ಪ್ರೀಮಿಯರ್‌ನಿಂದಲೇ ಕೋಟ್ಯಂತರ ರೂಪಾಯಿ ಬಾಚಿದ ಕಾಂತಾರ ಚಾಪ್ಟರ್ 1..!

Untitled design 2025 10 02t122413.598

ಕಾಂತಾರ-ಚಾಪ್ಟರ್ 1 ಚಿತ್ರ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. 2022ರ ಅಕ್ಟೋಬರ್ ತಿಂಗಳಲ್ಲಿ ಕಾಂತಾರ ಚಿತ್ರ ಬಿಡುಗಡೆಯಾಗಿದ್ದಾಗ ಬಹುತೇಕರು ಮೆಚ್ಚಿಕೊಂಡು ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿತ್ತು.

ಇದೇ ಉತ್ಸಾಹದಲ್ಲಿ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಮಾಡುವ ಘೋಷಣೆ ಮಾಡಿದಾಗ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಕೂಡ ಕೈಜೋಡಿಸಿತು. ‘ಕಾಂತಾರ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಬಗ್ಗೆ ರಿಷಬ್ ಹೇಳಿದ್ದರು. ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲೂ ದೈವದ ವಿಚಾರವೇ ಉಲ್ಲೇಖ. ಇಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ.

‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ, ಕ್ರಿ.ಶ.4-5 ಶತಮಾನದ ಕದಂಬರ ಆಳ್ವಿಕೆಯ ಸಮಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಒಂದು ಮಾಯಾವಿ ಲೋಕವನ್ನು ನೋಡುಗನ ಮುಂದಿರಿಸಿದ್ದಾರೆ.ಕಾಂತಾರ ಚಾಪ್ಟರ್ 1 ಸಿನಿಮಾ ಅಕ್ಟೋಬರ್ 2ರಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ. ದುಬಾರಿ ಟಿಕೆಟ್ ಬೆಲೆ ಮತ್ತು ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದುಬಂದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ಭಾರಿ ಕಲೆಕ್ಷನ್ ಮಾಡುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಇಂದು ಪ್ರೇಕ್ಷಕರ ಅಭಿಪ್ರಾಯ, ವಿಮರ್ಶೆಗಳೇ ತುಂಬಿಹೋಗಿವೆ.ಕಳೆದ ರಾತ್ರಿ ಬೆಂಗಳೂರು ಸೇರಿದಂತೆ ಹಲವೆಡೆ ಪ್ರೀಮಿಯರ್ ಶೋ ಇಡಲಾಗಿದ್ದು, ಅದರಿಂದಲೇ ಕೋಟಿ ರೂಪಾಯಿ ಬಾಚಲಾಗಿದೆ. ‘ಕಾಂತಾರ ಚಾಪ್ಟರ್ ’ ಸಿನಿಮಾಗೆ ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಾಯಕರೂ ಆಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Exit mobile version