ರತಂಡ ರಿವೀಲ್ ಮಾಡಲಿದೆ.

Exit mobile version