ನಟ ಧನ್ವೀರ್‌‌ಗೆ ಬಿಗ್ ರಿಲೀಫ್: ಮೂರು ಎಫ್‌ಐಆರ್‌ಗಳ ತನಿಖೆಗೆ ಹೈಕೋರ್ಟ್ ತಡೆ

Your paragraph text (35)

ಬೆಂಗಳೂರು: ನಟ ಧನ್ವೀರ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ನಟ ಧನ್ವೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಆ ಮೂರು ಪ್ರಕರಣಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನಟ ಧನ್ವೀರ್, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಮೂರು ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಂತನ್ ಹೆಗ್ಡೆ ಅವರ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮೂರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗಳು

ನಟ ಧನ್ವೀರ್ ವಿರುದ್ಧ ಬ್ಯಾಟರಾಯನಪುರ, ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್‌ಗಳು ದಾಖಲಾಗಿದ್ದವು. ಈ ಮೂರು ಪ್ರಕರಣಗಳನ್ನೂ ರದ್ದುಪಡಿಸುವಂತೆ ಕೋರಿ ಧನ್ವೀರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ನಟಿ ವಿಜಯಲಕ್ಷ್ಮೀ ಅವರ ಮ್ಯಾನೇಜರ್ ನಾಗರಾಜ್ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಧನ್ವೀರ್ ವಿರುದ್ಧ ಪ್ರಕರಣ ದಾಖಲಾಗಿತ್ತು. 

ಇನ್ನು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಭೋಜರಾಜ್ ರೈ ಎಂಬುವವರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೂ ಧನ್ವೀರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಮತ್ತೊಂದೆಡೆ, ಝೈದ್ ಖಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್ ರದ್ದತಿಗೆ ಧನ್ವೀರ್ ಮನವಿ

ತಮ್ಮ ವಿರುದ್ಧ ದಾಖಲಾಗಿರುವ ಈ ಪ್ರಕರಣಗಳನ್ನು ಪ್ರಶ್ನಿಸಿರುವ ನಟ ಧನ್ವೀರ್, ಮೂರು ಎಫ್‌ಐಆರ್‌ಗಳನ್ನೂ ರದ್ದುಪಡಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ದೂರುಗಳು ಮತ್ತು ಅವುಗಳ ಆಧಾರದ ಮೇಲೆ ನಡೆದಿರುವ ಕಾನೂನು ಪ್ರಕ್ರಿಯೆಗಳನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಈ ಅರ್ಜಿಯ ವಿಚಾರಣೆ ಹೈಕೋರ್ಟ್‌ನ ನ್ಯಾಯಮೂರ್ತಿ ಅನಂತ್ ರಾಮನಂತನ್ ಹೆಗ್ಡೆ ಅವರ ಪೀಠದಲ್ಲಿ ನಡೆದಿದೆ. ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಮೂರು ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಿಂದ ಸದ್ಯಕ್ಕೆ ಧನ್ವೀರ್‌ಗೆ ತಾತ್ಕಾಲಿಕ ಕಾನೂನು ನಿರಾಳತೆ ಸಿಕ್ಕಂತಾಗಿದೆ.

Exit mobile version