ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯದ ಮುಖ್ಯಮಂತ್ರಿಯಾದರೆ ಹೇಗಿರುತ್ತೆ ಎಂಬ ಎಳೆ ಇಟ್ಟುಕೊಂಡು ಕಥೆ ಬರೆದು ಸುರಭಿ ಫಿಲಂಸ್ ಅಡಿ ಎನ್. ನರಸಿಂಹಮೂರ್ತಿ ಅವರು ‘ಕಾಮನ್ ಮ್ಯಾನ್’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು ಈ ಚಿತ್ರದ ಚಿತ್ರಕಥೆ ರಚಿಸಿ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಕೆರೆಬೇಟೆ ಖ್ಯಾತಿಯ ನಟ ಗೌರಿಶಂಕರ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಲಾಂಚ್ ಕಾರ್ಯಕ್ರಮ ನಡೆಯಿತು. ವಿನಯ ಚಂದ್ರ ಅವರ ಸಂಗೀತ ನಿರ್ದೇಶನ, ಜೆ.ಜಿ.ಕೃಷ್ಣ, ದೀಪಕ್ ಕುಮಾರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಾಯಿಪ್ರಕಾಶ್ ನನ್ನ ನಿರ್ದೇಶನದ 106ನೇ ಚಿತ್ರವಿದು. ಒಬ್ಬ ಕಾಮನ್ ಮ್ಯಾನ್ ರಾಜ್ಯದ ಸಿಎಂ ಆದರೆ ಏನು ಮಾಡಬಹುದು ಎಂದು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ. ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಆಸೆ ಇರುತ್ತೆ. ನಾಯಕ ಒಬ್ಬ ಲಾಯರ್, ಆತ ಅನಿರೀಕ್ಷಿತವಾಗಿ ರಾಜ್ಯದ ಸಿಎಂ ಆಗ್ತಾನೆ. ನಂತರ ಆತ ಏನೇನು ಮಾಡಬಹುದು, ಸಮಾಜದಲ್ಲಿ ಏನಾದರೂ ಸುಧಾರಣೆ ಮಾಡಲು ಸಾಧ್ಯವಾಯಿತಾ ಎಂಬುದನ್ನು ಕುತೂಹಲಕರವಾಗಿ ಹೇಳೋ ಪ್ರಯತ್ನ ಮಾಡಿದ್ದೇನೆ. ನಾಯಕನ ತಂದೆ ಒಬ್ಬ ಕಲಾವಿದ. ತನ್ನ ಮಗ ಲಾಯರ್ ಆಗಿ ಸಮಾಜಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ಎನ್ನುವುದು ಆತನ ಆಸೆಯಾಗಿರುತ್ತೆ. ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದು ಅವಕಾಶ ಬರುತ್ತೆ. ಅದೇ ರೀತಿ ನಾಯಕನಿಗೂ ಅದು ಬಂದಾಗ ಅದನ್ನು ಆತ ಹೇಗೆ ಯುಟಲೈಸ್ ಮಾಡಿಕೊಳ್ತಾನೆ, ಅಲ್ಲದೆ ಆತ ಹೇಗೆ ಸಿಎಂ ಆದ ಎಂದು ಯಾರೂ ಪ್ರಶ್ನಿಸಲಾಗದ ಸಂದರ್ಭ ಕೂಡಿಬಂದಿರುತ್ತದೆ. ಕಥೆ ಕೇಳಿದ ಕೂಡಲೇ ಇದು 100% ಓಪನಿಂಗ್ ತೆಗೆದುಕೊಳ್ಳುತ್ತದೆ ಎನಿಸಿತು. ನಾಯಕಿ ಸೋನಾ ಲದ್ವಾ ಕೂಡ ಚೆನ್ನಾಗಿ ಆ್ಯಕ್ಟ್ ಮಾಡಿದ್ದಾರೆ. ಪಾತ್ರಕ್ಕೆ ಏನು ಬೇಕೋ ಅದಕ್ಕೆ ತಕ್ಕಂತೆ ಅಭಿನಯಿಸಿದ್ದಾರೆ. ಬಾಂಬೆ ಮೂಲದ ಮತ್ತೊಬ್ಬ ನಟಿಯೂ ಚಿತ್ರದಲ್ಲಿದ್ದಾರೆ. ಇದು ಕಂಟೆಂಟ್ ಸಿನಿಮಾ, ಜಾತ್ರೆ ಸಿನಿಮಾ ಅಲ್ಲ, ಶೈಲೇಶ್ ತುಂಬಾ ಚೆನ್ನಾಗಿ ಡೈಲಾಗ್ ಬರೆದಿದ್ದಾರೆ ಎಂದು ಹೇಳಿದರು.