ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಪ್ರವಾಸದಲ್ಲಿದ್ದಾರೆ, ಇಂದು ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ಅವರು ಮೈಸೂರಿನ ಸಿಎಂ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಭಾನುವಾರ ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಕನ್ನಡ ಚಿತ್ರರಂಗದ ನಟ ಸುದೀಪ್ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದ ಸಿಎಂ, ಅದರ ಬೆನ್ನಲ್ಲೇ ರಾಮ್ ಚರಣ್ ಅವರನ್ನು ತಮ್ಮ ಮೈಸೂರಿನ ನಿವಾಸದಲ್ಲಿ ಭೇಟಿಯಾದರು.
ರಾಮ್ ಚರಣ್ ನಟನೆಯ ಪೆದ್ದಿ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿರುವದರ ಕುರಿತು ಮಾತುಕತೆ ನಡೆಸಿದ ಸಿಎಂ, ಈ ವೇಳೆ ನಟ ರಾಮ್ ಚರಣ್ ಅವರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಮತ್ತು ಪ್ರಭಾಕರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.