ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಬೆಂಗಳೂರು, ರಾಜಸ್ಥಾನ, ಬ್ಯಾಂಕಾಕ್ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಇತ್ತೀಚೆಗೆ ಎರಡು ಹಾಡುಗಳ ಚಿತ್ರೀಕರಣ ಬ್ಯಾಂಕಾಕ್ ನಲ್ಲಿ ಮುಗಿಸಿರುವ ಚಿತ್ರತಂಡ ಭಾರತಕ್ಕೆ ಮರಳಿದೆ. ಇದರೊಂದಿಗೆ “ದಿ ಡೆವಿಲ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ದರ್ಶನ್ ಅವರು ಸೇರಿದಂತೆ ಎಲ್ಲಾ ಕಲಾವಿದರ ಡಬ್ಬಿಂಗ್ ಸಹ ಪೂರ್ಣವಾಗಿದೆ. ಸದ್ಯದಲ್ಲೇ ಹಾಡೊಂದನ್ನು ಬಿಡುಗಡೆ ಮಾಡುವುದಾಗಿ ತಿಳಿಸಿರುವ ನಿರ್ದೇಶಕರು ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುವುದಾಗಿ ಹೇಳಿದ್ದಾರೆ.
ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.