“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ “ತುಂಟ ಮನದ ಮಾಯೆ ನೀನು” ಎಂಬ ರೊಮ್ಯಾಂಟಿಕ್ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು.
ಕನ್ನಡದ ಮೊದಲ ಪತ್ರಿಕಾ ಪ್ರಚಾರಕರ್ತ ಡಿ.ವಿ.ಸುಧೀಂದ್ರ ನೇತೃತ್ವದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ಹಾಗೂ ಸುನೀಲ್ ಸುಧೀಂದ್ರ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಿಡುಗಡೆಯಾದ ತಕ್ಷಣದಿಂದಲೇ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಇನ್ನೂ ನಮ್ಮ ಚಿತ್ರ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ನಿಖಿತಾಸ್ವಾಮಿ, ಸುಶ್ಮಿತಾ, ಹರೀಶ್ ರಾಜ್, ಶ್ರೀನಿವಾಸಮೂರ್ತಿ, ರಮೇಶ್ ಭಟ್, ತುಕಾಲಿ ಸಂತೋಷ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾನೇ ಈ ಚಿತ್ರಕ್ಕೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದೇನೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು ನಾಯಕ ಪ್ರಥಮ್.
“ಫಸ್ಟ್ ನೈಟ್ ವಿತ್ ದೆವ್ವ” ನನ್ನ ನಿರ್ದೇಶನದ ಐದನೇ ಚಿತ್ರ ಹಾಗೂ ಛಾಯಾಗ್ರಹಣದ ಐವತ್ತೆರಡನೇ ಚಿತ್ರ. ಎಲ್ಲರೂ ಈ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಪಿ.ವಿ.ಆರ್ ಸ್ವಾಮಿ ತಿಳಿಸಿದರು.
ನನ್ನ ಪಾತ್ರ ಕೂಡ ಚೆನ್ನಾಗಿದೆ. ನಾಯಕನ ಜೊತೆಗ ಸಾಗುವ ಪಾತ್ರ ಎಂದು ತುಕಾಲಿ ಸಂತೋಷ್ ಹೇಳಿದರು.
