ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ “ಯುವರಾಜ”, “ಕಂಠಿ”, “ಭರ್ಜರಿ”, “ಬಹದ್ದೂರ್ ” ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಆರ್ ಶ್ರೀನಿವಾಸ್ ಅವರು ನಿರ್ಮಿಸಿರುವ “ಕಾಟನ್ ಪೇಟೆ ಗೇಟ್” ಚಿತ್ರ ಈ ವಾರ ಜುಲೈ 11 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಆಕ್ಷನ್, ಕಾಮಿಡಿ, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ ಈ ಚಿತ್ರವನ್ನು ವೈ ರಾಜಕುಮಾರ್ ನಿರ್ದೇಶಿಸಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ADVERTISEMENT
ADVERTISEMENT
ಚೇತನ್ ಕುಮಾರ್ ಬರೆದಿರುವ ಹಾಡುಗಳಿಗೆ ಎನ್. ಎಸ್ ಪ್ರಸು ಸಂಗೀತ ಸಂಯೋಜನೆ ಮಾಡಿದ್ದಾರೆ. ಯೋಗಿ ರೆಡ್ಡಿ ಛಾಯಾಗ್ರಹಣ, ಶಿವ ಸರ್ವಣಿ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ವೇಣುಗೋಪಾಲ್, ಯಶ್ವನ್, ಸುರಭಿ ತಿವಾರಿ, ಅನುಶಾ ಜೈನ್, ಸುಧೀಕ್ಷಾ, ಕಿಸ್ಲೆ ಚೌಧರಿ , ಪಾರ್ಥು, 8 pm ಸಾಯಿಕುಮಾರ್, ರಘು, ಕಟ್ಟಪ್ಪ ಮುಂತಾದವರಿದ್ದಾರೆ. .