ಗೋಲ್ಡನ್ ಸ್ಟಾರ್ ಗಣೇಶ್ ಜನ್ಮದಿನಕ್ಕೆ ರಂಜನಿ ರಾಘವನ್ ನಿರ್ದೇಶನದ “ಡಿಡಿ ಢಿಕ್ಕಿ” ಚಿತ್ರತಂಡದ ಶುಭಾಶಯ

ಹಂಪಿ ಪಿಕ್ಚರ್ಸ್ & R K & A K ಎಂಟರ್ಟೈನ್ಮೆಂಟ್ ನಿರ್ಮಾಣದ, ರಂಜನಿ ರಾಘವನ್ ನಿರ್ದೇಶನದ "ಡಿಡಿ ಢಿಕ್ಕಿ" ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ. "ನೆನಪಿರಲಿ" ಪ್ರೇಮ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಗಣೇಶ್ ಪುತ್ರ ವಿಹಾನ್.

Web 2025 07 02t144153.623

“ಗುರು ಶಿಷ್ಯರು”, “ಲ್ಯಾಂಡ್‌ ಲಾರ್ಡ್” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ್ ಹಂಪಿ ಅವರ ಹಂಪಿ ಪಿಕ್ಚರ್ಸ್ ಹಾಗೂ ರಾಮಕೃಷ್ಣ ಹಾಗೂ ಆನಂದ್ ಕುಮಾರ್ ನೇತೃತ್ವದ R K & A k ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣದ, ಕಲಾವಿದೆಯಾಗಿ ಜನಪ್ರಿಯರಾಗಿರುವ ರಂಜನಿ ರಾಘವನ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಹಾಗೂ “ನೆನಪಿರಲಿ” ಪ್ರೇಮ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಡಿಡಿ ಢಿಕ್ಕಿ”.

ಗೋಲ್ಡನ್ ಸ್ಟಾರ್ ಗಣೇಶ್ ಅವರ ಪುತ್ರ ಮಾಸ್ಟರ್ ವಿಹಾನ್ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ “ಡಿ ಡಿ ಢಿಕ್ಕಿ” ಚಿತ್ರತಂಡ ಸಹ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶುಭಾಶಯ ತಿಳಿಸಿದೆ.

ಲೆಜೆಂಡ್ ಇಳಯರಾಜ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಸುಧಾಕರ್ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನವಿರುವ “ಡಿಡಿ ಢಿಕ್ಕಿ” ಚಿತ್ರಕ್ಕೆ ತರುಣ್ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Exit mobile version