• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 21, 2026 - 5:47 pm
in Flash News, ಸಿನಿಮಾ
0 0
0
Untitled design 2026 07 21T174631.947

RelatedPosts

ಧನ-ಧನ್ಯಾ ಕಲ್ಯಾಣಕ್ಕೆ ಸಿನಿಮಾ ರೂಪ..ಡಾಲಿ ಫ್ಯಾನ್ಸ್ ಖುಷ್

ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋದ ವಿಜಯಲಕ್ಷ್ಮಿ: ಕರೆಕಲ್ಲಮ್ಮ ದೇವಿಗೆ ವಿಶೇಷ ಪೂಜೆ

ಏಜ್ ಈಸ್ ಜಸ್ಟ್ ಎ ನಂಬರ್..ಶಾರೂಖ್ ಸಿಕ್ಸ್‌‌ಪ್ಯಾಕ್ @61

1130Cr ಪ್ರೀ-ರಿಲೀಸ್ ಬ್ಯುಸಿನೆಸ್..ರಾಮಾಯಣ ರೆಕಾರ್ಡ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ಪ್ರೇಮ್ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿದರು. ಇಬ್ಬರೂ ಬೇರೆ ಬೇರೆ ಕಾರುಗಳಲ್ಲಿ ಜೈಲಿಗೆ ಆಗಮಿಸಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ದರ್ಶನ್ ಅವರೊಂದಿಗೆ ಮಾತುಕತೆ ನಡೆಸಿದರೆಂದು ತಿಳಿದುಬಂದಿದೆ.

ದರ್ಶನ್ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆ ಮುಂದುವರೆದಿರುವ ಹಿನ್ನೆಲೆ, ಕುಟುಂಬದ ಸದಸ್ಯರು ಹಾಗೂ ಆಪ್ತರು ಜೈಲಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಇಂದು ಕೂಡ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಜೈಲಿಗೆ ಭೇಟಿ ನೀಡಿದರು. ಅವರೊಂದಿಗೆ ನಟಿ ರಕ್ಷಿತಾ ಪ್ರೇಮ್ ಕೂಡ ಆಗಮಿಸಿದ್ದರು…

ವಿಜಯಲಕ್ಷ್ಮಿ ಇತ್ತೀಚೆಗೆ ತಮ್ಮ ಪುತ್ರನೊಂದಿಗೆ ಜೈಲಿಗೆ ತೆರಳಿ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ದರ್ಶನ್ ಅವರನ್ನು ಭೇಟಿಯಾಗಿದ್ದರು. ಇದೀಗ ಕೆಲವೇ ದಿನಗಳ ಅಂತರದಲ್ಲಿ ಮತ್ತೊಮ್ಮೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.

ಇನ್ನೊಂದೆಡೆ, ನಟಿ ರಕ್ಷಿತಾ ಪ್ರೇಮ್ ದರ್ಶನ್ ಅವರನ್ನು ಭೇಟಿ ಮಾಡಲು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿರುವುದು ಇದು ಎರಡನೇ ಬಾರಿ. ಈ ಹಿಂದೆ ಪತಿ ನಿರ್ದೇಶಕ ಪ್ರೇಮ್ ಅವರೊಂದಿಗೆ ಭೇಟಿ ನೀಡಿದ್ದ ಅವರು, ಈ ಬಾರಿ ಒಬ್ಬರೇ ಆಗಮಿಸಿ ದರ್ಶನ್ ಅವರನ್ನು ಭೇಟಿಯಾದರು.

ಜೈಲಿನ ಭೇಟಿಯ ವೇಳೆ ದರ್ಶನ್ ಅವರ ಆರೋಗ್ಯ, ಮನಸ್ಥಿತಿ ಹಾಗೂ ಇತರ ವಿಚಾರಗಳ ಕುರಿತು ಚರ್ಚೆ ನಡೆದಿರಬಹುದು ಎನ್ನಲಾಗಿದೆ. ಇಬ್ಬರ ನಡುವೆ ಏನು ಮಾತುಕತೆ ನಡೆಯಿತು ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಜೈಲಿನಿಂದ ಹೊರಬಂದ ಬಳಿಕವೂ ರಕ್ಷಿತಾ ಪ್ರೇಮ್ ಮಾಧ್ಯಮಗಳೊಂದಿಗೆ ಯಾವುದೇ ವಿವರ ಹಂಚಿಕೊಳ್ಳದೆ ಹೊರಟು ಹೋದರು..

ಮಾಧ್ಯಮ ಪ್ರತಿನಿಧಿಗಳು “ದರ್ಶನ್ ಹೇಗಿದ್ದಾರೆ?” ಎಂದು ಪ್ರಶ್ನಿಸಿದಾಗ, “ಚೆನ್ನಾಗಿದ್ದಾರೆ” ಎಂಬ ಸಂಕ್ಷಿಪ್ತ ಉತ್ತರ ನೀಡಿದ ರಕ್ಷಿತಾ, ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿ ಸ್ಥಳದಿಂದ ತೆರಳಿದರು. ವಿಜಯಲಕ್ಷ್ಮಿ ಕೂಡ ಯಾವುದೇ ಹೇಳಿಕೆ ನೀಡದೆ ಹೊರಟರು.

ಇತ್ತೀಚೆಗೆ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ದರ್ಶನ್ ಅವರೊಂದಿಗಿನ ಹಳೆಯ ಫೋಟೋ ಹಂಚಿಕೊಂಡು, “ನಗುವ ಮುಖದ ಹಿಂದಿರುವ ನೋವು ದೇವರಿಗಷ್ಟೇ ಗೊತ್ತು” ಎಂಬ ಭಾವುಕ ಸಾಲು ಬರೆದುಕೊಂಡಿದ್ದರು. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದರ್ಶನ್ ಅಭಿಮಾನಿಗಳಿಂದ ಸಾಕಷ್ಟು ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸಂಕಷ್ಟದ ಸಮಯದಲ್ಲಿ ಗಂಡನ ಬೆನ್ನಿಗೆ ನಿಂತಿರುವ ವಿಜಯಲಕ್ಷ್ಮಿ ಅವರ ನಡೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದೇ ವೇಳೆ, ದರ್ಶನ್ ಪರವಾಗಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಎದುರಾಗಿದೆ. ಪ್ರಾಥಮಿಕ ಹಂತದಲ್ಲೇ ಸಲ್ಲಿಸಿದ್ದ ಅರ್ಜಿಯನ್ನು ರಿಜಿಸ್ಟ್ರಾರ್ ಕಚೇರಿ ವಿಚಾರಣೆಗೆ ಅರ್ಹವಲ್ಲ ಎಂದು ಪರಿಗಣಿಸಿ ತಿರಸ್ಕರಿಸಿರುವುದರಿಂದ, ಅರ್ಜಿ ನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆಗೆ ಬರಲಿಲ್ಲ. ಇದರಿಂದ ಜಾಮೀನು ಪಡೆಯುವ ಪ್ರಯತ್ನಕ್ಕೆ ತಾತ್ಕಾಲಿಕ ಅಡ್ಡಿಯಾಗಿದ್ದು, ಮುಂದಿನ ಕಾನೂನು ಕ್ರಮಗಳತ್ತ ದರ್ಶನ್ ಪರ ವಕೀಲರು ಗಮನ ಹರಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಉದ್ಘಾಟನೆ

by ಶಾಲಿನಿ ಕೆ. ಡಿ
November 3, 2026 - 6:54 pm
0

Your paragraph text 2026 11 03T174250.217

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

by ಶಾಲಿನಿ ಕೆ. ಡಿ
November 3, 2026 - 5:48 pm
0

Your paragraph text 2026 11 03T173820.398

ಬೆಂಗಳೂರಿನಲ್ಲಿ ನಕಲಿ ಔಷಧಿ ಜಾಲ ಪತ್ತೆ: ಆರೋಪಿ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್ ಮಾಡಿದ ಇಡಿ

by ಶಾಲಿನಿ ಕೆ. ಡಿ
November 3, 2026 - 5:39 pm
0

Your paragraph text 2026 11 03T165959.810

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ, 8 ಕೋಟಿಯಷ್ಟು ಆದಾಯ ಬಂದಿದೆ: ಸಚಿವ ಶಿವಲಿಂಗೇಗೌಡ

by ಶಾಲಿನಿ ಕೆ. ಡಿ
November 3, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 10 28T121141.177
    ‘ರಾಜೀವ್ ಗಾಂಧಿ ಪ್ರಧಾನಿಯಾಗುವುದು ನನಗೆ ಇಷ್ಟವಿರಲಿಲ್ಲ’: ಸೋನಿಯಾ ಗಾಂಧಿ
    October 28, 2026 | 0
  • Untitled Design 2026 10 28T113048.123
    ‘ಅರ್ನಬ್’ ಚಂಡಮಾರುತದ ಅಬ್ಬರಕ್ಕೆ ಆಂಧ್ರ ತತ್ತರ; 100ಕ್ಕೂ ಹೆಚ್ಚು ರೈಲುಗಳು, ವಿಮಾನ ಸಂಚಾರ ರದ್ದು
    October 28, 2026 | 0
  • Untitled Design 2026 10 28T075841.742
    ‘ಅರ್ನಾಬ್’ ಚಂಡಮಾರುತಕ್ಕೆ ಚೆನ್ನೈ ತತ್ತರ: ರಸ್ತೆಗೆ ನುಗ್ಗಿದ ಸಮುದ್ರದ ನೀರು, ವಾಹನಗಳಿಗೆ ಹಾನಿ
    October 28, 2026 | 0
  • ಔಟ್
    ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    October 27, 2026 | 0
  • ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    ಎಥೆನಾಲ್ ಇಂಧನ ಬಳಕೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
    October 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version