ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ

Untitled design 2025 10 22t134016.463

ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ “ಗ್ರೀನ್” ಚಿತ್ರ ಈ ವಾರ ತೆರೆಗೆ ಬರುತ್ತಿದೆ. ನಿಶಾಂತ್ ಎನ್ ಎನ್ ಒಡೆತನದ ಗುನಾದ್ಯ ಪ್ರೊಡಕ್ಷನ್ಸ್ “ಗ್ರೀನ್” ಚಿತ್ರವನ್ನು ತೆರೆಗೆ ತರಲು ಬೆನ್ನೆಲುಬಾಗಿ ನಿಂತಿದೆ.

ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜೊತೆಗೆ ಪ್ರಶಂಸೆಯನ್ನು ಈ ಚಿತ್ರ ಪಡೆದುಕೊಂಡಿದೆ.

ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಆರ್.ಜೆ.ವಿಕ್ಕಿ, ವಿಶ್ವನಾಥ್ ಮಾಂಡಲಿಕ, ಶಿವ ಮಂಜು,‌ ಡಿಂಪಿ ಫದ್ಯಾ ಹಾಗೂ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಕೆ.ಮಧುಸೂದನ್ ಛಾಯಾಗ್ರಹಣ ಹಾಗೂ ಶಕ್ತಿ ಅವರ ಸಂಗೀತ ನಿರ್ದೇಶನವಿದೆ.

ಗ್ರೀನ್ ಒಂದು ಮನೋವೈಜ್ಞಾನಿಕ ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರವಾಗಿದ್ದು, ಇದು ವೀಕ್ಷಕರನ್ನು ಮಾನವ ಮನಸ್ಸಿನ ಆಳಕ್ಕೆ ಕರೆದೊಯ್ಯುತ್ತದೆ. ವಿಭಿನ್ನ ಕಥಾಹಂದರ ಹೊಂದಿರುವ “ಗ್ರೀನ್” ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ.

Exit mobile version