ಕನ್ನಡ ಚಿತ್ರರಂಗಕ್ಕೆ ಬೆಲ್ ಬಾಟಮ್ ನಂತಹ ಸೂಪರ್ ಹಿಟ್ ಸಿನಿಮಾ ಕೊಟ್ಟಿರುವ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಏಳು ವರ್ಷಗಳ ಗ್ಯಾಪ್ ಬಳಿಕ ತಮ್ಮದೇ ಗೋಲ್ಡನ್ ಹಾರ್ಸ್ ಬ್ಯಾನರ್ ನಡಿ ಹುಬ್ಬಳ್ಳಿ ಹಂಟರ್ಸ್ ಎಂಬ ಚಿತ್ರ ನಿರ್ಮಾಣಕ್ಕೆ ಸಂತೋಷ್ ಇಳಿದಿದ್ದಾರೆ.
ಹೀರೋ ಯಾರು?
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ ಹುಬ್ಬಳ್ಳಿ ಹಂಟರ್ಸ್ ಸಿನಿಮಾದ ನಾಯಕ. ಮಹಾನಟಿ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ. ಸಿನಿಮಾದ ಟೈಟಲ್ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲದೇ ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಸಮರ್ಥ್ ಬಿ ಕಡ್ಕೋಲ್ ಸಂಭಾಷಣೆ ಜವಾಬ್ದಾರಿ ನಿಭಾಯಿಸಿದ್ದಾರೆ.
ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಹುಬ್ಬಳ್ಳಿ ಹಂಟರ್ಸ್ ಮೂಲಕ ಸಮರ್ಥ್ ಬಿ ಕಡ್ಕೋಳ್ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಬಡಿಸಲು ಹೊರಟಿದ್ದಾರೆ. ಇದೇ ತಿಂಗಳ 26ರಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.
ಫೆಬ್ರವರಿ 13ಕ್ಕೆ ಆರ್.ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರ ರಿಲೀಸ್
ಆರ್ . ಎಸ್. ಪ್ರೊಡಕ್ಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ “ಯುವರಾಜ”, “ಕಂಠಿ”, “ಭರ್ಜರಿ”, “ಬಹದ್ದೂರ್ ” ಸೇರಿದಂತೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಆರ್. ಶ್ರೀನಿವಾಸ್ ಅವರು ನಿರ್ಮಿಸಿರುವ ಮತ್ತೊಂದು ಬಹುನಿರೀಕ್ಷಿತ ಚಿತ್ರ “ಕಾಟನ್ ಪೇಟೆ ಗೇಟ್” ಫೆಬ್ರವರಿ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಆಕ್ಷನ್, ಕಾಮಿಡಿ, ಸೆಂಟಿಮೆಂಟ್ ಹೀಗೆ ಎಲ್ಲಾ ರೀತಿಯ ಮನರಂಜನಾತ್ಮಕ ಅಂಶಗಳನ್ನು ಒಳಗೊಂಡಿರುವ ಈ ಚಿತ್ರವನ್ನು ವೈ. ರಾಜಕುಮಾರ್ ಅವರು ನಿರ್ದೇಶಿಸಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರವು ಅದ್ದೂರಿಯಾಗಿ ನಿರ್ಮಾಣವಾಗಿದೆ.
ಯೋಗಿ ರೆಡ್ಡಿ ಅವರ ಛಾಯಾಗ್ರಹಣ, ಎನ್. ಎಸ್ ಪ್ರಸು ಅವರ ಸಂಗೀತ ಸಂಯೋಜನೆ, ಚೇತನ್ ಕುಮಾರ್ ಅವರ ಸಾಹಿತ್ಯ, ಶಿವ ಸರ್ವಣಿ ಅವರ ಸಂಕಲನವಿರುವ ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿ ವೇಣುಗೋಪಾಲ್, ಯಶ್ವನ್, ಸುರಭಿ ತಿವಾರಿ, ಅನುಶಾ ಜೈನ್, ಸುಧೀಕ್ಷಾ, ಕಿಸ್ಲೆ ಚೌಧರಿ , ಪಾರ್ಥು, 8pm ಸಾಯಿಕುಮಾರ್, ರಘು, ಕಟ್ಟಪ್ಪ. ಮುಂತಾದವರು ನಟಿಸಿದ್ದಾರೆ.
