• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಚಿ ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ನಟಿ ಹರ್ಷಿಕಾ ಪೂಣಚ್ಛ

ಶೋಷಿತ ಹೆಣ್ಣುಮಕ್ಕಳ ಕುರಿತಾದ "ಚಿ ಸೌಜನ್ಯ" ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 2:14 pm
in ಸಿನಿಮಾ
0 0
0
Untitled design 2025 03 20t141205.347

ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಅಷ್ಟೇ ಅಲ್ಲದೆ ಉತ್ತಮ ಸಾಮಾಜಿಕ ಕಾರ್ಯಗಳಿಂದಲೂ ಗುರುತಿಸಿಕೊಂಡಿರುವ ನಟಿ ಹರ್ಷಿಕಾ ಪೂಣಚ್ಛ ಈಗ ನಿರ್ದೇಶಕಿಯಾಗುತ್ತಿದ್ದಾರೆ. ಕನ್ನಡದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರವಿರುವ ನಿರ್ದೇಶಕಿಯರ ಸಾಲಿಗೆ ಹರ್ಷಿಕಾ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗೆ ಹರ್ಷಿಕಾ ಪೂಣಚ್ಛ ಅವರು ನಿರ್ದೇಶಿಸುತ್ತಿರುವ, ಕಂಸಾಳೆ ಫಿಲಂಸ್ ಹಾಗೂ ಭುವನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಧು ಮರಿಸ್ವಾಮಿ ಮತ್ತು ಭುವನ್ ಪೊನ್ನಣ್ಣ ನಿರ್ಮಿಸುತ್ತಿರುವ, ಬಹುಭಾಷಾ ನಟ ಕಿಶೋರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ನಡೆಯಿತು.

RelatedPosts

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!

ADVERTISEMENT
ADVERTISEMENT

ದೇಶದಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಹೆಣ್ಣುಮಕ್ಕಳ ಶೋಷಣೆ ಕುರಿತು ಜಾಗೃತಿ ಮೂಡಿಸುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ “ಚಿ.ಸೌಜನ್ಯ” ಎಂದು ಹೆಸರಿಡಲಾಗಿದೆ. “ಒಂದು ಹೆಣ್ಣಿನ ಕಥೆ” ಎಂಬ ಅಡಿಬರಹ ಈ ಚಿತ್ರಕ್ಕಿದೆ. ಶೀರ್ಷಿಕೆ ಅನಾವರಣದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಭಾರತದಲ್ಲಿ ಪ್ರತಿವರ್ಷ ಮೂವತ್ತಾರು ಸಾವಿರಕ್ಕೂ ಅಧಿಕ ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. ಸರಾಸರಿ ದಿನಕ್ಕೆ ನೂರು ಮಹಿಳೆಯರಂತೆ. ಈ ಅತ್ಯಾಚಾರಗಳ ಬಗ್ಗೆ ಕೇಸ್ ದಾಖಲಾಗುತ್ತದೆ. ವಿಚಾರಣೆ ನಡೆಯುತ್ತದೆ. ಆದರೆ ಆ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿರುವುದು ತೀರ ಕಡಿಮೆ. ನಾನು ಹಾಗೂ ಹರ್ಷಿಕಾ ಅವರು ಕೂಡ ಇಂತಹ ಘಟನೆ ಬಗ್ಗೆ ನಮಗೆ ತಿಳಿದಾಗ ಅ ಸ್ಥಳಕ್ಕೆ ಹೋಗಿ ಸಾವಿರಾರು ಜನರೊಂದಿಗೆ ಹೋರಾಟ ಮಾಡಿದ್ದೇವೆ. ಈ ವಿಷಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸಲು ಸಿನಿಮಾ ಉತ್ತಮವಾದ ಮಾಧ್ಯಮ ಅನಿಸಿತು. ಹಾಗಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಸಮಾಜಕ್ಕೆ ಉತ್ತಮ ಸಂದೇಶವಿರುವ ಈ ಚಿತ್ರವನ್ನು ನಾನು ಹಾಗೂ ಮಧು‌ ಮರಿಸ್ವಾಮಿ ಅವರು ಜಂಟಿಯಾಗಿ ನಿರ್ಮಿಸುತ್ತಿದ್ದೇವೆ. ಈ ಕಥೆಯನ್ನು ಕಿಶೋರ್ ಅವರ ಬಳಿ ಹೇಳಿದಾಗ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು ಎಂದು ಭುವನ್ ಪೊನ್ನಣ್ಣ ತಿಳಿಸಿದರು.

ಇದು ನಮ್ಮ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರ. ಭುವನ್ ಎಂಟರ್ಟೈನ್ಮೆಂಟ್ ಸಹ ನಿರ್ಮಾಣಕ್ಕೆ ನಮ್ಮ ಸಂಸ್ಥೆಯ ಜೊತೆಯಾಗಿದೆ. ಹರ್ಷಿಕಾ ಪೂಣಚ್ಛ ಅವರು ನಿರ್ದೇಶಿಸುತ್ತಿರುವ ಈ ಚಿತ್ರ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಕಿಶೋರ್, ಉಗ್ರಂ ಮಂಜು, ಕಾಕ್ರೋಜ್ ಸುಧೀ , ಯಶ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ ಎಂದರು ನಿರ್ಮಾಪಕ ಮಧು ಮರಿಸ್ವಾಮಿ.

ಇಷ್ಟು ದಿನ ನಟಿಯಾಗಿ ಗುರುತಿಸಿಕೊಂಡಿದ್ದೆ. ಚಿತ್ರವನ್ನು ನಿರ್ಮಾಣ‌ ಮಾಡಬೇಕು ಎಂಬ ಹಂಬಲವಿತ್ತು. ಆದರೆ ನಿರ್ದೇಶನ ಮಾಡುತ್ತೀನಿ ಅಂತ ಅಂದುಕೊಂಡಿರಲಿಲ್ಲ ಎಂದು ಮಾತನಾಡಿದ ಹರ್ಷಿಕಾ ಪೂಣಚ್ಛ, ಹೆಣ್ಣುಮಕ್ಕಳ ಶೋಷಣೆಯ ಬಗ್ಗೆ ನಾನು ಹಾಗೂ ಭುವನ್ ಸಾಕಷ್ಟು ಹೋರಾಟ ಮಾಡಿದ್ದೇವೆ. ಇಂತಹ ಸಾಮಾಜಿಕ ಕಳಕಳಿಯುಳ್ಳ ಚಿತ್ರವನ್ನು ಮಾಡಬೇಕೆಂದು ಆಸೆಯಿತ್ತು. ಹಾಗಾಗಿ ನನ್ನ ಪತಿ ಭುವನ್ ಮತ್ತು ನಿರ್ಮಾಪಕ ಮಧು ಮರಿಸ್ವಾಮಿ ಅವರು ಹೆಣ್ಣುಮಕ್ಕಳ ನೋವು ಗಂಡುಮಕ್ಕಳಿಗಿಂತ ಹೆಣ್ಣುಮಕ್ಕಳಿಗೆ ಜಾಸ್ತಿ ಗೊತ್ತಿರುತ್ತದೆ. ಹಾಗಾಗಿ ಈ ಚಿತ್ರವನ್ನು ನೀವೇ ನಿರ್ದೇಶನ ಮಾಡಿ ಎಂದರು. ಇದು ಯಾವುದೇ ಒಂದು ಘಟನೆಯ ಕುರಿತಾದ ಚಿತ್ರವಲ್ಲ. ದೇಶದಲ್ಲಿ ನಡೆದಿರುವ ಇಂತಹ ಅಮಾನುಷ ಘಟನೆಗಳನ್ನಿಟ್ಟುಕೊಂಡು ಮಾಡುತ್ತಿರುವ ಚಿತ್ರ.

ನಮ್ಮ ಚಿತ್ರದ ನಾಯಕಿ ಹೆಸರು ಸೌಜನ್ಯ ಅಷ್ಟೇ. ಇನ್ನೂ ಈ ಚಿತ್ರದ ಕಥೆ ಮಾಡಿಕೊಂಡ ತಕ್ಷಣ ಪ್ರಮುಖಪಾತ್ರಕ್ಕೆ ನಮಗೆ ತಕ್ಷಣ ಅನಿಸಿದು ಕಿಶೋರ್ ಅವರು. ಕಥೆ ಕೇಳಿದ ತಕ್ಷಣ ನಟಿಸಲು ಕಿಶೋರ್ ಅವರು ಒಪ್ಪಿಕೊಂಡರು. ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು, ಕಾಕ್ರೋಜ್ ಸುಧೀ, ಯಶ್ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇಂದು ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಮಾತ್ರ ಬಿಡುಗಡೆ ಮಾಡಿದ್ದೇವೆ. ಚಿತ್ರೀಕರಣ ಆರಂಭವಾಗಲು ಇನ್ನೆರಡು ತಿಂಗಳು ಬೇಕು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ. ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು‌.

ನಾವು ದೇಶದಲ್ಲಿ ಇಂತಹ ಎಷ್ಟೇ ಘಟನೆಗಳು ನಡೆದರೂ ನಮ್ಮ ಮನೆಯದಲ್ಲ ಎನ್ನುವ ರೀತಿಯಲ್ಲಿ ಇರುತ್ತೇವೆ. ಆದರೆ ಆಕೆ ಕೂಡ ಒಬ್ಬರ ಮಗಳು, ಒಬ್ಬರ ಸಹೋದರಿ ಆಗಿರುತ್ತಾರೆ. ಆ ನಿಟ್ಟಿನಲ್ಲಿ ನಾವು ಯೋಚಿಸಬೇಕು. ಇನ್ನೂ ಇಂತಹ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ ಅದು ಬೇಗ ಜನರಿಗೆ ತಲಪುತ್ತದೆ. ಇಂತಹ ವಿಷಯವನ್ನಿಟ್ಟುಕೊಂಡು ಚಿತ್ರ ನಿರ್ಮಾಣ ಮಾಡುತ್ತಿರುವ ನಿರ್ಮಾಪಕರಿಗೆ ಹಾಗೂ ಮೊದಲ ಬಾರಿಯ ನಿರ್ದೇಶನಕ್ಕೆ ಸಾಮಾಜಿಕ ಕಳಕಳಿಯುಳ್ಳ ಕಥಾವಸ್ತು ಆರಿಸಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ನಟ ಕಿಶೋರ್ ತಿಳಿಸಿದರು.

ನಿರ್ಮಾಪಕ ಮಧು ಅವರು ಕರೆ ಮಾಡಿ ಈ ಚಿತ್ರದಲ್ಲಿ ನಟಿಸಬೇಕೆಂದು ಹೇಳಿದರು. ಇಂತಹ ಸಾಮಾಜಿಕ ಕಳಕಳಿಯುಳ್ಳ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಹೆಮ್ಮೆಯಿದೆ ಎಂದರು ನಟರಾದ‌ ಉಗ್ರಂ ಮಂಜು ಹಾಗೂ ಕಾಕ್ರೋಜ್ ಸುಧೀ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ
    August 26, 2026 | 0
  • Untitled design (21)
    ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್
    August 26, 2026 | 0
  • Untitled design 2026 08 26T141642.891
    ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್
    August 26, 2026 | 0
  • Image 3c1ae891
    ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!
    August 26, 2026 | 0
  • Image f256a0e5 (1)
    ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version